• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಸಿಎಂ ಡಿ.ಕೆ.ಶಿವಕುಮಾರ್ ಗೆ ಅಧಿಕಾರದ ಅಮಲು ನೆತ್ತಿಗೇರಿದೆ: ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗುಡುಗು!

ಸಿಎಂ ಡಿ.ಕೆ.ಶಿವಕುಮಾರ್ ಗೆ ಅಧಿಕಾರದ ಅಮಲು ನೆತ್ತಿಗೇರಿದೆ: ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗುಡುಗು!

"ನಾನೇ ಮುಂದಿನ ಮುಖ್ಯಮಂತ್ರಿಯಾಗುತ್ತೇನೆ ಎಂಬ ಹುಮ್ಮಸ್ಸಿನಲ್ಲಿರುವ ಡಿಕೆಶಿ, ಯಾರು ಏನೇ ಬೇಡಿಕೆ ಇಟ್ಟರೂ 'ಎಸ್' ಎನ್ನುತ್ತಿದ್ದಾರೆ. ಆದರೆ ರಾಜ್ಯದ ಗುತ್ತಿಗೆದಾರರ ಸಂಘದವರು 38 ಸಾವಿರ ಕೋಟಿ ರೂಪಾಯಿ ಬಿಲ್ ಬಾಕಿ ಇದೆ ಎಂದು ಗೋಳಾಡುತ್ತಿದ್ದರೂ, ಅದರ ಬಗ್ಗೆ ಡಿಕೆಶಿ ತೀರಾ ಅಸಡ್ಡೆಯಿಂದ ಮಾತನಾಡುತ್ತಿದ್ದಾರೆ.

Reported ByManjunath NaragundEdited ByManjunath Naragund
Published: Oct 01, 2026, 05:00 PM IST|Updated: Oct 01, 2026, 05:08 PM IST
joinshare
ಸಿಎಂ ಡಿ.ಕೆ.ಶಿವಕುಮಾರ್ ಗೆ ಅಧಿಕಾರದ ಅಮಲು ನೆತ್ತಿಗೇರಿದೆ: ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗುಡುಗು!
Image Credit: Jagadish Shettar

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದ ಹಿಡಿತ ಸಂಪೂರ್ಣ ಕೈತಪ್ಪಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರದ ಅಮಲು ನೆತ್ತಿಗೇರಿದೆ ಎಂದು ಬೆಳಗಾವಿಯಲ್ಲಿ ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ದುರಾಡಳಿತ, ಸಚಿವರ ನಡುವಿನ ಒಳಪೋರು ಮತ್ತು ಮಠಾಧೀಶರ ಕುರಿತು ಡಿಕೆಶಿ ನೀಡಿದ್ದಾರೆನ್ನಲಾದ ಹೇಳಿಕೆಗಳನ್ನು ಕಟುವಾಗಿ ಟೀಕಿಸಿದರು.

"ನಾನೇ ಮುಂದಿನ ಮುಖ್ಯಮಂತ್ರಿಯಾಗುತ್ತೇನೆ ಎಂಬ ಹುಮ್ಮಸ್ಸಿನಲ್ಲಿರುವ ಡಿಕೆಶಿ, ಯಾರು ಏನೇ ಬೇಡಿಕೆ ಇಟ್ಟರೂ 'ಎಸ್' ಎನ್ನುತ್ತಿದ್ದಾರೆ. ಆದರೆ ರಾಜ್ಯದ ಗುತ್ತಿಗೆದಾರರ ಸಂಘದವರು 38 ಸಾವಿರ ಕೋಟಿ ರೂಪಾಯಿ ಬಿಲ್ ಬಾಕಿ ಇದೆ ಎಂದು ಗೋಳಾಡುತ್ತಿದ್ದರೂ, ಅದರ ಬಗ್ಗೆ ಡಿಕೆಶಿ ತೀರಾ ಅಸಡ್ಡೆಯಿಂದ ಮಾತನಾಡುತ್ತಿದ್ದಾರೆ. ಹಿಂದಿನ ಸರ್ಕಾರದ ಬಿಲ್ ಬಾಕಿ ಬಗ್ಗೆ ಯಡಿಯೂರಪ್ಪ ಅವರನ್ನು ಹೋಗಿ ಕೇಳಿ ಎಂದು ಉಡಾಫೆ ಉತ್ತರ ನೀಡುತ್ತಿರುವುದು ಅವರ ಜವಾಬ್ದಾರಿ ರಹಿತ ನಡವಳಿಕೆಗೆ ಸಾಕ್ಷಿ" ಎಂದು ಶೆಟ್ಟರ್ ಕಿಡಿಕಾರಿದರು.

"ಹಿಂದಿನ ಸರ್ಕಾರ ಸಾಲ ಮಾಡಿದೆ ಎಂಬ ನೆಪ ಹೇಳುವುದಿದ್ದರೆ, ನೀವು ಅಧಿಕಾರ ವಹಿಸಿಕೊಳ್ಳುವಾಗಲೇ 'ಅವರು ಸಾಲ ಮಾಡಿದ್ದಾರೆ, ನಾನು ಸಿಎಂ ಅಥವಾ ಡಿಸಿಎಂ ಆಗುವುದಿಲ್ಲ' ಎಂದು ಹೇಳಬೇಕಿತ್ತು. ಅದನ್ನು ಬಿಟ್ಟು ಈ ರೀತಿ ಅಸಡ್ಡೆಯಿಂದ ವಿತಂಡವಾದ ಮಾಡುವುದನ್ನು ತಕ್ಷಣ ನಿಲ್ಲಿಸಿ" ಎಂದು ಎಚ್ಚರಿಸಿದರು.

ಇದೇ ವೇಳೆ ಆಡಳಿತಾರೂಢ ಕಾಂಗ್ರೆಸ್‌ನ ಆಂತರಿಕ ಕಲಹದ ಬಗ್ಗೆ ಮಾತನಾಡಿದ ಅವರು, "ಸಚಿವ ಎಚ್.ಕೆ. ಪಾಟೀಲ್ ಅವರು ರಾಜೀನಾಮೆ ನೀಡುತ್ತೇನೆ ಎಂದಿದ್ದು ಬರಗಾಲದ ಕಾರಣಕ್ಕಲ್ಲ, ಬದಲಿಗೆ ಅವರಿಗೆ ಸಚಿವ ಸ್ಥಾನ ಅಥವಾ ಸೂಕ್ತ ಪ್ರಾಶಸ್ತ್ಯ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಬೆದರಿಕೆ ಹಾಕುತ್ತಿದ್ದಾರೆ. ಆದರೆ, ಇದೆಲ್ಲವನ್ನೂ ಸಿದ್ದರಾಮಯ್ಯ ಸೌಮ್ಯವಾಗಿ ಕುಳಿತು ನೋಡುತ್ತಿದ್ದಾರೆ. ಕಾದು ನೋಡಿ ಸೂಕ್ತ ಸಮಯದಲ್ಲಿ ಹೊಡೆಯುವ ಪ್ಲಾನ್ ಅನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ" ಎಂದು ರಾಜಕೀಯ ತಂತ್ರಗಾರಿಕೆಯನ್ನು ಬಿಚ್ಚಿಟ್ಟರು.

ವೀರಶೈವ ಮಠಾಧೀಶರಿಗೆ ಅಪಮಾನ - ಕ್ಷಮೆಗೆ ಆಗ್ರಹ

ಸ್ವಾಮೀಜಿಗಳ ಕಾರ್ಯಕ್ರಮದಲ್ಲಿ ಡಿಕೆಶಿ ನೀಡಿರುವ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಶೆಟ್ಟರ್, "ಮೂರು ಸಾವಿರ, ಆರು ಸಾವಿರ ಮಠಗಳು ಎಂದು ವ್ಯಂಗ್ಯವಾಗಿ ಮಾತನಾಡುವ ಮೂಲಕ ಡಿಕೆಶಿ ವೀರಶೈವ ಮಠಾಧೀಶರಿಗೆ ತೀವ್ರ ಅಪಮಾನ ಮಾಡಿದ್ದಾರೆ. 'ನೀವೆಲ್ಲಾ ನನ್ನ ರಾಯಭಾರಿಗಳಾಗಿ ನನ್ನ ಸೇವೆ ಮಾಡಬೇಕು' ಎಂದು ಸ್ವಾಮೀಜಿಗಳಿಗೆ ಹೇಳಿರುವುದು ಅವರ ದುರಹಂಕಾರವನ್ನು ತೋರಿಸುತ್ತದೆ. ಸಿಎಂ ಆಗುವ ಮುನ್ನ 'ನಿಮ್ಮ ಸೇವೆ ಮಾಡುತ್ತೇನೆ' ಎಂದವರು, ಈಗ ಅಧಿಕಾರ ಸಿಗುತ್ತಿದ್ದಂತೆ ದೊರೆಯಂತೆ ವರ್ತಿಸುತ್ತಿದ್ದಾರೆ. ನಿಮ್ಮ ಆಡಳಿತದ ವೈಫಲ್ಯ ಮುಚ್ಚಿಕೊಳ್ಳಲು ಮಠಗಳಿಗೆ ಟೀಕೆ ಮಾಡುವುದು ಸರಿಯಲ್ಲ. ನಿಮಗೇನಾದರೂ ಕನಿಷ್ಠ ಗೌರವವಿದ್ದರೆ ತಕ್ಷಣ ನಿಮ್ಮ ಆರಾಧ್ಯ ದೈವ ಅಜ್ಜಯ್ಯನ ಬಳಿ ಹೋಗಿ ಕ್ಷಮೆ ಕೇಳಿ" ಎಂದು ಆಗ್ರಹಿಸಿದರು.

ವಿಧಾನಸೌಧದಲ್ಲಿ ಉರ್ದು ಹಬ್ಬ: ತುಷ್ಟೀಕರಣದ ರಾಜಕಾರಣ:

ವಿಧಾನಸೌಧದಲ್ಲಿ ಉರ್ದು ಹಬ್ಬ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಶೆಟ್ಟರ್, "ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲು ಎಷ್ಟು ಬೇಕೋ ಅಷ್ಟು ಕೆಳಮಟ್ಟಕ್ಕೆ ಇಳಿಯಲು ಸಜ್ಜಾಗಿದೆ. ಉರ್ದು ಹಬ್ಬ ಅಥವಾ ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ಎಲ್ಲಾದರೂ ಹೊರಗೆ ಹೋಗಿ ಮಾಡಲಿ. ಅದನ್ನು ಬಿಟ್ಟು ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದಲ್ಲಿ ನಿರ್ದಿಷ್ಟ ಸಮುದಾಯದ ಕಾರ್ಯಕ್ರಮ ಮಾಡುವುದು ಕೇವಲ ಓಟ್ ಬ್ಯಾಂಕ್ ಹಾಗೂ ತುಷ್ಟೀಕರಣದ ರಾಜಕಾರಣ" ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
 

Add Zee News as a Preferred Source
TAGS:
Kannada News