• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /Sting Operation: 'ನನ್ನನ್ನ ಟಚ್ ಮಾಡೋ ಧೈರ್ಯ ಇಲ್ವಾ?' ಸರ್ಕಾರಕ್ಕೆ ಎಚ್‌.ಡಿ.ಕುಮಾರಸ್ವಾಮಿ ನೇರ ಸವಾಲ್!

Sting Operation: 'ನನ್ನನ್ನ ಟಚ್ ಮಾಡೋ ಧೈರ್ಯ ಇಲ್ವಾ?' ಸರ್ಕಾರಕ್ಕೆ ಎಚ್‌.ಡಿ.ಕುಮಾರಸ್ವಾಮಿ ನೇರ ಸವಾಲ್!

ಹನಿಟ್ರ್ಯಾಪ್ ವಿವಾದದ ನಡುವೆ ಜೆಡಿಎಸ್ ಕಾರ್ಯಕರ್ತರನ್ನ ಪೊಲೀಸರು ಗುರಿಯಾಗಿಸುತ್ತಿದ್ದಾರೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಶಂಕರ್ ಎಂಬ ಯುವಕನನ್ನ ಪೊಲೀಸರು ಕರೆದೊಯ್ದಿದ್ದಾರೆ ಮತ್ತು ಮತ್ತೊಬ್ಬ ಕಾರ್ಯಕರ್ತ ಮೋಹನ್ ಕುಟುಂಬಕ್ಕೆ ಕಿರುಕುಳ ನೀಡಲಾಗುತ್ತಿದೆ ಎಂಬ ಮಾಹಿತಿ ಬಂದಿದೆ ಎಂದು ಅವರು ಹೇಳಿದ್ದಾರೆ. ತಮ್ಮನ್ನ ನೇರವಾಗಿ ಎದುರಿಸಲಾಗದೆ ಕಾರ್ಯಕರ್ತರನ್ನ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಹೋರಾಡುವುದಾಗಿ ಎಚ್ಚರಿಸಿದ್ದಾರೆ.

Written ByPuttaraj K Alur
Published: Oct 14, 2026, 08:21 PM IST|Updated: Oct 14, 2026, 08:33 PM IST
joinshare
Sting Operation: 'ನನ್ನನ್ನ ಟಚ್ ಮಾಡೋ ಧೈರ್ಯ ಇಲ್ವಾ?' ಸರ್ಕಾರಕ್ಕೆ ಎಚ್‌.ಡಿ.ಕುಮಾರಸ್ವಾಮಿ ನೇರ ಸವಾಲ್!
Image Credit: Sting Operation Controversy

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

Trending

  • News
  • Photos
  • Videos
Sting Operation: 'ನನ್ನನ್ನ ಟಚ್ ಮಾಡೋ ಧೈರ್ಯ ಇಲ್ವಾ?' ಸರ್ಕಾರಕ್ಕೆ ಎಚ್‌.ಡಿ.ಕುಮಾರಸ್ವಾಮಿ ನೇರ ಸವಾಲ್!

Sting Operation: 'ನನ್ನನ್ನ ಟಚ್ ಮಾಡೋ ಧೈರ್ಯ ಇಲ್ವಾ?' ಸರ್ಕಾರಕ್ಕೆ ಎಚ್‌.ಡಿ.ಕುಮಾರಸ್ವಾಮಿ ನೇರ ಸವಾಲ್!

2

ತ್ರಿವರ್ಣ ಧ್ವಜ ಬದಲಾವಣೆಗೆ ಆಗ್ರಹ! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪ್ರಕರಣದ ಹಿಂದಿನ ಸತ್ಯವೇನು?

3

ಜೆಡಿಎಸ್ ಸೋಶಿಯಲ್ ಮೀಡಿಯಾ ಪೊಲೀಸ್ ವಶಕ್ಕೆ HDK ಕಿಡಿ

4

SRH ಜೊತೆ ಡೀಲ್‌ಗೆ ಮುಂದಾದ ಡೆಲ್ಲಿ ಕ್ಯಾಪಿಟಲ್ಸ್‌! ಟೀಮ್ ಇಂಡಿಯಾ ಆಟಗಾರನಿಗೆ ₹5 ಕೋಟಿ ನಷ್ಟ?

5

Mysuru Dasara 2026: ಅಭಿಮನ್ಯು ಬಳಿಕ ಪ್ರಶಾಂತನಿಗೆ ಪಟ್ಟ! ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊರುವ ಜವಾಬ್ದಾರಿ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Sting Operation Controversy: ಕರ್ನಾಟಕ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿವಾದದ ಕಾವು ಹೆಚ್ಚಾಗಿದ್ದು, ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಪೊಲೀಸ್ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯರ ವರ್ಚಸ್ಸಿಗೆ ಮಸಿ ಬಳಿಯುವ ಉದ್ದೇಶದಿಂದ ವ್ಯವಸ್ಥಿತ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿರುವ ಅವರು, ಈ ವಿಚಾರವನ್ನ ಪ್ರಶ್ನಿಸಿದ್ದಕ್ಕಾಗಿ ತಮ್ಮ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಯುವಕರನ್ನ ಗುರಿಯಾಗಿಸಲಾಗುತ್ತಿದೆ ಎಂದು ದೂರಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಕುಮಾರಸ್ವಾಮಿ, ಜೆಡಿಎಸ್‌ನ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಶಂಕರ್ ಎಂಬ ಯುವಕನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಪಕ್ಷದ ಮತ್ತೊಬ್ಬ ಕಾರ್ಯಕರ್ತ ಮೋಹನ್ ಅವರ ಮನೆಗೆ ಪೊಲೀಸರು ತೆರಳಿ ಕುಟುಂಬದವರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಬಂದಿದೆ ಎಂದು ತಿಳಿಸಿದ್ದಾರೆ. ಈ ಆರೋಪಗಳ ಕುರಿತು ಪೊಲೀಸ್ ಇಲಾಖೆಯ ಅಧಿಕೃತ ಪ್ರತಿಕ್ರಿಯೆ ಲಭ್ಯವಿದೆಯೇ ಎಂಬುದನ್ನ ಪ್ರತ್ಯೇಕವಾಗಿ ದೃಢಪಡಿಸಬೇಕಿದೆ.

'ಪ್ರಶ್ನೆ ಮಾಡಿದ್ದಕ್ಕೆ ನಮ್ಮ ಹುಡುಗರನ್ನು ಟಾರ್ಗೆಟ್ ಮಾಡಬೇಡಿ'

ತಮ್ಮ ಪೋಸ್ಟ್‌ನಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರನ್ನ ಉಲ್ಲೇಖಿಸಿರುವ ಕುಮಾರಸ್ವಾಮಿ, ಎಂಟು ವರ್ಷಗಳಿಗೂ ಹೆಚ್ಚು ಕಾಲ ರಾಜ್ಯವನ್ನ ಆಳಿದ ಮಾಜಿ ಮುಖ್ಯಮಂತ್ರಿಯ ವರ್ಚಸ್ಸಿಗೆ ಹನಿಟ್ರ್ಯಾಪ್ ಹೆಸರಿನಲ್ಲಿ ಮಸಿ ಬಳಿಯಲು ವ್ಯವಸ್ಥಿತ ಹಾಗೂ ಸಂಘಟಿತ ಷಡ್ಯಂತ್ರ ರೂಪಿಸಲಾಗಿದೆ ಎಂಬ ಆರೋಪವನ್ನ ಮುಂದಿಟ್ಟಿದ್ದಾರೆ. ಈ ವಿಚಾರವನ್ನ ಪ್ರಶ್ನಿಸಿದ್ದಕ್ಕಾಗಿ ತಮ್ಮನ್ನ ಮತ್ತು ತಮ್ಮೊಂದಿಗೆ ಇರುವ ಯುವಕರನ್ನ ಗುರಿಯಾಗಿಸಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ವಿರುದ್ಧ ನೇರವಾಗಿ ರಾಜಕೀಯವಾಗಿ ಎದುರಿಸುವ ಬದಲು ಪಕ್ಷದ ಸಾಮಾಜಿಕ ಜಾಲತಾಣ ಕಾರ್ಯಕರ್ತರ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದು ಅವರ ಪ್ರಮುಖ ಆರೋಪವಾಗಿದೆ. ಹನಿಟ್ರ್ಯಾಪ್ ಪ್ರಕರಣದ ಸುತ್ತ ನಡೆಯುತ್ತಿರುವ ಬೆಳವಣಿಗೆಗಳು ರಾಜಕೀಯ ಸಂಘರ್ಷಕ್ಕೆ ಕಾರಣವಾಗಿರುವ ಹೊತ್ತಿನಲ್ಲಿ ಕುಮಾರಸ್ವಾಮಿ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.  

ಶಂಕರ್‌ನನ್ನ ಪೊಲೀಸರು ಕರೆದೊಯ್ದಿದ್ದೇಕೆ?

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಎಂಟು ವರ್ಷಗಳಿಗೂ ಹೆಚ್ಚುಕಾಲ ರಾಜ್ಯವನ್ನು ಆಳಿದ ಮಾಜಿ ಮುಖ್ಯಮಂತ್ರಿ ವರ್ಚಸ್ಸಿಗೆ ಹನಿಟ್ರ್ಯಾಪ್ ಹೆಸರಿನಲ್ಲಿ ಮಸಿ ಬಳಿಯಲು ರೂಪಿಸಿದ ವ್ಯವಸ್ಥಿತ, ಸಂಘಟಿತ ಷಡ್ಯಂತ್ರವನ್ನು ಪ್ರಶ್ನಿಸಿದ್ದಕ್ಕೆ ನನ್ನನ್ನು ಹಾಗೂ ನನ್ನ ಜೊತೆಗಿರುವ ಹುಡುಗರನ್ನು ಟಾರ್ಗೆಟ್ ಮಾಡುತ್ತಿರುವುದು ಲಜ್ಜೆಗೆಡಿತನ. ಯಾವುದೇ ಪ್ರಕರಣ ದಾಖಲಿಸದೇ ಇಂದು ಬೆಳಗ್ಗೆ @JanataDal_S ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಶಂಕರ್ ಎಂಬ ಯುವಕನನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ನಂತರ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪಕ್ಷದ ಕಾನೂನು ವಿಭಾಗ ದೂರು ದಾಖಲಿಸಿದ ಮೇಲೆ ಆ ಯುವಕನಿಂದ ಆತನ ಪತ್ನಿಗೆ ಕರೆ ಮಾಡಿಸಿ, "ಸಿಸಿಬಿ ಪೊಲೀಸರು ನನ್ನನ್ನು ಕರೆದುಕೊಂಡು ಹೋಗಿದ್ದಾರೆ" ಎಂದಷ್ಟೇ ಹೇಳಿಸಿ ಕರೆ ಕಟ್ ಮಾಡಿದ್ದೀರಿ! ಸಾಕು ಮಾಡಿ ನಿಮ್ಮ ಕಪಟ ನಾಟಕ. ಯಾವ ಆಧಾರದ ಮೇಲೆ ಆತನನ್ನು ಕರೆದುಕೊಂಡು ಹೋಗಿದ್ದೀರಿ? ಸಿದ್ದರಾಮಯ್ಯ ಅವರ ವಿರುದ್ಧ ಸ್ಟಿಂಗ್ ಮಾಡಿ, ದೃಶ್ಯಗಳನ್ನು ಚಿತ್ರೀಕರಿಸಿ ಅವರ ಚಾರಿತ್ರ್ಯಹರಣಕ್ಕೆ ಕಾರಣನಾದ ನೀಚನನ್ನು ಬಿಟ್ಟು, ಆ ನೀಚತನವನ್ನು ಪ್ರಶ್ನಿಸಿದ ನನ್ನನ್ನು ನೇರವಾಗಿ ಎದುರಿಸಲಾಗದೆ ನನ್ನ ಹುಡುಗರ ಬೆನ್ಹತ್ತಿದ್ದೀರಿ! ಎಲ್ಲವನ್ನೂ ರೆಕಾರ್ಡ್ ಮಾಡಿದ 'ಮಾಧ್ಯಮದ ಮುಸುಕು' ಹಾಕಿಕೊಂಡಿರುವ ಆ 'ಸಂಚುಕೋರ' ರಾಜಾರೋಷವಾಗಿ ತಿರುಗಾಡುತ್ತಿದ್ದರೆ, ಆ ನೈಜ ಅಪರಾಧಿಯನ್ನು ಬಿಟ್ಟು ನಮ್ಮ ಸೋಶಿಯಲ್ ಮೀಡಿಯಾ ಹುಡುಗರ ಮೇಲೆ ಬಿದ್ದಿದ್ದೀರಿ. ಪ್ರಶ್ನೆ ಮಾಡಿದ್ದು ನಾನು. ಸಿಬಿಐ ತನಿಖೆಗೆ ಒತ್ತಾಯಿಸಿದ್ದು ನಾನು. ಧೈರ್ಯವಿದ್ದರೆ ನನ್ನ ಬಳಿಗೇ ನಿಮ್ಮ ಪೊಲೀಸರನ್ನು ಕಳಿಸಬೇಕಿತ್ತು, ಅಮಾಯಕರ ಮೇಲೇನು ನಿಮ್ಮ ಪ್ರತಾಪ.. ಅಷ್ಟೇ ಅಲ್ಲ, ಈಗ ನಮ್ಮ ಸೋಶಿಯಲ್ ಮೀಡಿಯಾ ತಂಡದ ಮೋಹನ್ ಎಂಬ ಇನ್ನೊಬ್ಬ ಹುಡುಗನ ಮನೆ ಮುಂದೆ ಹೋಗಿ ಪೊಲೀಸರು ಗಲಾಟೆ ಮಾಡುತ್ತಿದ್ದಾರೆ, ಅವರ ಕುