SOCIAL MEDIA

Newsletter

PARTNER SITES
Select Language Select State

ನಕಲಿ ಸುಪ್ರೀಂ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ರಿಲೀಸ್‌ : ಡಿಐಜಿ 5 ದಿನ ಪೊಲೀಸ್ ಕಸ್ಟಡಿಗೆ

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೊಲೆ ಆರೋಪಿಯನ್ನು ಅಕ್ರಮವಾಗಿ ಬಿಡುಗಡೆ ಮಾಡಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಂದಿನ ಪರಪ್ಪನ ಅಗ್ರಹಾರ ಜೈಲಿನ ಚೀಫ್ ಸೂಪರಿಂಟೆಂಡೆಂಟ್ ಹಾಗೂ ಹಾಲಿ ಜೈಲು ಇಲಾಖೆ ಡಿಐಜಿ ಸೋಮಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..

Reported By Krishna NK Written By Krishna NK
Published: Oct 05, 2026, 06:49 PM IST | Updated: Oct 05, 2026, 06:53 PM IST
Image Credit: kannada news
Join

ಬೆಂಗಳೂರು: ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಸೃಷ್ಟಿಸಿ ಕೊಲೆ ಪ್ರಕರಣದ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು ಅಕ್ರಮವಾಗಿ ಬಿಡುಗಡೆ ಮಾಡಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಾಲಿ ಜೈಲು ಇಲಾಖೆಯ ಡಿಐಜಿ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ: 2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ್ ಎಂಬ ಕೈದಿಯನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಹೆಸರಿನಲ್ಲಿ ನಕಲಿ ಆದೇಶ ಪ್ರತಿಯನ್ನು ಸೃಷ್ಟಿಸಲಾಗಿತ್ತು. ಶ್ರೀಕಾಂತ್ ಎಸ್. ಎಂಬ ಪ್ರಥಮ ದರ್ಜೆ ಸಹಾಯಕರ (SDA) ಮೇಲೆಯೇ ಈ ನಕಲಿ ಆದೇಶ ತಯಾರಿಸಿದ ಆರೋಪವಿದೆ.

ಈ ನಕಲಿ ದಾಖಲೆಯ ಆಧಾರದ ಮೇಲೆ 2018ರ ನವೆಂಬರ್ 13ರಂದು ಶಂಕರ್ ಜೈಲಿನಿಂದ ಬಿಡುಗಡೆಯಾಗಿದ್ದ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ್ದ ಪೊಲೀಸರು, ಈಗಾಗಲೇ ಕೈದಿ ಶಂಕರ್ ಹಾಗೂ ನಕಲಿ ದಾಖಲೆ ಸೃಷ್ಟಿಸಿದ ಆರೋಪಿ ಶ್ರೀಕಾಂತ್‌ನನ್ನು ಬಂಧಿಸಿದ್ದಾರೆ.

ಡಿಐಜಿ ಸೋಮಶೇಖರ್ ಬಂಧನ ಮತ್ತು ಪೊಲೀಸ್ ಕಸ್ಟಡಿ
ಕೈದಿ ಬಿಡುಗಡೆಯಾಗುವ ಸಮಯದಲ್ಲಿ ಪರಪ್ಪನ ಅಗ್ರಹಾರ ಜೈಲಿನ ಚೀಫ್ ಸೂಪರಿಂಟೆಂಡೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ (ಹಾಲಿ ಡಿಐಜಿ) ಸೋಮಶೇಖರ್ ಅವರ ಪಾತ್ರದ ಬಗ್ಗೆಯೂ ಅನುಮಾನ ವ್ಯಕ್ತವಾಗಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮಶೇಖರ್ ಅವರನ್ನು ವಶಕ್ಕೆ ಪಡೆದ ಪರಪ್ಪನ ಅಗ್ರಹಾರ ಪೊಲೀಸರು, ನಗರದ 9ನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿ ಸೋಮಶೇಖರ್ ಅವರನ್ನು ಈ ತಿಂಗಳ 9ನೇ ತಾರೀಖಿನವರೆಗೆ (5 ದಿನಗಳ ಕಾಲ) ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಸದ್ಯ ಪೊಲೀಸರು ಡಿಐಜಿ ಸೋಮಶೇಖರ್ ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದು, ತನಿಖೆ ಮುಂದುವರಿದಿದೆ.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ZEENEWS TRENDING STORIES