• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಹಾವೇರಿ ಜಿಲ್ಲೆಯ 8 ತಾಲೂಕುಗಳು ಬರಪೀಡಿತ ಎಂದು ಘೋಷಣೆ

ಹಾವೇರಿ ಜಿಲ್ಲೆಯ 8 ತಾಲೂಕುಗಳು ಬರಪೀಡಿತ ಎಂದು ಘೋಷಣೆ

ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆ ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆಗೆ ಮೊದಲ ಆದ್ಯತೆ ನೀಡಲಾಗಿದೆ. ರಾಜ್ಯ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು (ಗೈಡ್‌ಲೈನ್ಸ್) ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ.

Reported ByManjunath NaragundEdited ByManjunath Naragund
Published: Sep 26, 2026, 02:07 PM IST|Updated: Sep 26, 2026, 02:17 PM IST
joinshare
ಹಾವೇರಿ ಜಿಲ್ಲೆಯ 8 ತಾಲೂಕುಗಳು ಬರಪೀಡಿತ ಎಂದು ಘೋಷಣೆ
Image Credit: Representation only

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಹಾವೇರಿ: ಜಿಲ್ಲೆಯ ಎಲ್ಲಾ 8 ತಾಲೂಕುಗಳನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ‘ಬರಪೀಡಿತ’ ಎಂದು ಘೋಷಿಸಿದ್ದು, ಜಿಲ್ಲಾಡಳಿತವು ಬರ ಪರಿಸ್ಥಿತಿಯನ್ನು ಎದುರಿಸಲು ಸಂಪೂರ್ಣ ಸಜ್ಜಾಗಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಹಾವೇರಿ ಜಿಲ್ಲಾಧಿಕಾರಿ ವಿಜಯಮಹಾಂತೇಶ್ ದಾನಮ್ಮನವರ್, ಬರ ನಿರ್ವಹಣೆ ಹಾಗೂ ಸಾರ್ವಜನಿಕರ ಹಿತರಕ್ಷಣೆಗೆ ಜಿಲ್ಲಾಡಳಿತ ಹಲವು ದಿಟ್ಟ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಕುಡಿಯುವ ನೀರು ಮತ್ತು ಮೇವಿಗೆ ಪ್ರಥಮ ಆದ್ಯತೆ:

ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆ ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆಗೆ ಮೊದಲ ಆದ್ಯತೆ ನೀಡಲಾಗಿದೆ. ರಾಜ್ಯ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು (ಗೈಡ್‌ಲೈನ್ಸ್) ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ. ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಈಗಾಗಲೇ ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಭೆಗಳನ್ನು ನಡೆಸಿ, ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಲಾಗಿದೆ.

ಕುಡಿಯುವ ನೀರಿನ ಅಭಾವವಿರುವ ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ಜನರಿಗೆ ತೊಂದರೆಯಾಗದಂತೆ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸಲು ಕ್ರಮ ವಹಿಸಲಾಗಿದೆ. ನದಿ ಪಾತ್ರದಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವುದರಿಂದ ನದಿ ನೀರನ್ನೇ ನೆಚ್ಚಿಕೊಂಡಿರುವ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. ಆರೋಗ್ಯದ ಹಿತದೃಷ್ಟಿಯಿಂದ ಪ್ರತಿಯೊಬ್ಬರೂ ನೀರನ್ನು ಕಾಯಿಸಿ, ಶುದ್ಧೀಕರಿಸಿ ಕುಡಿಯಬೇಕು. ಯಾವುದೇ ಕಾರಣಕ್ಕೂ ಕಲುಷಿತ ನೀರು ಸರಬರಾಜಾಗದಂತೆ ಎಚ್ಚರ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಮೇವು ಬ್ಯಾಂಕ್ ಹಾಗೂ ಸರ್ಕಾರದ ನೆರವು:

