• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಕನ್ನಡ ಶಾಲೆಗಳ ಸಮಸ್ಯೆ ಪರಿಹಾರಕ್ಕೆ ನವೆಂಬರ್ 1ರೊಳಗೆ ನಿರ್ಧಾರ; ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ!

ಕನ್ನಡ ಶಾಲೆಗಳ ಸಮಸ್ಯೆ ಪರಿಹಾರಕ್ಕೆ ನವೆಂಬರ್ 1ರೊಳಗೆ ನಿರ್ಧಾರ; ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ!

ಇದೇ ವೇಳೆ ಬರ ನಿರ್ವಹಣೆ ಕುರಿತು ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ಬರ ನಿರ್ವಹಣೆ ಬಗ್ಗೆ ಅಕ್ಟೋಬರ್ 29ರ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು.

Reported ByManjunath NaragundEdited ByManjunath Naragund
Published: Oct 26, 2026, 01:21 PM IST|Updated: Oct 26, 2026, 01:28 PM IST
joinshare
ಕನ್ನಡ ಶಾಲೆಗಳ ಸಮಸ್ಯೆ ಪರಿಹಾರಕ್ಕೆ ನವೆಂಬರ್ 1ರೊಳಗೆ ನಿರ್ಧಾರ; ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ!
Image Credit: Madhu Bangarappa

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ಅವಳ ಮಡಿಲಲ್ಲಿ ಕುಳಿತುಕೊಳ್ಳೋಕೆ ನಾಚಿಕೆಯಾಗಲ್ವಾ? ಬಿಗ್‌ಬಾಸ್‌ ಮನೆಯಲ್ಲಿ ಅಣ್ಣ-ತಂಗಿ ಸಂಬಂಧಕ್ಕೆ ಹೊಸ ಟ್ವಿಸ್ಟ್‌!

ಅವಳ ಮಡಿಲಲ್ಲಿ ಕುಳಿತುಕೊಳ್ಳೋಕೆ ನಾಚಿಕೆಯಾಗಲ್ವಾ? ಬಿಗ್‌ಬಾಸ್‌ ಮನೆಯಲ್ಲಿ ಅಣ್ಣ-ತಂಗಿ ಸಂಬಂಧಕ್ಕೆ ಹೊಸ ಟ್ವಿಸ್ಟ್‌!

2

ಈ ಕಾಯಿಯ ರಸ ಮಧುಮೇಹಕ್ಕೆ ಸಂಜೀವನಿ... ಸಕ್ಕರೆ ಕಾಯಿಲೆಯನ್ನು ಬುಡದಿಂದಲೇ ಗುಣಪಡಿಸುತ್ತೆ!

3

ಕನ್ನಡ ಶಾಲೆಗಳ ಸಮಸ್ಯೆ ಪರಿಹಾರಕ್ಕೆ ನವೆಂಬರ್ 1ರೊಳಗೆ ನಿರ್ಧಾರ; ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ!

4

"ಸಿದ್ದರಾಮಯ್ಯ ಪರಿಚಯವೇ ನನಗಿಲ್ಲ" : ವಿಡಿಯೋದಲ್ಲಿದ್ದ ಮಹಿಳೆ ಸಿಸಿಬಿ ಮುಂದೆ ಹೇಳಿದ್ದೇನು?

5

ಭೂಮಿ ಹುಣ್ಣಿಮೆ ಹಬ್ಬದ ಮಹತ್ವವೇನು? ಮಲೆನಾಡಿನ ರೈತರು ಭೂಮಿ ತಾಯಿಯನ್ನು ಪೂಜಿಸುವುದೇಕೆ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಶಿವಮೊಗ್ಗ: ರಾಜ್ಯದಲ್ಲಿ ಮುಚ್ಚಲ್ಪಡುತ್ತಿರುವ ಕನ್ನಡ ಮಾಧ್ಯಮ ಶಾಲೆಗಳ ರಕ್ಷಣೆ ಹಾಗೂ ಅವುಗಳ ಸಮಸ್ಯೆಗಳ ಪರಿಹಾರಕ್ಕೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವದೊಳಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಶಿಕ್ಷಣ ಕ್ಷೇತ್ರ ಹಾಗೂ ಇತ್ತೀಚಿನ ಪ್ರಮುಖ ಬೆಳವಣಿಗೆಗಳ ಕುರಿತು ಹಲವು ಸ್ಪಷ್ಟನೆಗಳನ್ನು ನೀಡಿದರು.

