• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ನಾಳೆ ಬೆಳಗಾವಿ ನಗರಕ್ಕೆ ಎಂಟ್ರಿ ಆಗಿಲಿರೋ ರೈತರ ಜೈಲು ಭರೋ ಪಾದಯಾತ್ರೆ

ನಾಳೆ ಬೆಳಗಾವಿ ನಗರಕ್ಕೆ ಎಂಟ್ರಿ ಆಗಿಲಿರೋ ರೈತರ ಜೈಲು ಭರೋ ಪಾದಯಾತ್ರೆ

ಬೆಳಗಾವಿ ನಗರದಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಭೂತರಾಮನಹಟ್ಟಿಯ ಮುಕ್ತಿಮಠದಲ್ಲಿ ಇಂದು ರಾತ್ರಿ ರೈತರು ವಾಸ್ತವ್ಯ ಹೂಡಲಿದ್ದಾರೆ.

Written ByChetana Devarmani
Published: Nov 04, 2026, 10:05 PM IST|Updated: Nov 04, 2026, 10:06 PM IST
joinshare
ನಾಳೆ ಬೆಳಗಾವಿ ನಗರಕ್ಕೆ ಎಂಟ್ರಿ ಆಗಿಲಿರೋ ರೈತರ ಜೈಲು ಭರೋ ಪಾದಯಾತ್ರೆ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಪ್ರತಿ ಟನ್ ಕಬ್ಬಿಗೆ ₹3,600 ದರ ಘೋಷಣೆ; ನಾಳೆಯಿಂದಲೇ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಮನವಿ!

ಪ್ರತಿ ಟನ್ ಕಬ್ಬಿಗೆ ₹3,600 ದರ ಘೋಷಣೆ; ನಾಳೆಯಿಂದಲೇ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಮನವಿ!

2

ನಾಳೆ ಬೆಳಗಾವಿ ನಗರಕ್ಕೆ ಎಂಟ್ರಿ ಆಗಿಲಿರೋ ರೈತರ ಜೈಲು ಭರೋ ಪಾದಯಾತ್ರೆ

3

ಗರ್ಭಿಣಿಯಾಗಿದ್ದಾಗ ಕೈಕೊಟ್ಟ : ಚಾಹಲ್ ಬಗ್ಗೆ ಆರ್‌ಜೆ ಮಹ್ವಾಶ್ ಸ್ಫೋಟಕ ಹೇಳಿಕೆ

4

ಬಿಗ್‌ ಬಾಸ್‌ ಕನ್ನಡ ಶೋ ಗೆ ಶೀಘ್ರದಲ್ಲೇ ಕಾದಿದೆ ಭಾರೀ ಕಂಟಕ!

5

ಹಬ್ಬದ ಸೀಸನ್‌ನಲ್ಲಿ ಹೊಸ ವಾಹನ ಖರೀದಿಯ ಉತ್ಸಾಹ : ಈ ತಪ್ಪುಗಳನ್ನು ಮಾಡಿದ್ರೆ ನಷ್ಟ ಗ್ಯಾರಂಟಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಳಗಾವಿ: ಕಬ್ಬಿನ ದರ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಮತ್ತೊಂದು ಹಂತ ತಲುಪಿದೆ. ಗುರ್ಲಾಪುರದಿಂದ ಆರಂಭವಾಗಿರುವ ರೈತರ ಜೈಲು ಭರೋ ಪಾದಯಾತ್ರೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯ ಮುಕ್ತಿಮಠಕ್ಕೆ ತಲುಪಿದೆ. ನಾಳೆ ರೈತರ ಪಾದಯಾತ್ರೆ ಬೆಳಗಾವಿ ನಗರ ಪ್ರವೇಶಿಸಲಿದ್ದು, ಜೈಲು ಭರೋ ಚಳವಳಿ ಆರಂಭಿಸಲು ರೈತರು ಸಿದ್ಧತೆ ನಡೆಸಿದ್ದಾರೆ.