ಜಾನುವಾರುಗಳ ಮೇವಿನ ಕೊರತೆ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಶೀಘ್ರದಲ್ಲೇ ಮೇವು ಬ್ಯಾಂಕ್‌ಗಳನ್ನು ಸ್ಥಾಪಿಸಲಾಗುವುದು. ಮೇವು ಬೆಳೆಸಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಸೂಕ್ತ ಸರ್ಕಾರಿ ಜಮೀನುಗಳನ್ನು ಈಗಾಗಲೇ ಗುರುತಿಸಲಾಗಿದೆ. ಅಲ್ಲದೆ, ಜಾನುವಾರುಗಳ ಮೇವಿನ ಲಭ್ಯತೆಗಾಗಿ ಸರ್ಕಾರದಿಂದ ಹಾವೇರಿ ಜಿಲ್ಲೆಗೆ 14 ಸಾವಿರ ಮೇವಿನ ಬೀಜದ (ಪೌಡರ್) ಕಿಟ್‌ಗಳು ಪೂರೈಕೆಯಾಗಿದ್ದು, ಅವುಗಳನ್ನು ರೈತರಿಗೆ ವಿತರಿಸಲಾಗುತ್ತಿದೆ.

ರೈತರಿಗೆ ವಿಶೇಷ ಮನವಿ ಮಾಡಿದ ಜಿಲ್ಲಾಧಿಕಾರಿಗಳು, ಸುಗ್ಗಿಯ ನಂತರ ಹೊಲಗಳಲ್ಲಿ ಉಳಿಯುವ ಮೇವನ್ನು ಯಾವುದೇ ಕಾರಣಕ್ಕೂ ಸುಟ್ಟು ಹಾಕಬಾರದು. ರೈತರ ಬಳಿ ಇರುವ ಮೇವನ್ನು ಜಿಲ್ಲಾಡಳಿತವೇ ನೇರವಾಗಿ ಖರೀದಿಸುವ ಕುರಿತು ಚಿಂತನೆ ನಡೆಸಿದೆ. ಹೀಗಾಗಿ ಮೇವನ್ನು ವ್ಯರ್ಥ ಮಾಡದೆ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕೆಂದು ಕೋರಿದ್ದಾರೆ.

ಬೆಳೆ ಹಾನಿ ಸಮೀಕ್ಷೆ ಪೂರ್ಣ:

ಜಿಲ್ಲೆಯ 7 ತಾಲೂಕುಗಳಲ್ಲಿ ಈಗಾಗಲೇ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ಪರಿಶೀಲನೆ ಪೂರ್ಣಗೊಂಡಿದೆ. ಬೆಳೆಗಳ ವಾಸ್ತವಿಕ ಸ್ಥಿತಿಗತಿಯನ್ನು (ಗ್ರೌಂಡ್ ಟ್ರುತ್) ಆಧರಿಸಿ ತಂತ್ರಜ್ಞಾನ ಹಾಗೂ ಪ್ರತ್ಯಕ್ಷ ಪರಿಶೀಲನೆ ಮೂಲಕ ಮಾಹಿತಿಯನ್ನು ಸೆರೆಹಿಡಿಯಲಾಗಿದೆ. ಈ ಸಮಗ್ರ ವರದಿಯ ಆಧಾರದ ಮೇಲೆ ಸರ್ಕಾರದಿಂದ ಸಿಗಬೇಕಾದ ಪರಿಹಾರ ಮತ್ತು ನೆರವನ್ನು ಶೀಘ್ರವಾಗಿ ತಲುಪಿಸಲು ಜಿಲ್ಲಾಡಳಿತ ಬದ್ಧವಾಗಿದೆ ಎಂದು ವಿಜಯಮಹಾಂತೇಶ್ ದಾನಮ್ಮನವರ್ ಭರವಸೆ ನೀಡಿದ್ದಾರೆ.

Add Zee News as a Preferred Source
TAGS:
Kannada News