• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /VAO ಪರೀಕ್ಷಾ ಅಕ್ರಮಕ್ಕೆ ಬಿಗ್‌ ಟ್ವಿಸ್ಟ್‌ : ಶಂಕರ್‌ ಪರೀಕ್ಷೆಯನ್ನೇ ಬರೆದಿಲ್ಲ ಎಂದ ಸಹಪರೀಕ್ಷಾರ್ಥಿ!

VAO ಪರೀಕ್ಷಾ ಅಕ್ರಮಕ್ಕೆ ಬಿಗ್‌ ಟ್ವಿಸ್ಟ್‌ : ಶಂಕರ್‌ ಪರೀಕ್ಷೆಯನ್ನೇ ಬರೆದಿಲ್ಲ ಎಂದ ಸಹಪರೀಕ್ಷಾರ್ಥಿ!

ಹಾವೇರಿಯಲ್ಲಿ ನಡೆದ ಗ್ರಾಮ ಆಡಳಿತ ಅಧಿಕಾರಿ (VAO) ಪರೀಕ್ಷಾ ಅಕ್ರಮ ಪ್ರಕರಣವು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದ್ದು, ಪಾಸ್‌ ಆದ ಅಭ್ಯರ್ಥಿಯೇ ಪರೀಕ್ಷೆಗೆ ಹಾಜರಾಗಿರಲಿಲ್ಲ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ... ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..

Written ByKrishna NK
Published: Nov 12, 2026, 16:43 IST|Updated: Nov 12, 2026, 16:45 IST
joinshare
VAO ಪರೀಕ್ಷಾ ಅಕ್ರಮಕ್ಕೆ ಬಿಗ್‌ ಟ್ವಿಸ್ಟ್‌ : ಶಂಕರ್‌ ಪರೀಕ್ಷೆಯನ್ನೇ ಬರೆದಿಲ್ಲ ಎಂದ ಸಹಪರೀಕ್ಷಾರ್ಥಿ!
Image Credit: Haveri VAO Exam scam

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಹಾವೇರಿ : VAO ಪರೀಕ್ಷಾ ಅಕ್ರಮ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಮೊಬೈಲ್ ಬಳಸಿ ಪರೀಕ್ಷಾ ಅಕ್ರಮ ಎಸಗಿದ ಆರೋಪದ ಮೇಲೆ ಈಗಾಗಲೇ ಅಭ್ಯರ್ಥಿ ಶಂಕರ್ ಬನ್ನೂರು ವಿರುದ್ಧ FIR ದಾಖಲಾಗಿದೆ. ಇದರ ಬೆನ್ನಲ್ಲೇ ಪರೀಕ್ಷಾ ಕೇಂದ್ರದ ಕರ್ತವ್ಯ ಲೋಪ ಎಸಗಿದ ನಾಲ್ವರು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಇನ್ನು ಶಂಕರ್ ಬನ್ನೂರು ಪರೀಕ್ಷೆಯನ್ನೇ ಬರೆದಿಲ್ಲ ಎಂದು ಮತ್ತೊಬ್ಬ ಸಹಪರಿಕ್ಷಾರ್ಥಿ ನೀಡಿರುವ ಹೇಳಿಕೆ ಇದೀಗ ಬಾರಿ ಚರ್ಚೆಗೆ ಗ್ರಾಸವಾಗಿದೆ..

