• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

ಜೀವ ಬೆದರಿಕೆ ಆರೋಪಕ್ಕೆ ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಸ್ಪಷ್ಟನೆ; ‘ನಾನು ಯಾರಿಗೂ ಬೆದರಿಕೆ ಹಾಕಿಲ್ಲ, ಸಂಪೂರ್ಣ ತನಿಖೆಯಾಗಲಿ’ ಎಂದು ಹೇಳಿಕೆ....

Written ByChetana Devarmani
Published: Oct 02, 2026, 07:03 AM IST|Updated: Oct 02, 2026, 07:04 AM IST
joinshare
ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
ಇಂದಿನ ದಿನ ಭವಿಷ್ಯ: ಈ ರಾಶಿಯವರಿಗೆ ಸುಖದ ಸುಪ್ಪತ್ತಿಗೆ, ದಿಢೀರ್‌ ಧನಯೋಗ! 12 ರಾಶಿಗಳ ಭವಿಷ್ಯ ಇಲ್ಲಿದೆ

ಇಂದಿನ ದಿನ ಭವಿಷ್ಯ: ಈ ರಾಶಿಯವರಿಗೆ ಸುಖದ ಸುಪ್ಪತ್ತಿಗೆ, ದಿಢೀರ್‌ ಧನಯೋಗ! 12 ರಾಶಿಗಳ ಭವಿಷ್ಯ ಇಲ್ಲಿದೆ

2

ನಾವೂ ಯಾರಿಗೂ ಜೀವ ಬೆದರಿಕೆ‌ ಹಾಕಿಲ್ಲ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

3

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

4

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

5

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬಳ್ಳಾರಿ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಅವರ ಮೇಲೆ ಜೀವ ಬೆದರಿಕೆ ಆರೋಪ ಕೇಳಿಬಂದಿದ್ದು ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಸಿರುಗುಪ್ಪದ ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಹಾಗೂ ಅವರ ಪುತ್ರರ ವಿರುದ್ಧ ಜೀವ ಬೆದರಿಕೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಮಾತನಾಡಿರುವ ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ತಮ್ಮ ವಿರುದ್ಧ ಮಾಡಲಾಗುತ್ತಿರುವ ಕೊಲೆ ಬೆದರಿಕೆಯ ಆರೋಪಗಳು ಸತ್ಯಕ್ಕೆ ದೂರವಾಗಿವೆ
ಎಂದಿದ್ದಾರೆ. ಅಲ್ಲದೇ ತಾವು ಯಾರಿಗೂ ಜೀವ ಬೆದರಿಕೆ ಹಾಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಹಾಗೂ ಮಂಜುಳಾ ಅವರ ನಡುವೆ ವಿವಾದವಿರುವುದು ಸತ್ಯ. ಈ ಸಂಬಂಧ ನ್ಯಾಯಾಲಯದಲ್ಲಿ ಕಾನೂನು ಹೋರಾಟವೂ ನಡೆಯುತ್ತಿದೆ. ಆದರೆ ಈಗ ತಮ್ಮ ಹಾಗೂ ತಮ್ಮ ಪುತ್ರರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಸೋಮಲಿಂಗಪ್ಪ ಹೇಳಿದ್ದಾರೆ. ಘಟನಾ ಸ್ಥಳದಲ್ಲಿ ಸಿಸಿ ಕ್ಯಾಮೆರಾಗಳಿವೆ. ಮೊಬೈಲ್ ಟವರ್ ಲೊಕೇಷನ್ ಸೇರಿದಂತೆ ಹಲವು ಸಾಕ್ಷ್ಯಗಳು ಲಭ್ಯವಿವೆ. ಹೀಗಾಗಿ ಪೊಲೀಸರು ಸಂಪೂರ್ಣ ತನಿಖೆ ನಡೆಸಿದರೆ ವಾಸ್ತವಾಂಶ ಹೊರಬರಲಿದೆ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ತಮ್ಮ ವಿರುದ್ಧ ಕೇಳಿಬಂದಿರುವ ಜೀವ ಬೆದರಿಕೆ ಆರೋಪವನ್ನು ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ನಾನು ಯಾರಿಗೂ ಜೀವ ಬೆದರಿಕೆ ಹಾಕಿಲ್ಲ. ಕಾನೂನಿಗೆ ತಲೆಬಾಗುತ್ತೇನೆ. ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಲಿ. ತನಿಖೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಹೇಳಿದ್ದಾರೆ. ಘಟನೆಯ ಸಂದರ್ಭದಲ್ಲಿ ಆ ಜಾಗದಲ್ಲಿ ಏನಾಗಿದೆ ಎಂಬುದನ್ನು ಸಿಸಿ ಕ್ಯಾಮೆರಾ ದೃಶ್ಯಗಳು ಹಾಗೂ ಮೊಬೈಲ್ ಟವರ್ ಲೊಕೇಷನ್ ಮೂಲಕ ಪರಿಶೀಲಿಸಬಹುದು. ಆದ್ದರಿಂದ ಆರೋಪ ಪ್ರತ್ಯಾರೋಪಗಳ ಬದಲು ತನಿಖೆಯ ಮೂಲಕ ಸತ್ಯಾಂಶವನ್ನು ಪೊಲೀಸರು ಹೊರತರಬೇಕು ಎಂದು ಒತ್ತಾಯಿಸಿದ್ದಾರೆ.

