• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಕರ್ನಾಟಕದಲ್ಲಿ ಮುಂದುವರೆದ ಒಣಹವೆ; ಮುಂದಿನ ದಿನಗಳಲ್ಲಿ ಮತ್ತಷ್ಟು ತಗ್ಗಲಿದೆ ತಾಪಮಾನ

ಕರ್ನಾಟಕದಲ್ಲಿ ಮುಂದುವರೆದ ಒಣಹವೆ; ಮುಂದಿನ ದಿನಗಳಲ್ಲಿ ಮತ್ತಷ್ಟು ತಗ್ಗಲಿದೆ ತಾಪಮಾನ

ಕರ್ನಾಟಕದಾದ್ಯಂತ ಹಿಂಗಾರು ಮಳೆಯ ಪ್ರಭಾವ ಸಂಪೂರ್ಣವಾಗಿ ಕಡಿಮೆಯಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ರಾಜ್ಯದಲ್ಲಿ ಚಳಿಯ ಪ್ರಮಾಣ ನಿಧಾನವಾಗಿ ಹೆಚ್ಚಾಗುತ್ತಿದ್ದು, ಬಯಲು ಪ್ರದೇಶಗಳಾದ ಬೆಳಗಾವಿ ವಿಮಾನ ನಿಲ್ದಾಣ ಮತ್ತು ಶಿವಮೊಗ್ಗದಲ್ಲಿ ರಾಜ್ಯದಲ್ಲೇ ಅತಿ ಕಡಿಮೆ ಅಂದರೆ 12.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

Written ByYashaswini V
Published: Nov 14, 2026, 08:57 IST|Updated: Nov 14, 2026, 08:58 IST
joinshare
ಕರ್ನಾಟಕದಲ್ಲಿ ಮುಂದುವರೆದ ಒಣಹವೆ; ಮುಂದಿನ ದಿನಗಳಲ್ಲಿ ಮತ್ತಷ್ಟು ತಗ್ಗಲಿದೆ ತಾಪಮಾನ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು:  ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಸಂಪೂರ್ಣವಾಗಿ ತಗ್ಗಿದ್ದು, ಕಳೆದ ಕೆಲವು ದಿನಗಳಿಂದ ಎಲ್ಲೆಡೆ ಒಣಹವೆ ಮುಂದುವರಿದಿದೆ. ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸದ್ಯಕ್ಕೆ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಇದೇ ವೇಳೆ ರಾಜ್ಯದಲ್ಲಿ ಚಳಿಯ ತೀವ್ರತೆ ನಿಧಾನವಾಗಿ ಹೆಚ್ಚಾಗುತ್ತಿದ್ದು, ಬಯಲು ಪ್ರದೇಶಗಳಾದ ಬೆಳಗಾವಿ ವಿಮಾನ ನಿಲ್ದಾಣ ಮತ್ತು ಶಿವಮೊಗ್ಗದಲ್ಲಿ ರಾಜ್ಯದಲ್ಲೇ ಅತಿ ಕಡಿಮೆ ಅಂದರೆ 12.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಮುಂದಿನ ಕೆಲವು ದಿನಗಳವರೆಗೆ ರಾಜ್ಯದ ಮೂರೂ ಪ್ರಮುಖ ಹವಾಮಾನ ವಲಯಗಳಲ್ಲಿ ಇದೇ ರೀತಿಯ ಒಣಹವೆಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

ಮೊದಲನೆಯದಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇಲ್ಲದಿದ್ದು, ಸಂಪೂರ್ಣ ಒಣಹವೆ ಇರಲಿದೆ. ಮಂಗಳೂರಿನಲ್ಲಿ ಗರಿಷ್ಠ 33.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಬಿಸಿಲಿನ ಝಳ ಮುಂದುವರಿದಿದೆ.