ಹೌದು.. ಹಾವೇರಿ VAO ಪರೀಕ್ಷಾ ಅಕ್ರಮದ ಆರೋಪಕ್ಕೆ ಇದೀಗ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದೆ. ಪರೀಕ್ಷಾ ಕೇಂದ್ರದಲ್ಲೇ ಶಂಕರ್ ಬನ್ನೂರು ಇರಲಿಲ್ಲ ಎಂಬ ಸಹಪರೀಕ್ಷಾರ್ಥಿಯ ಹೇಳಿಕೆ ಪ್ರಕರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಒಂದೇ ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಯೇ ಶಂಕರ್ ಬನ್ನೂರು ಪರೀಕ್ಷಾ ಕೇಂದ್ರಕ್ಕೆ ಬಂದಿರಲಿಲ್ಲ ಎಂದು ಸಹಪರಿಕ್ಷಾರ್ಥಿ ಸತೀಶ್ ಲಮಾಣಿ ವಿಡಿಯೋ ಹರಿಬಿಟ್ಟಿದ್ದಾನೆ. ಆದರೆ ಈ ಹಿಂದೆ ಪರೀಕ್ಷೆ ವೇಳೆ ಶಂಕರ್ ಬನ್ನೂರು ಮೊಬೈಲ್ ನೋಡಿಕೊಂಡು ಪರೀಕ್ಷೆ ಬರೆದಿದ್ದಾನೆ ಎಂದು KEA ಹಾಗೂ ಜಿಲ್ಲಾಡಳಿತ ಸ್ಪಷ್ಟನೆ ನೀಡಿತ್ತು. ಇದೀಗ ಅಭ್ಯರ್ಥಿಯ ಹೇಳಿಕೆ ಮತ್ತು ಅಧಿಕಾರಿಗಳ ಸ್ಪಷ್ಟನೆ ನಡುವೆ ತಾಳೆಯಾಗದ ಮಾಹಿತಿ ಹೊರಬಂದಿದೆ. ಹಾಗಾದರೆ ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ನೋಡಿಕೊಂಡು ಪರೀಕ್ಷೆ ಬರೆದಿದ್ದು ಯಾರು. ಶಂಕರ್ ಬನ್ನೂರು ಹೆಸರಿನಲ್ಲಿ ನಡೆದಿದ್ದೇನು. ಅಭ್ಯರ್ಥಿಯ ಈ ಹೊಸ ಹೇಳಿಕೆ VAO ಅಕ್ರಮ ಪ್ರಕರಣದ ತನಿಖೆಗೆ ಮತ್ತಷ್ಟು ಕುತೂಹಲ ಹಾಗೂ ಗೊಂದಲ ಸೃಷ್ಟಿಸಿದೆ..

VAO ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಈಗ ಅಭ್ಯರ್ಥಿಯ ಜೊತೆಗೆ ಪರೀಕ್ಷಾ ಕೇಂದ್ರದ ಅಧಿಕಾರಿಗಳಿಗೂ ಸಂಕಷ್ಟ ಎದುರಾಗಿದೆ. ಪರೀಕ್ಷಾ ಕರ್ತವ್ಯದಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ನಾಲ್ವರು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮಾಮಲೆದೇಸಾಯಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಮಾ ಕಾಂತ್ ಭಟ್, ಕೊಠಡಿ ಮೇಲ್ವಿಚಾರಕ ಸುರೇಶ್ ಸೌದಿ ಹಾಗೂ ವಸ್ತ್ರ ನೀತಿ ಅಧಿಕಾರಿ ರಾಜು ಕುಂದಪ್ಪ ವಿರುದ್ಧ ಕ್ರಮಕ್ಕೆ ಆಡಳಿತ ಮಂಡಳಿಗೆ ಜಿಲ್ಲಾಧಿಕಾರಿ ಪತ್ರ ಬರೆದಿದ್ದಾರೆ. ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಇನ್ನು ಪರೀಕ್ಷೆಯ ಒಟ್ಟಾರೆ ಮೇಲ್ವಿಚಾರಣೆ ಜವಾಬ್ದಾರಿ ಹೊಂದಿದ್ದ PWD ಅಧಿಕಾರಿ ಶಿವಪ್ಪ ವಿರುದ್ಧವೂ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ನಾಲ್ವರು ಅಧಿಕಾರಿಗಳಿಗೆ ನೀಡಿದ್ದ ನೋಟಿಸ್‌ಗೆ ಬಂದ ಉತ್ತರ ಸಮಂಜಸವಾಗಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಇನ್ನೊಂದೆಡೆ ಶಂಕರ್ ಬನ್ನೂರು ಪರೀಕ್ಷೆಯನ್ನೇ ಬರೆದಿಲ್ಲ ಎಂಬ ಆರೋಪಕ್ಕೂ ಜಿಲ್ಲಾಡಳಿತ ದಾಖಲೆಗಳ ಸಮೇತ ಉತ್ತರ ನೀಡಿದೆ.

