SOCIAL MEDIA

Newsletter

PARTNER SITES
Select Language Select State

ರಾಜ್ಯ ರಾಜಕೀಯಕ್ಕೆ ಎಚ್.ಡಿ. ಕುಮಾರಸ್ವಾಮಿ ರೀ ಎಂಟ್ರಿ: ನವೆಂಬರ್ ಕ್ರಾಂತಿಗೆ ವೇದಿಕೆ ಸಿದ್ಧ!

ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಮುಂಚೂಣಿಯಲ್ಲಿ ನಿಲ್ಲಿಸಿ ಮುನ್ನಡೆಸಲು ಮತ್ತು ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ಒಕ್ಕೂಟದ ಪ್ರಮುಖ ನಾಯಕನಾಗಿ ಹೊರಹೊಮ್ಮಲು ಎಚ್‌ಡಿಕೆ ಸಿದ್ಧತೆ ನಡೆಸುತ್ತಿದ್ದಾರೆ.

Reported By Manjunath Naragund Written By Manjunath Naragund
Published: Oct 29, 2026, 11:24 AM IST | Updated: Oct 29, 2026, 11:33 AM IST
Image Credit: HD Kumaraswamy
Join

ಬೆಂಗಳೂರು: ಕೇಂದ್ರ ರಾಜಕೀಯದಲ್ಲಿ ಗುರುತಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಶೀಘ್ರದಲ್ಲೇ ರಾಜ್ಯ ರಾಜಕೀಯಕ್ಕೆ ಮರಳಲು ಸಜ್ಜಾಗುತ್ತಿದ್ದಾರೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ತೀವ್ರಗೊಂಡಿವೆ. ವಿಧಾನ ಪರಿಷತ್ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಹೊಸ ಸಮೀಕರಣಗಳು ಸೃಷ್ಟಿಯಾಗುತ್ತಿದ್ದು, ಇದರ ಸಂಪೂರ್ಣ ಶ್ರೇಯಸ್ಸು ಕುಮಾರಸ್ವಾಮಿ ಅವರಿಗೆ ಸಲ್ಲುವ ಸಾಧ್ಯತೆಯಿದೆ. ಇದನ್ನೇ ಬಲವಾದ ಅಸ್ತ್ರವನ್ನಾಗಿ ಬಳಸಿ ರಾಜ್ಯದಲ್ಲಿ ತಮ್ಮ ಪ್ರಾಬಲ್ಯ ಮೆರೆಯಲು ಅವರು ತವಕಿಸುತ್ತಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಮುಂಚೂಣಿಯಲ್ಲಿ ನಿಲ್ಲಿಸಿ ಮುನ್ನಡೆಸಲು ಮತ್ತು ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ಒಕ್ಕೂಟದ ಪ್ರಮುಖ ನಾಯಕನಾಗಿ ಹೊರಹೊಮ್ಮಲು ಎಚ್‌ಡಿಕೆ ಸಿದ್ಧತೆ ನಡೆಸುತ್ತಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಉತ್ತಮ ಸಮನ್ವಯ ಸಾಧಿಸಲು ಕುಮಾರಸ್ವಾಮಿ ಅವರಂತಹ ನಾಯಕರ ಅವಶ್ಯಕತೆ ಪಕ್ಷದ ವರಿಷ್ಠರಿಗೂ ಮನವರಿಕೆಯಾಗಿದೆ. ಹೀಗಾಗಿ, ಕೇಂದ್ರ ರಾಜಕಾರಣದಿಂದ ರಾಜ್ಯ ರಾಜಕೀಯಕ್ಕೆ ಮರಳಿ ಸಕ್ರಿಯ ಪಾತ್ರ ವಹಿಸಲು ಅವರು ರಣತಂತ್ರ ರೂಪಿಸುತ್ತಿದ್ದಾರೆ.

ಜೆಡಿಎಸ್ ವಲಯದಲ್ಲಿ ಈಗಾಗಲೇ ಎಚ್‌ಡಿಕೆ ಅವರೇ ಮುಂದಿನ ಮುಖ್ಯಮಂತ್ರಿ ಎಂಬ ಕೂಗು ಜೋರಾಗಿದ್ದು, ಬಿಜೆಪಿ ಹೈಕಮಾಂಡ್ ಹಸಿರು ನಿಶಾನೆ ತೋರಿದರೆ ಎನ್‌ಡಿಎ ಒಕ್ಕೂಟದ ಚುಕ್ಕಾಣಿ ಅಧಿಕೃತವಾಗಿ ಅವರ ಕೈಗೆ ಸಿಗುವ ಸಾಧ್ಯತೆ ದಟ್ಟವಾಗಿದೆ. ನವೆಂಬರ್ ಅಂತ್ಯದೊಳಗೆ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರ ಆಯ್ಕೆ ಮತ್ತು ಇತರ ಪ್ರಮುಖ ರಾಜಕೀಯ ನಿರ್ಧಾರಗಳು ಹೊರಬೀಳಲಿದ್ದು, ಬಿಜೆಪಿಯಲ್ಲಿ ನಡೆಯಲಿರುವ ಈ 'ನವೆಂಬರ್ ಕ್ರಾಂತಿ'ಯ ಬಳಿಕ ಮೈತ್ರಿಕೂಟದ ಅಧಿಕಾರದ ಸಂಪೂರ್ಣ ಜವಾಬ್ದಾರಿ ಕುಮಾರಸ್ವಾಮಿ ಅವರ ಹೆಗಲೇರಲಿದೆ ಎನ್ನಲಾಗಿದೆ.

ಒಟ್ಟಿನಲ್ಲಿ, ಬಿಜೆಪಿ ಮತ್ತು ಜೆಡಿಎಸ್ ಹೈಕಮಾಂಡ್ ಮಟ್ಟದಲ್ಲಿ ನಡೆಯುತ್ತಿರುವ ನಿರಂತರ ಮಾತುಕತೆಗಳ ಬಳಿಕ ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳು ಆಗಲಿರುವುದು ಖಚಿತವಾಗಿದ್ದು, ರಾಜ್ಯದ ರಾಜಕೀಯ ಅಂಗಳದಲ್ಲಿ ಬಿರುಸಿನ ಚಟುವಟಿಕೆಗಳು ಗರಿಗೆದರಲಿವೆ.
 

Add Zee News as a Preferred Source
TAGS:

About the Author

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

ZEENEWS TRENDING STORIES