SOCIAL MEDIA

Newsletter

PARTNER SITES
Select Language Select State

ಮಾಜಿ ಸಚಿವ ಬಿ. ರಮಾನಾಥ ರೈ ಕಾರು ಅಪಘಾತ : ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಭಾನುವಾರ ಮಧ್ಯಾಹ್ನ ಸುಮಾರು 3:30ಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..

Reported By Krishna NK Written By Krishna NK
Published: Sep 20, 2026, 06:17 PM IST | Updated: Sep 20, 2026, 06:23 PM IST
Image Credit: Ramanath Rai Car Accident
Join

ಉಡುಪಿ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಭಾನುವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  

ಘಟನೆಯ ವಿವರ: ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮಧ್ಯಾಹ್ನ ಸುಮಾರು 3:30ರ ವೇಳೆಗೆ ಸಾಣೂರು ಗ್ರಾಮ ವ್ಯಾಪ್ತಿಯ ಜಂಕ್ಷನ್ ಬಳಿ ತಲುಪಿದ್ದಾಗ, ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.  

ಸ್ಥಳೀಯರ ಸಹಾಯ, ಆಸ್ಪತ್ರೆಗೆ ದಾಖಲು: ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿ ಸಿಲುಕಿದ್ದ ರಮಾನಾಥ ರೈ ಹಾಗೂ ಅವರ ಜೊತೆಯಲ್ಲಿದ್ದವರನ್ನು ಹೊರತೆಗೆದು ನೆರವಾಗಿದ್ದಾರೆ. ಘಟನೆಯಲ್ಲಿ ರಮಾನಾಥ ರೈ ಅವರಿಗೆ ಪ್ರಾಣಾಪಾಯವಾಗಿಲ್ಲವಾದರೂ, ಅವರ ಆಪ್ತ ಸಹಾಯಕ ಹಾಗೂ ಬಸ್ಸಿನ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಕಾರ್ಕಳದ ಟಿ.ಎಂ.ಎ. ಪೈ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಪೊಲೀಸ್ ಭೇಟಿ, ತನಿಖೆ : ಮಾಹಿತಿ ತಿಳಿಯುತ್ತಿದ್ದಂತೆ ಕಾರ್ಕಳ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿರುವ ಪೊಲೀಸರು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ZEENEWS TRENDING STORIES