ಬೆಳಗಾವಿ ನಗರದಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಭೂತರಾಮನಹಟ್ಟಿಯ ಮುಕ್ತಿಮಠದಲ್ಲಿ ಇಂದು ರಾತ್ರಿ ರೈತರು ವಾಸ್ತವ್ಯ ಹೂಡಲಿದ್ದಾರೆ. ಸರ್ಕಾರದ ಅಂತಿಮ ನಿರ್ಧಾರಕ್ಕಾಗಿ ನಾಳೆ ಬೆಳಗಿನವರೆಗೂ ಕಾಯಲು ರೈತರು ತೀರ್ಮಾನಿಸಿದ್ದಾರೆ. ತಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಜೈಲು ಭರೋ ಚಳವಳಿ ಆರಂಭಿಸುವ ಎಚ್ಚರಿಕೆ ನೀಡಿದ್ದಾರೆ.

ಇನ್ನೊಂದೆಡೆ, ರೈತರನ್ನು ಮನವೊಲಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಗಳು ಮುಂದುವರಿದಿವೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಇಂದು ರಾತ್ರಿಯೂ ರೈತರೊಂದಿಗೆ ಮಾತುಕತೆ ನಡೆಸುವ ಕಸರತ್ತು ನಡೆಯುತ್ತಿದೆ. ಕಳೆದ ಎರಡು ದಿನಗಳಿಂದ ಕಬ್ಬಿನ ದರವನ್ನು ಅಂತಿಮಗೊಳಿಸಲು ಸಚಿವರು ಪ್ರಯತ್ನಿಸುತ್ತಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ, ಅಧಿಕಾರಿಗಳು, ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ರೈತ ಮುಖಂಡರೊಂದಿಗೆ ನಿರಂತರವಾಗಿ ಚರ್ಚೆ ನಡೆಸಲಾಗುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ 4,000 ರೂಪಾಯಿ ದರ ನಿಗದಿಪಡಿಸಬೇಕು ಎಂಬುದು ರೈತರ ಪ್ರಮುಖ ಪಟ್ಟು. ಅಗತ್ಯವಿದ್ದರೆ ಎರಡು ಕಂತುಗಳಲ್ಲಾದರೂ ಈ ಮೊತ್ತವನ್ನು ನೀಡಬೇಕು ಎಂದು ರೈತರು ಆಗ್ರಹಿಸುತ್ತಿದ್ದಾರೆ.

ರೈತರ ಬೇಡಿಕೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಯಾವ ನಿರ್ಧಾರ ಹೊರಬೀಳಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ರೈತರನ್ನು ಮನವೊಲಿಸಿ ಪಾದಯಾತ್ರೆ ಹಾಗೂ ಜೈಲು ಭರೋ ಚಳವಳಿಯನ್ನು ತಡೆಯಲು ಸಚಿವ ಸತೀಶ್ ಜಾರಕಿಹೊಳಿ ಪ್ರಯತ್ನಿಸುತ್ತಿದ್ದಾರೆ.

ಇಂದು ರಾತ್ರಿ ಮುಕ್ತಿಮಠದಲ್ಲಿ ರೈತರ ವಾಸ್ತವ್ಯದ ಬಳಿಕ ನಾಳೆ ಬೆಳಗಿನವರೆಗೆ ಸರ್ಕಾರದ ನಿರ್ಧಾರಕ್ಕಾಗಿ ಕಾಯಲಿದ್ದಾರೆ. ಸರ್ಕಾರದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಾರದಿದ್ದರೆ ಬೆಳಗಾವಿ ನಗರಕ್ಕೆ ಪಾದಯಾತ್ರೆ ಮುಂದುವರಿಸಿ ಜೈಲು ಭರೋ ಚಳವಳಿ ನಡೆಸಲು ರೈತರು ಸಜ್ಜಾಗಿದ್ದಾರೆ. ಹೀಗಾಗಿ ನಾಳೆ ಬೆಳಗಾವಿಯಲ್ಲಿ ರೈತರ ಹೋರಾಟ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.
 

Add Zee News as a Preferred Source
TAGS:
Kannada News