• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ರಾಜ್ಯದಲ್ಲಿ ಇನ್ನೆರಡು ದಿನ ಒಣ ಹವೆ, ಚಳಿಯ ವಾತಾವರಣ

ರಾಜ್ಯದಲ್ಲಿ ಇನ್ನೆರಡು ದಿನ ಒಣ ಹವೆ, ಚಳಿಯ ವಾತಾವರಣ

ರಾಜ್ಯಾದ್ಯಂತ ಸದ್ಯ ಒಣ ಹವಾಮಾನ ಮುಂದುವರೆದಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚಳಿಯು ಹೆಚ್ಚಾಗಲಿದೆ. ಇನ್ನೂ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸ, ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲೂ ಒಣ ಹವೆ ಇರಲಿದೆ.

Written ByYashaswini V
Published: Nov 12, 2026, 11:21 IST|Updated: Nov 12, 2026, 11:39 IST
joinshare
ರಾಜ್ಯದಲ್ಲಿ ಇನ್ನೆರಡು ದಿನ ಒಣ ಹವೆ, ಚಳಿಯ ವಾತಾವರಣ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು : ರಾಜ್ಯದಲ್ಲಿ ನ. 12 ಮತ್ತು ನ. 13ರಂದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಈಗಾಗಲೇ ತಗ್ಗಿದ್ದು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಯಾವ ಭಾಗದಲ್ಲೂ ಮಳೆಯ ಎಚ್ಚರಿಕೆ ನೀಡಿಲ್ಲ.

ಕರಾವಳಿ ಕರ್ನಾಟಕದ ದಕ್ಷಣ ಕನ್ನಡ, ಉಡುಪಿ, ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎರಡೂ ದಿನಗಳ ಕಾಲ ಸಂಪೂರ್ಣವಾಗಿ ಒಣ ಹವೆಯ ವಾತವರಣ ಇರಲಿದೆ. ಅದೇ ರೀತಿಯೇ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಕಡಿಮೆ ಇದ್ದು, ಬಿಸಿಲು ಮತ್ತು ಒಣ ಗಾಳಿಯ ವಾತಾವರಣ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ನವೆಂಬರ್‌ 12 ಮತ್ತು 13ರಂದು ಒಣ ಹವಾಮಾನವೇ ಇರಲಿದೆ. ಹಗಲಿನಲ್ಲಿ ಸಾಮಾನ್ಯ ತಾಪಮಾನ ಇದ್ದರೂ, ಸಂಜೆ ಮತ್ತು ರಾತ್ರಿ ವೇಳೆ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ರಾಜ್ಯದ ತಾಪಮಾನದ ವಿವರ :
ರಾಜ್ಯದಲ್ಲಿ ಈಗಾಗಲೇ ಚಳಿಗಾಲದ ವಾತವರಣ ಆರಂಭಗೊಂಡಿದ್ದು,ರಾತ್ರಿ ಮತ್ತು ಬೆಳಗ್ಗೆ ಹೊತ್ತಲ್ಲಿ ಮೈಕೊರೆಯುವ ಚಳಿಯ ಅನುಭವ ಆಗಲಿದೆ. ರಾಜ್ಯದ ಬಯಲು ಪ್ರದೇಶಗಳ ಪೈಕಿ ಧಾರವಾಡದಲ್ಲಿ ಅತೀ ಕಡಿಮೆ ಅಂದರೆ 12.2 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿದೆ.

ಹವಾಮಾನ ಇಲಾಖೆ ಹೇಳುವ ಪ್ರಕಾರ, ನ. 14ರ ವರೆಗೆ ರಾಜ್ಯಾದ್ಯಂತ ಇದೇ ರೀತಿಯ ಒಣ ಹವಾಮಾನ ಮುಂದುವರೆಯಲಿದೆ. ಆದರೆ, ಆಗ್ನೇಯ ಅರಬ್ಬಿ ಸಮುದ್ರ ಮತ್ತು ಮನ್ನಾರ್‌ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದಾಗಿ ನ. 15 ಮತ್ತು 16 ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮತ್ತೆ ಹಗುರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಹಗಲಿನಲ್ಲಿ ಬಿಸಿಲು ಮತ್ತು ರಾತ್ರಿ ವೇಳೆ ವಿಪರೀತ ಚಳಿ ಇರುವುದರಿಂದ ಹವಾಮಾನ ವೈಪರೀತ್ಯ ಉಂಟಾಗುತ್ತಿದೆ. ಮಕ್ಕಳು, ವೃದ್ಧರು ಮತ್ತು ಉಸಿರಾಟದ ಸಮಸ್ಯೆ ಇರುವವರು ಮುಂಜಾನೆ ಹಾಗೂ ರಾತ್ರಿ ವೇಳೆ ಬೆಚ್ಚಗಿನ ಉಡುಪನ್ನು ಧರಿಸುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಂತೆಯೇ ಕೃಷಿಕರಿಗೆ ಕಟಾವಿಗೆ ಬಂದಿರುವ ಬೆಳೆಗಳನ್ನು ಕೊಯ್ಲು ಮಾಡಲು ಮತ್ತು ಒಣಗಿಸಲು ರೈತರಿಗೆ  ಇದು ಸೂಕ್ತ ಸಮಯವಾಗಿದೆ. ನವೆಂಬರ್‌ 15ರ ನಂತರ ದಕ್ಷಿಣ ಒಳನಾಡಿನಲ್ಲಿ ಮಳೆಯ ಸಾಧ್ಯತೆ ಇರುವುದರಿಂದ ಕಟಾವು ಮಾಡಿದ ಧಾನ್ಯಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿಟ್ಟುಕೊಳ್ಳುವುದು ಉತ್ತಮ ಎನ್ನಲಾಗಿದೆ.      

 

Add Zee News as a Preferred Source
TAGS:
Weather Update
Kannada News