SOCIAL MEDIA

Newsletter

PARTNER SITES
Select Language Select State

ಐತಿಹಾಸಿಕ ಲಕ್ಕುಂಡಿಯಲ್ಲಿ ಹರಿದ ರ*ಕ್ತ : ಕಲ್ಲಿನಿಂದ ಜಜ್ಜಿ ಮಾಜಿ ಪಂಚಾಯತ್ ಸದಸ್ಯನ ಹ*ತ್ಯೆ.. ಕಾರಣವೇನು?

ಮಾಜಿ ಗ್ರಾಮ ಪಂಚಾಯಿತಿಯೊಬ್ಬರ ಬರ್ಬರ ಹತ್ಯೆ ಗದಗ ಜಿಲ್ಲೆಯಲ್ಲಿ ತೀವ್ರ ಆತಂಕ ಹಾಗೂ ಸಂಚಲನ ಮೂಡಿಸಿದೆ. ವ್ಯಕ್ತಿಯನ್ನು ರಾತ್ರಿ ವೇಳೆ ರಸ್ತೆ ಬದಿಯಲ್ಲಿಯೇ ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿದ್ದು, ಆಸ್ತಿ ವಿವಾದವೇ ಈ ಕೃತ್ಯಕ್ಕೆ ಕಾರಣವಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹಾಗಾದರೆ ಅಸಲಿಗೆ ನಡೆದ ಆ ರಾತ್ರಿಯ ರಹಸ್ಯವೇನು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್...

Written By Krishna NK
Published: Oct 10, 2026, 07:31 PM IST | Updated: Oct 10, 2026, 07:32 PM IST
Image Credit: Gadag Lakkundi news
Join

ಗದಗ: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಬರ್ಬರ、ವಾಗಿ ಹತ್ಯೆ ಮಾಡಿರುವ ಘಟನೆ ತೀವ್ರ ಸಂಚಲನ ಮೂಡಿಸಿದೆ. ಯಾರೊಂದಿಗೂ ವೈಷಮ್ಯವಿಲ್ಲದೆ, ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ವ್ಯಕ್ತಿಯ ಕೊಲೆಗೆ ಅಸಲಿ ಕಾರಣವೇನು ಎಂಬ ಬಗ್ಗೆ ಹತ್ತು ಹಲವು ಅನುಮಾನಗಳು ವ್ಯಕ್ತವಾಗಿವೆ.

ಘಟನೆಯ ಹಿನ್ನೆಲೆ
ಗದಗ ತಾಲೂಕಿನ ಲಕ್ಕುಂಡಿ–ಸಂಭಾಪುರ ರಸ್ತೆಯ ಸಮೀಪ ಅಕ್ಟೋಬರ್ 9ರ ರಾತ್ರಿ ಈ ದುರ್ಘಟನೆ ನಡೆದಿದೆ. ಎಂದಿನಂತೆ ಜಮೀನಿಗೆ ತೆರಳಿ ವಾಪಸಾಗುತ್ತಿದ್ದ 62 ವರ್ಷದ ಬಸವಣ್ಣೆಪ್ಪ ಮಾಡಲಗೇರಿ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೃತರ ತಲೆ, ಕುತ್ತಿಗೆ ಹಾಗೂ ಕೈಕಾಲುಗಳ ಮೇಲೆ ಬಲವಾದ ಏಟುಗಳಾಗಿದ್ದು, ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದ ಸಮೀಪವೇ ಅವರ ಸ್ಪ್ಲೆಂಡರ್ ಬೈಕ್ ಕೂಡ ಪತ್ತೆಯಾಗಿದೆ.

ಮಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ
ಮೃತ ಬಸವಣ್ಣೆಪ್ಪ ಅವರು ಪ್ರತಿದಿನ ಸಂಜೆ 6:30ರಿಂದ 7 ಗಂಟೆಯ ಸುಮಾರಿಗೆ ಹೊರಗೆ ಹೋಗಿ ವಾಪಸ್ ಮನೆಗೆ ಬರುತ್ತಿದ್ದರು. ಆದರೆ, ಅಕ್ಟೋಬರ್ 9ರಂದು ರಾತ್ರಿ 9 ಗಂಟೆಯಾದರೂ ಮನೆಗೆ ಮರಳಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಸಂಬಂಧಿಕರಿಗೆ ಮಾಹಿತಿ ನೀಡಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ತೆರಳಿ ನೋಡಿದಾಗ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಸವಣ್ಣೆಪ್ಪ ಅವರ ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಊರಿನ ಸಮಸ್ಯೆಗಳಲ್ಲಿ ಭಾಗಿಯಾಗಿ ಎಲ್ಲರಿಗೂ ಸಹಾಯ ಮಾಡುತ್ತಿದ್ದ 'ಅಜಾತಶತ್ರು' ಬಸವಣ್ಣೆಪ್ಪ ಅವರಿಗೆ ಯಾರ ಮೇಲೂ ಶತ್ರುತ್ವವಿರಲಿಲ್ಲ ಎಂದು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.

ಘಟನೆಗೆ ಕಾರಣವಾಯ್ತಾ ಆಸ್ತಿ ಕಲಹ?
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದು, ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದೆಡೆ, ಮೃತರ ತಾಯಿ ಮನೆಯ ಕಡೆಯ ಆಸ್ತಿಗೆ ಸಂಬಂಧಿಸಿದಂತೆ ವಿವಾದವಿದ್ದ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆಸ್ತಿ ವಿಚಾರವೇ ಕೊಲೆಗೆ ಕಾರಣವಾಗಿರಬಹುದೇ ಎಂಬ ಕೋನದಲ್ಲೂ ತನಿಖೆ ಮುಂದುವರಿದಿದೆ.

ಈ ಕುರಿತು ಮಾಹಿತಿ ನೀಡಿದ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್ ಅವರು, ಮೃತರ ತಲೆ ಹಾಗೂ ಕುತ್ತಿಗೆಗೆ ಬಲವಾದ ಏಟು ಬಿದ್ದಿರುವುದು ಪ್ರಾಥಮಿಕವಾಗಿ ತಿಳಿದುಬಂದಿದೆ. ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಶಂಕೆ ಇದೆ. ಆದಾಗ್ಯೂ, ಆಸ್ತಿ ಕಲಹವೇ ನಿಖರ ಕಾರಣ ಎಂಬುದು ಸದ್ಯಕ್ಕೆ ದೃಢಪಟ್ಟಿಲ್ಲ. ತನಿಖೆಯಿಂದಷ್ಟೇ ಸತ್ಯಾಂಶ ಹೊರಬರಬೇಕಿದೆ ಎಂದರು.

ಸದ್ಯ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಕೇವಲ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಯಾರನ್ನೂ ಆರೋಪಿ ಎಂದು ನಿರ್ಧರಿಸಲುಸಾಧ್ಯವಿಲ್ಲ. ಸಾಕ್ಷ್ಯಾಧಾರಗಳ ಮೂಲಕ ಕೊಲೆಗಾರರನ್ನು ಪತ್ತೆಹಚ್ಚುವ ಕಾರ್ಯ ಭರದಿಂದ ಸಾಗಿದ್ದು, ತನಿಖೆಯ ಬಳಿಕವಷ್ಟೇ ಹತ್ಯೆಯ ಹಿಂದಿನ ಅಸಲಿ ರಹಸ್ಯ ಬಯಲಾಗಬೇಕಿದೆ.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ZEENEWS TRENDING STORIES