• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಪಣಜಿ-ಹೈದರಾಬಾದ್ ಹೆದ್ದಾರಿಗೆ ಭೂಮಿ ನೀಡಿ ಬೀದಿಗೆ ಬಿದ್ದ ರೈತರು: ಸೂಕ್ತ ಪರಿಹಾರಕ್ಕೆ ಆಗ್ರಹಿಸಿ 3 ಜಿಲ್ಲೆಗಳ ಕೃಷಿಕರ ಆಕ್ರೋಶ!

ಪಣಜಿ-ಹೈದರಾಬಾದ್ ಹೆದ್ದಾರಿಗೆ ಭೂಮಿ ನೀಡಿ ಬೀದಿಗೆ ಬಿದ್ದ ರೈತರು: ಸೂಕ್ತ ಪರಿಹಾರಕ್ಕೆ ಆಗ್ರಹಿಸಿ 3 ಜಿಲ್ಲೆಗಳ ಕೃಷಿಕರ ಆಕ್ರೋಶ!

ಪಣಜಿ-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಬಾಗಲಕೋಟೆ, ಬೆಳಗಾವಿ ಹಾಗೂ ರಾಯಚೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಸಾವಿರಾರು ಎಕರೆ ಕೃಷಿ ಜಮೀನುಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಂಡಿದೆ.

Reported ByManjunath NaragundEdited ByManjunath Naragund
Published: Sep 30, 2026, 12:39 PM IST|Updated: Sep 30, 2026, 01:05 PM IST
joinshare
ಪಣಜಿ-ಹೈದರಾಬಾದ್ ಹೆದ್ದಾರಿಗೆ ಭೂಮಿ ನೀಡಿ ಬೀದಿಗೆ ಬಿದ್ದ ರೈತರು: ಸೂಕ್ತ ಪರಿಹಾರಕ್ಕೆ ಆಗ್ರಹಿಸಿ 3 ಜಿಲ್ಲೆಗಳ ಕೃಷಿಕರ ಆಕ್ರೋಶ!
Image Credit: Bagalkote

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬಾಗಲಕೋಟೆ: ಅಭಿವೃದ್ಧಿ ಹೆಸರಿನಲ್ಲಿ ಸರ್ಕಾರ ಕೈಗೆತ್ತಿಕೊಳ್ಳುವ ಯೋಜನೆಗಳು ಒಂದೆಡೆ ನಾಡಿನ ಸಾರಿಗೆ ವ್ಯವಸ್ಥೆಗೆ ವೇಗ ನೀಡುತ್ತಿದ್ದರೆ, ಇನ್ನೊಂದೆಡೆ ತಮ್ಮ ಫಲವತ್ತಾದ ಜಮೀನು ಬಿಟ್ಟುಕೊಟ್ಟ ರೈತರನ್ನು ಬೀದಿಪಾಲಾಗಿಸುತ್ತಿವೆ. ಗೋವಾದ ಪಣಜಿಯಿಂದ ತೆಲಂಗಾಣದ ಹೈದರಾಬಾದ್‌ಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಭೂಮಿ ಕಳೆದುಕೊಂಡ ಉತ್ತರ ಕರ್ನಾಟಕದ ಸಾವಿರಾರು ರೈತರು ಈಗ ಸೂಕ್ತ ಪರಿಹಾರ ಸಿಗದೆ ಆಕ್ರೋಶದ ಬೆಂಕಿಯಲ್ಲಿ ಬೇಯುತ್ತಿದ್ದಾರೆ.