ಅಂತೆಯೇ ಉತ್ತರ ಒಳನಾಡು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಈ ಭಾಗದಲ್ಲಿ ಹಗಲಿನಲ್ಲಿ ಬಿಸಿಲು ಹಾಗೂ ರಾತ್ರಿ ವೇಳೆ ತೀವ್ರ ಚಳಿ ಕಂಡುಬರುತ್ತಿದೆ. ವಿಶೇಷವಾಗಿ ಬೆಳಗಾವಿ ಮತ್ತು ಧಾರವಾಡದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದ ನಡುವೆ ಬರೋಬ್ಬರಿ 17.6 ಡಿಗ್ರಿ ಸೆಲ್ಸಿಯಸ್ ವ್ಯತ್ಯಾಸ ಕಂಡುಬಂದಿದೆ.

ಇನ್ನೂ ದಕ್ಷಿಣ ಒಳನಾಡಿನ ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ ಹಾಗೂ ಮಂಡ್ಯ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಶುಭ್ರ ಆಕಾಶ ಮತ್ತು ಒಣಹವೆ ಇರಲಿದೆ.

ಇನ್ನು ಮೋಡ ಕವಿದ ವಾತಾವರಣ ದೂರವಾಗಿ ರಾಜ್ಯಾದ್ಯಂತ ತಾಪಮಾನದಲ್ಲಿ ಗಣನೀಯ ಇಳಿಕೆಯಾಗುತ್ತಿದೆ. ಬೆಳಗಾವಿ ವಿಮಾನ ನಿಲ್ದಾಣ ಮತ್ತು ಶಿವಮೊಗ್ಗದಲ್ಲಿ 12.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗುವ ಮೂಲಕ ಚಳಿಯ ತೀವ್ರತೆಯನ್ನು ಸಾರಿವೆ. ಧಾರವಾಡದಲ್ಲಿ 13.4 ಡಿಗ್ರಿ ಮತ್ತು ವಿಜಯಪುರದಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲೂ ಮುಂಜಾನೆ ಮತ್ತು ರಾತ್ರಿ ವೇಳೆ ತಂಪಾದ ಗಾಳಿ ಬೀಸುತ್ತಿದ್ದು, ಕನಿಷ್ಠ ತಾಪಮಾನ 16.3 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ.

ರಾಜ್ಯದಲ್ಲಿ ಈಗಾಗಲೇ ಒಣಹವೆ ನೆಲೆಸಿರುವುದರಿಂದ, ಮುಂದಿನ ಕೆಲವು ದಿನಗಳವರೆಗೆ ಮುಂಜಾನೆ ಹಾಗೂ ರಾತ್ರಿ ವೇಳೆಯಲ್ಲಿ ಚಳಿಯ ಪ್ರಮಾಣ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಹಗಲಿನಲ್ಲಿ ಬಿಸಿಲಿನ ತಾಪ ಮತ್ತು ರಾತ್ರಿಯಲ್ಲಿ ತೀವ್ರ ಚಳಿ ಇರುವುದರಿಂದ ಹವಾಮಾನದಲ್ಲಿನ ಈ ವ್ಯತ್ಯಾಸ ಸಾರ್ವಜನಿಕರ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.

ಶೀತ ಗಾಳಿ ಮತ್ತು ತಾಪಮಾನ ಕುಸಿತದಿಂದಾಗಿ ಶೀತ, ಕೆಮ್ಮು, ಜ್ವರದಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಆದ್ದರಿಂದ ವಿಶೇಷವಾಗಿ ಚಿಕ್ಕ ಮಕ್ಕಳು, ವೃದ್ಧರು ಮತ್ತು ಉಸಿರಾಟದ ತೊಂದರೆ ಇರುವವರು ಬೆಳಗ್ಗೆ ಮತ್ತು ರಾತ್ರಿ ವೇಳೆ ಹೊರಗೆ ಓಡಾಡುವಾಗ ಬೆಚ್ಚಗಿನ ಉಡುಪುಗಳನ್ನು ಧರಿಸುವುದು ಅತ್ಯಗತ್ಯವಾಗಿದೆ. ಒಟ್ಟಾರೆಯಾಗಿ, ರಾಜ್ಯದ ಜನತೆ ಮಳೆಯ ಆತಂಕದಿಂದ ದೂರವಾಗಿ, ಇದೀಗ ಚಳಿಯನ್ನು ಎದುರಿಸಲು ಸಜ್ಜಾಗಬೇಕಾಗಿದೆ.
 

Add Zee News as a Preferred Source
TAGS:
Weather Update
Kannada News