• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಡಿಸಿಎಂ ಡಾ. ಜಿ. ಪರಮೇಶ್ವರ್ ಆರೋಗ್ಯದಲ್ಲಿ ದಿಢೀರ್ ಏರುಪೇರು : ಆಸ್ಪತ್ರೆಗೆ ದಾಖಲು

ಡಿಸಿಎಂ ಡಾ. ಜಿ. ಪರಮೇಶ್ವರ್ ಆರೋಗ್ಯದಲ್ಲಿ ದಿಢೀರ್ ಏರುಪೇರು : ಆಸ್ಪತ್ರೆಗೆ ದಾಖಲು

ಡಿಸಿಂ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಹೇಗಿದೆ.. ವೈದ್ಯರು ಹೇಳಿದ್ದೇನು..? ಸಂಪೂರ್ಣ ಮಾಹಿತಿ ಇಲ್ಲಿದೆ..

Written ByKrishna NK
Published: Oct 27, 2026, 03:00 PM IST|Updated: Oct 27, 2026, 03:03 PM IST
joinshare
ಡಿಸಿಎಂ ಡಾ. ಜಿ. ಪರಮೇಶ್ವರ್ ಆರೋಗ್ಯದಲ್ಲಿ ದಿಢೀರ್ ಏರುಪೇರು : ಆಸ್ಪತ್ರೆಗೆ ದಾಖಲು
Image Credit: g parameshwa

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

Trending

  • News
  • Photos
  • Videos
ನಟ ಧನ್ವೀರ್ ವಿರುದ್ಧ ಝೈದ್ ಖಾನ್ ಬೆಂಬಲಿಗರಿಂದ ದೂರು..!

ನಟ ಧನ್ವೀರ್ ವಿರುದ್ಧ ಝೈದ್ ಖಾನ್ ಬೆಂಬಲಿಗರಿಂದ ದೂರು..!

2

SIR ಅಂತಿಮ ಕರಡು ಮತದಾರರ ಪಟ್ಟಿ ಪ್ರಕಟ: ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರು ಡಿಲೀಟ್! ಮಹಿಳಾ ಮತದಾರರೇ ಅಧಿಕ

3

ಡಿಸಿಎಂ ಡಾ. ಜಿ. ಪರಮೇಶ್ವರ್ ಆರೋಗ್ಯದಲ್ಲಿ ದಿಢೀರ್ ಏರುಪೇರು : ಆಸ್ಪತ್ರೆಗೆ ದಾಖಲು

4

ಧರ್ಮಸ್ಥಳದ ಸೌಜನ್ಯಾ ಪ್ರಕರಣ ತನಿಖೆ ಚುರುಕು : ಹಿಂದಿನ ತನಿಖಾಧಿಕಾರಿಗಳು ಹಾಗೂ ಸಿಬ್ಬಂದಿಗೆ ನೋಟಿಸ್

5

ಇಸ್ತ್ರಿ ಮಾಡುವಾಗ ವಿದ್ಯುತ್ ಶಾರ್ಟ್ ಸರ್ಕ್ಯೂಟ್, 14 ವರ್ಷದ ಶಾಲಾ ಬಾಲಕ ಸಾವು

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು : ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ಮಂಗಳವಾರ ಬೆಳಿಗ್ಗೆ ದಿಢೀರ್ ಏರುಪೇರು ಉಂಟಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕಪಡುವ ಯಾವುದೇ ಅಗತ್ಯವಿಲ್ಲ ಎಂದು ವೈದ್ಯರು ಹಾಗೂ ಮುಖಂಡರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಡಾ. ಜಿ. ಪರಮೇಶ್ವರ್ ಅವರಿಗೆ ಇದ್ದಕ್ಕಿದ್ದಂತೆ ಸುಸ್ತು ಮತ್ತು ಉಸಿರುಗಟ್ಟಿದ ಅನುಭವವಾಗಿದೆ. ತಕ್ಷಣವೇ ಎಚ್ಚೆತ್ತ ಸಿಬ್ಬಂದಿ ಹಾಗೂ ಆಪ್ತರು ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ಆಗಮಿಸಿದ ವೇಳೆ ಅವರ ಹೃದಯ ಬಡಿತವು (ಹಾರ್ಟ್ ರೇಟ್) ಸಾಮಾನ್ಯಕ್ಕಿಂತ ಹೆಚ್ಚಾಗಿ, 180ಕ್ಕೂ ಅಧಿಕವಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