ಪಣಜಿ-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಬಾಗಲಕೋಟೆ, ಬೆಳಗಾವಿ ಹಾಗೂ ರಾಯಚೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಸಾವಿರಾರು ಎಕರೆ ಕೃಷಿ ಜಮೀನುಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಂಡಿದೆ.ಆದರೆ, ಭೂಮಿ ಕಳೆದುಕೊಂಡು ವರ್ಷಗಳೇ ಗತಿಸಿದರೂ ಸರ್ಕಾರ ಹಾಗೂ ಹೆದ್ದಾರಿ ಪ್ರಾಧಿಕಾರ ಮಾತ್ರ ರೈತರಿಗೆ ನೀಡಬೇಕಾದ ನ್ಯಾಯಯುತ ಮಾರುಕಟ್ಟೆ ಮೌಲ್ಯದ ಪರಿಹಾರ ಧನವನ್ನು ನೀಡಿಲ್ಲ. ಇದರಿಂದಾಗಿ ಜೀವನೋಪಾಯಕ್ಕೆ ಇದ್ದ ಒಂದೇ ಒಂದು ಆಸರೆಯನ್ನು ಕಳೆದುಕೊಂಡ ರೈತ ಕುಟುಂಬಗಳು ಈಗ ಕಂಗಾಲಾಗಿವೆ.

ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಬಾಗಲಕೋಟೆಯ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಸಂತ್ರಸ್ತ ರೈತರು, ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಅಪರ ಜಿಲ್ಲಾಧಿಕಾರಿ ತೇಲಿ ಅವರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದರು. ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲು ಬಂದರೂ ಅವರು ಸೂಕ್ತವಾಗಿ ಸ್ಪಂದಿಸುತ್ತಿಲ್ಲ, ಕೇವಲ ಭರವಸೆ ನೀಡಿ ಕಳುಹಿಸುತ್ತಿದ್ದಾರೆ ಹೊರತು ನಮಗೆ ಆಗಿರುವ ಅನ್ಯಾಯಕ್ಕೆ ಪರಿಹಾರ ಒದಗಿಸುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ.

ಕೇಂದ್ರ ಸಚಿವರ ಮನೆ ಮುಂದೆ ಧರಣಿ ಎಚ್ಚರಿಕೆ:

ಅಧಿಕಾರಿಗಳು ಮತ್ತು ಸರ್ಕಾರದ ಈ ಬೇಜವಾಬ್ದಾರಿ ಧೋರಣೆಗೆ ಆಕ್ರೋಶಗೊಂಡಿರುವ ರೈತರು ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ. "ನಮ್ಮ ಭೂಮಿಗೆ ಶೀಘ್ರದಲ್ಲೇ ಸೂಕ್ತ ಪರಿಹಾರ ಒದಗಿಸದಿದ್ದರೆ ಮುಂಬರುವ ದಿನಗಳಲ್ಲಿ ಕೇಂದ್ರ ಸಚಿವರ ನಿವಾಸದ ಮುಂದೆ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದೇವೆ" ಎಂದು ಎಚ್ಚರಿಸಿದ್ದಾರೆ. ಅಷ್ಟೇ ಅಲ್ಲದೆ, ಪರಿಹಾರದ ಹಣ ಸಂಪೂರ್ಣವಾಗಿ ತಲುಪುವವರೆಗೆ ಹೆದ್ದಾರಿ ಕಾಮಗಾರಿಯನ್ನು ಮುಂದುವರಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಆಡಳಿತ ಯಂತ್ರ ಹಾಗೂ ಸರ್ಕಾರ ಇನ್ನಾದರೂ ಕಣ್ಣು ತೆರೆದು, ತಕ್ಷಣವೇ ಮಧ್ಯಪ್ರವೇಶಿಸಿ ಭೂಮಿ ಕಳೆದುಕೊಂಡ ರೈತರ ಸಂಕಷ್ಟಕ್ಕೆ ಸ್ಪಂದಿಸಿ, ಸೂಕ್ತ ಪರಿಹಾರ ವಿತರಿಸಬೇಕಿದೆ. ಇಲ್ಲವಾದರೆ ಹೆದ್ದಾರಿ ಕಾಮಗಾರಿ ಅಷ್ಟೇ ಅಲ್ಲದೆ, ಇಡೀ ಉತ್ತರ ಕರ್ನಾಟಕ ಭಾಗದಲ್ಲಿ ರೈತರ ಹೋರಾಟದ ಕಾವು ಮತ್ತಷ್ಟು ಜೋರಾಗುವುದರಲ್ಲಿ ಸಂಶಯವಿಲ್ಲ.
 

Add Zee News as a Preferred Source
TAGS:
Kannada News