SOCIAL MEDIA

Newsletter

PARTNER SITES
Select Language Select State

ಜಮೀನು, ಪಡಿತರ ಅಕ್ಕಿ ಗಲಾಟೆ: ತಮ್ಮನನ್ನೇ ಚಾಕುವಿನಿಂದ ಇರಿದು ಕೊಂ*ದ ಅಣ್ಣ!

ಆಸ್ತಿ ವಿವಾದ ಹಾಗೂ ಪಡಿತರ ಅಕ್ಕಿ ಹಂಚಿಕೆ ವಿಚಾರವಾಗಿ ನಡೆದ ತೀವ್ರ ಜಗಳದಲ್ಲಿ, ಅಣ್ಣನೇ ತನ್ನ ಸ್ವಂತ ತಮ್ಮನನ್ನು ಚಾಕುವಿನಿಂದ ಇರಿದು ಕೊ*ಲೆ ಮಾಡಿರುವ ಭೀಕರ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.. ಘಟನೆಯ ಕುರಿತ ಹೆಚ್ಚಿನ ವಿವರಗಳು ಇಲ್ಲಿವೆ..

Reported By Krishna NK Written By Krishna NK
Published: Sep 29, 2026, 07:06 PM IST | Updated: Sep 29, 2026, 07:11 PM IST
Image Credit: News Shivamogga
Join

ಬೇಲೂರು: ಜಮೀನು ಹಂಚಿಕೆ ವ್ಯಾಜ್ಯ ಹಾಗೂ ಪಡಿತರ ಅಕ್ಕಿ ವಿಷಯಕ್ಕೆ ಸಂಬಂಧಿಸಿದಂತೆ ಸಹೋದರರ ನಡುವೆ ನಡೆದ ತೀವ್ರ ಗಲಾಟೆ ಕೊ*ಲೆಯಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸೋಂಪುರ ಗ್ರಾಮದಲ್ಲಿ ನಡೆದಿದೆ. ಅಣ್ಣ ದೇವರಾಜ್ ಎಂಬಾತ ತನ್ನ ಸ್ವಂತ ತಮ್ಮ ರಘು (37) ಎಂಬಾತನಿಗೆ ಚಾಕುವಿನಿಂದ ಇರಿದು ಹ*ತ್ಯೆ ಮಾಡಿದ್ದಾನೆ.

ಘಟನೆಯ ವಿವರ: ಸೋಂಪುರ ಗ್ರಾಮದ ನಿವಾಸಿಗಳಾದ ದೇವರಾಜ್ ಮತ್ತು ರಘು ನಡುವೆ ಕಳೆದ ಹಲವು ವರ್ಷಗಳಿಂದ ಜಮೀನು ಭಾಗ ಮಾಡುವ ವಿಚಾರದಲ್ಲಿ ನಿರಂತರವಾಗಿ ಜಗಳ ನಡೆಯುತ್ತಿತ್ತು. ಇದರೊಂದಿಗೆ, ತಾಯಿಯ ಪಡಿತರ ಅಕ್ಕಿಯನ್ನು ಕಳೆದೆರಡು ವರ್ಷಗಳಿಂದ ರಘು ಒಬ್ಬನೇ ಪಡೆದುಕೊಳ್ಳುತ್ತಿದ್ದ ಎಂಬ ವಿಚಾರಕ್ಕೂ ಎರಡೂ ಕುಟುಂಬಗಳ ನಡುವೆ ಆಗಾಗ್ಗೆ ಗಲಾಟೆಗಳು ನಡೆಯುತ್ತಿದ್ದವು.

ಶುಕ್ರವಾರದಂದು ಇದೇ ವಿಚಾರವಾಗಿ ಸಹೋದರರ ನಡುವೆ ಮಾತುಕತೆ ವಿಕೋಪಕ್ಕೆ ತಿರುಗಿ, ಕೋಪಗೊಂಡ ಅಣ್ಣ ದೇವರಾಜ್ ಚಾಕುವಿನಿಂದ ರಘುವಿಗೆ ತೀವ್ರವಾಗಿ ಇರಿದಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ರಘುವನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರಘು ಕೊನೆಯುಸಿರೆಳೆದಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಬೇಲೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆ ಆರೋಪಿ ದೇವರಾಜ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ZEENEWS TRENDING STORIES