ಪರೀಕ್ಷಾ ಕೇಂದ್ರದ ಗೇಟ್‌ನಲ್ಲೇ ಫೇಸ್ ರೆಕಗ್ನಿಷನ್ ಮೂಲಕ ಅಭ್ಯರ್ಥಿಗಳ ಹಾಜರಾತಿ ಪರಿಶೀಲನೆ ಮಾಡಲಾಗಿದೆ. ಶಂಕರ್ ಬನ್ನೂರಿನ ಹಾಲ್‌ಟಿಕೆಟ್ ಫೋಟೋ ಹಾಗೂ ಪರೀಕ್ಷಾ ಕೇಂದ್ರದಲ್ಲಿ ಸೆರೆಹಿಡಿದ ಫೋಟೋ ಹೊಂದಾಣಿಕೆಯಾಗಿದೆ. ಹಾಜರಾತಿ ಪುಸ್ತಕದಲ್ಲಿನ ಸಹಿ ಯೂ ಮ್ಯಾಚ್ ಆಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲೂ ಶಂಕರ್ ಪರೀಕ್ಷಾ ಕೇಂದ್ರದಲ್ಲಿ ಇರುವುದಕ್ಕೆ ಸಾಕ್ಷ್ಯವಿದೆ ಎಂದು ಜಿಲ್ಲಾಡಳಿತ ಹೇಳಿದೆ. ಹೀಗಿರುವಾಗ ಶಂಕರ್ ಪರೀಕ್ಷೆ ಬರೆದಿಲ್ಲ ಎಂದು ಮತ್ತೊಬ್ಬ ಅಭ್ಯರ್ಥಿ ಸತೀಶ್ ಲಮಾಣಿ ನೀಡಿರುವ ಹೇಳಿಕೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಸತೀಶ್ ಲಮಾಣಿ ಹೇಳಿಕೆಗೆ ಹಾವೇರಿ ಎಸ್‌ಪಿ ಯಶೋಧಾ ವಂಟಗೋಡಿ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲಾಡಳಿತ ಈಗಾಗಲೇ ಸ್ಪಷ್ಟನೆ ನೀಡಿದ ಮೇಲೂ ಈ ರೀತಿ ಯ ಹೇಳಿಕೆ ನೀಡಿರುವುದು ಸರಿಯಲ್ಲ. ಸತೀಶ್ ಲಮಾಣಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಯುತ್ತೇವೆ. ಶಂಕರ್ ಬನ್ನೂರು ಪರೀಕ್ಷೆ ಬರೆದಿಲ್ಲ ಎನ್ನಲು ದಾಖಲೆಗಳಿದ್ದರೆ ಸಲ್ಲಿಸಲಿ ಎಂದು ಸವಾಲು ಹಾಕಿದ್ದಾರೆ. ಫಾಲ್ಸ್ ಇನ್ಫಾರ್ಮೇಷನ್ ಹರಡಬಾರದು. ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಈ ವಿಚಾರ ವಾಗಿ ಮುಖ್ಯಮಂತ್ರಿಗಳಿಂದಲೂ ಸೂಚನೆ ಬಂದಿದೆ ಎಂದು ಎಸ್‌ಪಿ ಎಚ್ಚರಿಕೆ ನೀಡಿ ದ್ದಾರೆ.

ಒಟ್ಟಿನಲ್ಲಿ VAO ಪರೀಕ್ಷಾ ಅಕ್ರಮ ಪ್ರಕರಣ ಈಗ ಹಲವು ಆಯಾಮಗಳನ್ನು ಪಡೆದುಕೊಂಡಿದೆ. ಒಂದು ಕಡೆ ಅಭ್ಯರ್ಥಿ ವಿರುದ್ಧ ಪೊಲೀಸ್ ತನಿಖೆ, ಮತ್ತೊಂದು ಕಡೆ ಪರೀಕ್ಷಾ ಕೇಂದ್ರದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ. ಇದರ ನಡುವೆ ಪರೀಕ್ಷೆಯನ್ನೇ ಬರೆದಿಲ್ಲ ಎಂಬ ಮತ್ತೊಬ್ಬ ಅಭ್ಯರ್ಥಿಯ ಹೇಳಿಕೆ. ಹೀಗಾಗಿ ಮುಂದಿನ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ...

Add Zee News as a Preferred Source
TAGS:
Crime