ಪರಮೇಶ್ವರ್ ಅವರಿಗೆ ಚಿಕಿತ್ಸೆ ನೀಡಿರುವ ವೈದ್ಯರಾದ ಡಾ. ವಿ.ಕೆ. ಶ್ರೀನಿವಾಸ್ ಮಾಧ್ಯಮಗಳಿಗೆ ಮಾಹಿತಿ ನೀಡಿ, "ಬೆಳಿಗ್ಗೆ ಆಸ್ಪತ್ರೆಗೆ ಬಂದಾಗ ಡಾ. ಪರಮೇಶ್ವರ್ ಅವರ ಹೃದಯ ಬಡಿತ ಹೆಚ್ಚಾಗಿತ್ತು. ಇದು ಸಾಮಾನ್ಯವಾಗಿ ಹೃದಯದಲ್ಲಿ ಸಣ್ಣದಾಗಿ ವಿದ್ಯುತ್ ಪ್ರವಾಹ ವ್ಯತ್ಯಯ (Short circuit-like activity) ಆದಾಗ ಉಂಟಾಗುತ್ತದೆ. ಕೆಲವರಿಗೆ ಇದು ಗೊತ್ತಾಗುವುದಿಲ್ಲ, ಆದರೆ ಸೂಕ್ಷ್ಮವಾಗಿರುವವರಿಗೆ ಅನುಭವವಾಗುತ್ತದೆ. ತಕ್ಷಣವೇ ನಾವು ಅಗತ್ಯ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಿದ್ದೇವೆ. ಸದ್ಯ ಅವರ ಇಸಿಜಿ ವರದಿ ಸಂಪೂರ್ಣ ನಾರ್ಮಲ್ ಆಗಿದ್ದು, ಅವರು ಆರೋಗ್ಯವಾಗಿದ್ದಾರೆ ಮತ್ತು ಊಟವನ್ನೂ ಮಾಡುತ್ತಿದ್ದಾರೆ. ಕೆಲವೇ ಗಂಟೆಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು" ಎಂದು ತಿಳಿಸಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ವಲಯದಲ್ಲಿ ತುಸು ಆತಂಕ ಮೂಡಿತ್ತು. ಕೂಡಲೇ ಎಚ್ಚೆತ್ತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆರೋಗ್ಯ ಸಚಿವ ಯು.ಟಿ. ಖಾದರ್ ಸೇರಿದಂತೆ ಪ್ರಮುಖ ಮುಖಂಡರು ಆಸ್ಪತ್ರೆಗೆ ಧಾವಿಸಿ, ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಆರೋಗ್ಯ ಸಚಿವರು, ಪರಮೇಶ್ವರ್ ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಸಾರ್ವಜನಿಕರಿಗೆ ಧೈರ್ಯ ತುಂಬಿದರು. ಒಟ್ಟಿನಲ್ಲಿ, ಡಿಸಿಎಂ ಪರಮೇಶ್ವರ್ ಅವರ ಆರೋಗ್ಯದಲ್ಲಿ ಉಂಟಾಗಿದ್ದ ಅಲ್ಪ ಪ್ರಮಾಣದ ಏರುಪೇರು ಈಗ ಸಂಪೂರ್ಣ ಹತೋಟಿಗೆ ಬಂದಿದ್ದು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ನಿರಾಳರಾಗುವಂತಾಗಿದೆ.

Add Zee News as a Preferred Source
TAGS:
Kannada News