ಕನ್ನಡ ಶಾಲೆಗಳ ಸಮಸ್ಯೆಗಳ ಕುರಿತು ಮಾತನಾಡಿದ ಸಚಿವರು, ನವೆಂಬರ್ 1ರ ಒಳಗೆ ಸ್ಪಷ್ಟ ತೀರ್ಮಾನ ಕೈಗೊಳ್ಳಲು ಅಕ್ಟೋಬರ್ 29ರಂದು ಮುಖ್ಯಮಂತ್ರಿಗಳ ಜೊತೆ ವಿಶೇಷ ಚರ್ಚೆ ನಡೆಸಲಾಗುವುದು ಎಂದರು. ವಿವಿಧ ಇಲಾಖೆಗಳು ಪರಸ್ಪರ ಸಂಪರ್ಕ ಹೊಂದಿರುವುದರಿಂದ ಅಧಿಕಾರಿಗಳು ಈ ಕುರಿತು ಕಾತುರದಿಂದ ಕಾಯುತ್ತಿದ್ದಾರೆ. ಅಕ್ಟೋಬರ್ 14ರಂದು ನಡೆದ ಮುಷ್ಕರದ ಹಿನ್ನೆಲೆಯಲ್ಲಿ ಯಾರಿಗೆ ಏನು ಉತ್ತರ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಅಧಿಕಾರಿಗಳಿಂದ ಲೆಕ್ಕ ಕೊಡುವುದು ಕಷ್ಟವಾಗಿದ್ದು, ನನ್ನ ಬಳಿಯೇ ಕಳೆದ ಕೆಲವು ವರ್ಷಗಳಲ್ಲಿ ಮುಚ್ಚಿದ ಶಾಲೆಗಳು ಹಾಗೂ ಮುಂದಿನ ಎಲ್ಲಾ ಮಾಹಿತಿಗಳ ಲೆಕ್ಕವಿದೆ. ಕನ್ನಡ ಮಾಧ್ಯಮವನ್ನು ಉಳಿಸುವುದು ನಮ್ಮ ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವ ಶೂಗಳ ಗುಣಮಟ್ಟದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಎಲ್ಲೂ ಶೂಗಳ ಗುಣಮಟ್ಟದ ಬಗ್ಗೆ ಯಾವುದೇ ದೂರು ಬಂದಿಲ್ಲ. ಗುಣಮಟ್ಟ ಚೆನ್ನಾಗಿಯೇ ಇದ್ದು, ಕೇವಲ ಸೈಜ್‌ನಲ್ಲಿ ಮಾತ್ರ ಸ್ವಲ್ಪ ವ್ಯತ್ಯಾಸವಾಗಿದೆ. 45 ಲಕ್ಷ ಶೂಗಳನ್ನು ಸರಬರಾಜು ಮಾಡುವಾಗ ಇಂತಹ ಸಣ್ಣಪುಟ್ಟ ಸಮಸ್ಯೆಗಳು ಸಹಜ. ಸಿಇಒಗಳ ಜೊತೆ ಮಾತನಾಡಿ ಸೈಜ್ ವ್ಯತ್ಯಾಸವನ್ನು ಸರಿಪಡಿಸಲಾಗುವುದು. ಯಾವುದೋ ಮಾಧ್ಯಮದಲ್ಲಿ ಪ್ರಸಾರವಾದ ಹಳೆಯ ಫೋಟೋವನ್ನು ತಪ್ಪಾಗಿ ಬಿತ್ತರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ಪಿಯುಸಿಯಲ್ಲಿ 47,000 ಪ್ರವೇಶಗಳು ಹೆಚ್ಚಾಗಿ ಪುಸ್ತಕದ ಕೊರತೆಯಾಗಿತ್ತು, ಈಗ ಅದನ್ನು ಕ್ಯಾಬಿನೆಟ್‌ನಲ್ಲಿ ಅನುಮೋದಿಸಿ ಪುಸ್ತಕಗಳನ್ನು ಸಪ್ಲೈ ಮಾಡಲಾಗುತ್ತಿದೆ ಎಂದರು.

ಇದೇ ವೇಳೆ ಬರ ನಿರ್ವಹಣೆ ಕುರಿತು ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ಬರ ನಿರ್ವಹಣೆ ಬಗ್ಗೆ ಅಕ್ಟೋಬರ್ 29ರ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು.ರೈತರ ತೊಂದರೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ವಿಶೇಷ ಗಮನಹರಿಸಲಾಗುವುದು. ಕೇಂದ್ರ ಸರ್ಕಾರವೂ ಸಹ ಬರದ ಬಗ್ಗೆ ಹೆಚ್ಚು ಆಸಕ್ತಿ ವಹಿಸಬೇಕು.ಸೌರ ವಿದ್ಯುತ್ ಬಳಕೆ ಹೆಚ್ಚಿದ್ದರೂ, ವಿದ್ಯುತ್ ಬೇಡಿಕೆ ಕೂಡ ಬಹಳ ಹೆಚ್ಚಿದ್ದು, ಜಲವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಜೊತೆ ಕೆಲಸ ಮಾಡಿದ ಅನುಭವವನ್ನು ಹಂಚಿಕೊಂಡ ಸಚಿವರು, ಇಂದು ತಹಶೀಲ್ದಾರರ ಜೊತೆ ಸಭೆ ನಡೆಸಿ ಕ್ಷೇತ್ರದ ಇಂಚಿಂಗ್ ಅಪ್‌ಡೇಟ್ ಪಡೆಯುವುದಾಗಿ ತಿಳಿಸಿದರು.
 

Add Zee News as a Preferred Source
TAGS:
Kannada News