SOCIAL MEDIA

Newsletter

PARTNER SITES
Select Language Select State

ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದ ಟಿವಿ, ಫ್ರಿಡ್ಜ್, ವಾಷಿಂಗ್ಟನ್ ಮಿಷನ್ ತಯಾರಿಕಾ ಘಟಕದಲ್ಲಿ ಭಾರೀ ಅಗ್ನಿ ದುರಂತ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಈ ಅವಘಡದಲ್ಲಿ ಕೋಟ್ಯಾಂತರ ರೂಪಾಯಿ ವಸ್ತುಗಳು ನಷ್ಟವಾಗಿವೆ ಎಂದು ವರದಿಯಾಗಿದೆ.

Written By Yashaswini V
Published: Oct 14, 2026, 12:36 PM IST | Updated: Oct 14, 2026, 12:37 PM IST
Join

ಟಿವಿ, ಫ್ರಿಡ್ಜ್, ವಾಷಿಂಗ್ಟನ್ ಮಿಷನ್ ತಯಾರಿಕಾ ಘಟಕದಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು ಇದರಿಂದಾಗಿ ಕೋಟ್ಯಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕ್‌ ಸಾಮಾಗ್ರಿಗಳು ಬೆಂಕಿಗೆ ಆಹುತಿ ಆಗಿರುವ ದುರಾರ್ದುಷ್ಟಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗರುಡಾ ಮಾರ್ಟ್ ಇಂಡಸ್ಟ್ರೀಸ್ ಯಲ್ಲಿ ಸಂಭವಿಸಿದೆ.

ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ದುರಂತ:
ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಟಿವಿ, ಫ್ರಿಡ್ಜ್, ವಾಷಿಂಗ್ ಮಿಷನ್ ತಯಾರಿಸುವ ಘಟಕ ಗರುಡಾ ಮಾರ್ಟ್ ಇಂಡಸ್ಟ್ರೀಸ್ ಯಲ್ಲಿ ಸಂಭವಿಸಿರುವ ಅಗ್ನಿ ಅವಘಡದಿಂದಾಗಿ ದಟ್ಟವಾದ ಹೊಗೆ ಮುಗಿಲೆತ್ತರಕ್ಕೆ ಆವರಿಸಿದ್ದು, ಅಗ್ನಿ ದುರಂತದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕಲ್ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ವರದಿ ಆಗಿದೆ.

ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಗರುಡಾ ಮಾರ್ಟ್ ಇಂಡಸ್ಟ್ರೀಸ್ ಯಲ್ಲಿ ಸಂಭವಿಸಿರುವ ಅಗ್ನಿ ಅವಘಡದ ಬಗ್ಗೆ ವರದಿ ಆಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಹಲವು ಗಂಟೆಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದು ಬೆಂಕಿಯನ್ನು ಶಮನಗೊಳಿಸುವಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.

ಇಂದು (ಅಕ್ಟೋಬರ್‌ 14, 2026) ಸಂಭವಿಸಿರುವ ಭೀಕರ ಅಗ್ನಿ ದುರಂತದಲ್ಲಿ ಟಿವಿ, ಫ್ರಿಡ್ಜ್‌, ವಾಷಿಂಗ್ ಮಿಷನ್ ಮಾತ್ರವಲ್ಲದೆ ಸುಮಾರು ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ಆದರೆ, ಈ ದುರ್ಘಟನೆಗೆ ನಿಖರವಾದ ಕಾರಣ ಏನು ಎಂಬ ಬಗ್ಗೆ ಇನ್ನೂ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ತನಿಖೆಯ ಬಳಿಕವಷ್ಟೇ ಗರುಡಾ ಮಾರ್ಟ್ ಇಂಡಸ್ಟ್ರೀಸ್ ಯಲ್ಲಿ  ಈ ಅಗ್ನಿ ದುರಂತ ಸಂಭವಿಸಲು ಕಾರಣ ಏನೆಂದು ತಿಳಿಯ ಬೇಕಿದೆ.

ಗರುಡಾ ಮಾರ್ಟ್ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಕುರಿತ ಮಾಹಿತಿ:
ಗರುಡಾ ಮಾರ್ಟ್ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಅನ್ನು ಕಂಪನಿಯ ಚೇರ್ಮನ್‌ ಮತ್ತು ಮ್ಯಾನೇಜಿಂಗ್‌ ಡೈರೆಕ್ಟರ್‌ ಆಗಿರುವ ಆರ್‌. ವೆಂಕಟರಮಣ ಎಂಬುವವರು 2017ರಲ್ಲಿ ಸ್ಥಾಪಿಸಿದರು. ಈ ಕಂಪನಿಯು ವಾಷಿಂಗ್‌ ಮಿಷನ್‌ಗಳು, ಫ್ರಿಡ್ಜ್‌ಗಳು, ಡಿಶ್‌ವಾಶರ್‌ಗಳು, ಎಲ್‌ಇಡಿ ಟಿವಿಗಳಂತಹ ಹಲವು  ಗೃಹೋಪಯೋಗಿ ಉಪಕರಣಗಳು ಮತ್ತು ಎಲೆಕ್ಟ್ರಾನಿಕ್ಸ್‌ ವಸ್ತುಗಳನ್ನು ತಯಾರಿಸುತ್ತದೆ.

ಕೋಲಾರ ಮತ್ತು ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಮಾಸ್ತೇನಹಳ್ಳಿ ಕೆಐಎಡಿಬಿ (KIADB) ಕೈಗಾರಿಕಾ ಪ್ರದೇಶದಲ್ಲಿ ಗೃಹೋಪಯೋಗಿ ತಯಾರಿಕಾ ಘಟಕಗಳನ್ನು ಹೊಂದಿರುವ ಗರುಡಾ ಮಾರ್ಟ್ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಪ್ರಧಾನ ಕಚೇರಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿದೆ. 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 

ZEENEWS TRENDING STORIES