2010ರಲ್ಲೇ ಜಮೀನು ಖರೀದಿ :

ಆಸ್ತಿ ವಿವಾದದ ಕುರಿತು ಮಾತನಾಡಿದ ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ, 2010ರಲ್ಲಿ 75 ಸೆಂಟ್ಸ್ ಜಮೀನನ್ನು ಮಂಜುಳಾ ಅವರ ಮೂಲಕ ಜಿಪಿಎ ಹೋಲ್ಡರ್‌ನಿಂದ ಖರೀದಿ ಮಾಡಲಾಗಿತ್ತು ಎಂದು ಹೇಳಿದ್ದಾರೆ. ತಮ್ಮ ಪುತ್ರ ಎಂ.ಎಸ್. ವೆಂಕಟಪ್ಪ ಅವರ ಹೆಸರಿನಲ್ಲಿ ಜಮೀನು ಖರೀದಿಸಲಾಗಿತ್ತು. ನಂತರ ಜಮೀನಿನ ನೋಂದಣಿ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಲಾಗಿದ್ದು, ಅಂದಿನಿಂದ ತಾವೇ ಆ ಜಮೀನಿನ ಅನುಭವದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

ಈ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳು ತಮ್ಮ ಬಳಿ ಇವೆ ಎಂದು ಅವರು ಹೇಳಿದ್ದಾರೆ. ಮಂಜುಳಾ ಅವರ ಸಹಿ ಇರುವ ದಾಖಲೆಗಳು ಹಾಗೂ ಕ್ರಯಪತ್ರಗಳು ಕೂಡ ಇವೆ. ಅಧಿಕಾರಿಗಳ ಬಳಿ ಅಗತ್ಯ ಸಾಕ್ಷ್ಯಗಳು ಲಭ್ಯವಿದ್ದು, ಅವುಗಳನ್ನು ಪರಿಶೀಲಿಸಿದರೆ ಪ್ರಕರಣದ ವಾಸ್ತವಾಂಶ ತಿಳಿಯಲಿದೆ ಎಂದು ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪತಿಳಿಸಿದ್ದಾರೆ.

ಮಂಜುಳಾ ಮತ್ತು ತಮ್ಮ ಕುಟುಂಬದ ನಡುವೆ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕಲಹವಿದೆ ಎಂದು ಮಾಜಿ ಶಾಸಕ ಹೇಳಿದ್ದಾರೆ. ಈ ವಿಚಾರ ಈಗಾಗಲೇ ಕಾನೂನು ಹೋರಾಟದ ಹಂತದಲ್ಲಿದೆ. ಜಮೀನಿನ ಮೂಲ ಮಾಲೀಕರು ನಾಗರತ್ನಮ್ಮ ಎಂಬುದು ತಮ್ಮ ವಾದವಾಗಿದ್ದು, ಈ ಸಂಬಂಧ ಹೈಕೋರ್ಟ್‌ನಲ್ಲಿಯೂ ಪ್ರಕರಣ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಈ ನಡುವೆ ಮಂಜುಳಾ ಹಾಗೂ ಮಾರುತಿ ಶೆಟ್ಟಿ ಅವರು ಏಕಾಏಕಿ ತಗಾದೆ ಮಾಡುತ್ತಿದ್ದಾರೆ ಎಂದು ಸೋಮಲಿಂಗಪ್ಪ ಆರೋಪಿಸಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡೂ ಕಡೆಯಿಂದ ಪ್ರಕರಣಗಳು ಮತ್ತು ಕೌಂಟರ್ ಪ್ರಕರಣಗಳು ದಾಖಲಾಗಿವೆ ಎಂದು ಅವರು ಹೇಳಿದ್ದಾರೆ.

‘ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ’

ತಮ್ಮ ವಿರುದ್ಧ ಮಾಡಲಾಗುತ್ತಿರುವ ಆರೋಪಗಳು ಸುಳ್ಳಾಗಿದ್ದು, ಇದರಿಂದ ತಮ್ಮ ಹಾಗೂ ಕುಟುಂಬದ ಮಾನಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ತಿಳಿಸಿದ್ದಾರೆ. ನ್ಯಾಯಕ್ಕಾಗಿ ಕಾನೂನು ಹೋರಾಟ ಮಾಡುತ್ತೇನೆ. ಕಾನೂನಿಗೆ ತಲೆಬಾಗುತ್ತೇನೆ. ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಲಿ. ತನಿಖೆಯಲ್ಲಿ ಸತ್ಯ ಏನೆಂಬುದು ಹೊರಬರಲಿ. ನಾವು ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಹೇಳಿದ್ದಾರೆ.

ಸಿರುಗುಪ್ಪದ ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಅವರ ವಿರುದ್ಧ ಕೇಳಿಬಂದಿರುವ ಜೀವ ಬೆದರಿಕೆ ಆರೋಪ ಇದೀಗ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಒಂದು ಕಡೆ ಮಂಜುಳಾ ಅವರ ಆರೋಪಗಳಿದ್ದರೆ, ಮತ್ತೊಂದೆಡೆ ಆರೋಪಗಳನ್ನು ನಿರಾಕರಿಸಿರುವ ಸೋಮಲಿಂಗಪ್ಪ ಅವರು ತಮ್ಮ ಬಳಿ ದಾಖಲೆಗಳು ಮತ್ತು ಸಾಕ್ಷ್ಯಗಳಿವೆ ಎಂದು ಹೇಳಿದ್ದಾರೆ. ಪ್ರಕರಣದಲ್ಲಿ ನಿಜಾಂಶ ಏನು ಎಂಬುದು ಪೊಲೀಸ್ ತನಿಖೆ ಹಾಗೂ ನ್ಯಾಯಾಲಯದ ಮುಂದಿನ ಕಾನೂನು ಪ್ರಕ್ರಿಯೆಯಿಂದ ಸ್ಪಷ್ಟವಾಗಬೇಕಿದೆ.

Add Zee News as a Preferred Source
TAGS:
Kannada News