• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಎಸ್‌ಐಆರ್ ಮುಂದಿಟ್ಟುಕೊಂಡು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಶಾಸಕ ಸುನೀಲ್ ಕುಮಾರ್ ಗಂಭೀರ ಆರೋಪ.

ಎಸ್‌ಐಆರ್ ಮುಂದಿಟ್ಟುಕೊಂಡು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಶಾಸಕ ಸುನೀಲ್ ಕುಮಾರ್ ಗಂಭೀರ ಆರೋಪ.

ಚುನಾವಣಾ ಆಯೋಗವು ಎಸ್‌ಐಆರ್ ಕುರಿತು ಹಲವು ಬಾರಿ ಸ್ಪಷ್ಟನೆ ನೀಡಿದ್ದರೂ, ಕಾಂಗ್ರೆಸ್ ನಾಯಕರು ಮಾತ್ರ ದೇಶಾದ್ಯಂತ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Reported ByManjunath NaragundEdited ByManjunath Naragund
Published: Oct 29, 2026, 04:17 PM IST|Updated: Oct 29, 2026, 04:25 PM IST
joinshare
ಎಸ್‌ಐಆರ್ ಮುಂದಿಟ್ಟುಕೊಂಡು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಶಾಸಕ ಸುನೀಲ್ ಕುಮಾರ್ ಗಂಭೀರ ಆರೋಪ.
Image Credit: Sunil Kumar

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
2011ರ ಘಟನೆ, 2023ರಲ್ಲಿ ಶೂಟಿಂಗ್ : ಸಿಸಿಬಿ "ಸ್ಟಿಂಗ್‌ ಆಪರೇಷನ್‌" ತನಿಖೆಯಲ್ಲಿ ಮಾಜಿ ಸಿಎಂಗೆ ಕ್ಲೀನ್​ಚಿಟ್

2011ರ ಘಟನೆ, 2023ರಲ್ಲಿ ಶೂಟಿಂಗ್ : ಸಿಸಿಬಿ "ಸ್ಟಿಂಗ್‌ ಆಪರೇಷನ್‌" ತನಿಖೆಯಲ್ಲಿ ಮಾಜಿ ಸಿಎಂಗೆ ಕ್ಲೀನ್​ಚಿಟ್

2

ಕಿಚನ್ ಸಿಂಕ್‌ನಲ್ಲಿ ನೀರು ನಿಲ್ಲುತ್ತಿದೆಯೇ? ಪ್ಲಂಬರ್ ಕರೆಯುವ ಮುನ್ನ ಈ ಟ್ರಿಕ್‌ ಟ್ರೈ ಮಾಡಿ!

3

ಜೈಲಿನಿಂದಲೇ ಧನ್ವೀರ್‌ ವಿರುದ್ಧ "ತಡೆಯಾಜ್ಞೆ ಅಸ್ತ್ರ" ಪ್ರಯೋಗಿಸಿದ ಡಿ ಬಾಸ್‌.! ಸಂಚಲನ ಸೃಷ್ಟಿಸಿದ ದರ್ಶನ್‌ ನಡೆ

4

ಕಬ್ಬಿನ ದರ ಏರಿಕೆಗಾಗಿ ಮಂಡ್ಯದಲ್ಲಿ ರೈತರ ರಣಕಹಳೆ.. ಮೈಶುಗರ್ ಸಕ್ಕರೆ ಗೋದಾಮಿಗೆ ಅನ್ನದಾತರ ಮುತ್ತಿಗೆ

5

ಗದಗದ ಮರೆತುಹೋದ ಕ್ರಿಕೆಟ್ ಪ್ರತಿಭೆ: ಗ್ರೆಗೊರಿ ಡಿಮಾಂಟ್

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾರ್ಕಳದ ಶಾಸಕ ಸುನೀಲ್ ಕುಮಾರ್ ಅವರು, ಎಸ್‌ಐಆರ್ (SIR) ಪ್ರಕ್ರಿಯೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷವು ದೇಶದಲ್ಲಿ ವ್ಯವಸ್ಥಿತವಾಗಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ ಎಂದು ತೀವ್ರವಾಗಿ ಕಿಡಿಕಾರಿದರು.

ಚುನಾವಣಾ ಆಯೋಗವು ಎಸ್‌ಐಆರ್ ಕುರಿತು ಹಲವು ಬಾರಿ ಸ್ಪಷ್ಟನೆ ನೀಡಿದ್ದರೂ, ಕಾಂಗ್ರೆಸ್ ನಾಯಕರು ಮಾತ್ರ ದೇಶಾದ್ಯಂತ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ವಾತಂತ್ರ್ಯಾನಂತರ ಇದುವರೆಗೆ ಒಟ್ಟು 12 ಬಾರಿ ಎಸ್‌ಐಆರ್ ಪ್ರಕ್ರಿಯೆ ಜರುಗಿದ್ದು, ಇದರಲ್ಲಿ 10 ಬಾರಿ ಕಾಂಗ್ರೆಸ್ ಸರ್ಕಾರಗಳೇ ಅಧಿಕಾರದಲ್ಲಿದ್ದವು. ರಾಜ್ಯ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಈ ಕುರಿತು ಸಮಗ್ರ ಮಾಹಿತಿ ನೀಡಿದಾಗ ಯಾವುದೇ ಚಕಾರ ಎತ್ತದ ಕಾಂಗ್ರೆಸ್, ಈಗ ರಾಜಕೀಯ ಲಾಭಕ್ಕಾಗಿ ವಿವಾದ ಸೃಷ್ಟಿಸುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದರು.ಮೂರು ಬಾರಿ ಸತತವಾಗಿ ಜನರಿಂದ ಆಯ್ಕೆಯಾದ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಅರಾಜಕತೆ ಸೃಷ್ಟಿಸಲು ಹೊರಟಿರುವ ಕಾಂಗ್ರೆಸ್, ಇಂದು ದೇಶದ ಜನರ ದೃಷ್ಟಿಯಲ್ಲಿ ಸಂಪೂರ್ಣ 'ರಿಜೆಕ್ಟ್ ಆದ ಪಾರ್ಟಿ'ಯಾಗಿದೆ ಎಂದರು.

ತಾನು ಗೆದ್ದರೆ ಅದು ಪ್ರಜಾಪ್ರಭುತ್ವದ ಗೆಲುವು, ಸೋತರೆ ಇವಿಎಂ ದೋಷ ಅಥವಾ ವೋಟ್ ಚೋರಿ ಎನ್ನುವುದು ಕಾಂಗ್ರೆಸ್‌ನ ನಿಲುವಾಗಿದ್ದು, ಇದು ಆ ಪಕ್ಷದ ಮಾನಸಿಕ ಅಸ್ವಸ್ಥತೆಯನ್ನು ತೋರುತ್ತದೆ ಎಂದು ವ್ಯಂಗ್ಯವಾಡಿದರು. ಇನ್ನು ಎರಡು ಚುನಾವಣೆಗಳಲ್ಲಿ ಸೋತರೆ ಮುಂದೊಂದು ದಿನ ಮತದಾರರೇ ಸರಿ ಇಲ್ಲ ಎಂದು ಹೇಳಿದರೂ ಆಶ್ಚರ್ಯವಿಲ್ಲ ಎಂದರು. ಕಾಂಗ್ರೆಸ್‌ನ ಈ ದುರಾಡಳಿತ ಮತ್ತು ಅಪಪ್ರಚಾರದ ಮುವಾಡವನ್ನು ಕಳಚಲು ಮತ್ತು ಜನಜಾಗೃತಿ ಮೂಡಿಸಲು ಬಿಜೆಪಿಯಿಂದ ನವೆಂಬರ್ 1 ರಿಂದ 30ರವರೆಗೆ ಒಂದು ತಿಂಗಳ ಕಾಲ 'ಅರಾಜಕತೆ ಹಠಾವೋ ಅಭಿಯಾನ' ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಪಾದಯಾತ್ರೆಗಳು, ವಿಚಾರವಂತರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಹೆಸರಿನಲ್ಲಿ ಕಳೆದ 7-8 ತಿಂಗಳಿಂದ ಯೋಜನೆಗಳನ್ನು ಸ್ಥಗಿತಗೊಳಿಸಿರುವ ಸರ್ಕಾರಕ್ಕೆ, ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಮಾಡುವುದನ್ನು ಪ್ರಶ್ನಿಸುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಶಾಸಕ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದರು.
 

Add Zee News as a Preferred Source
TAGS:
Kannada News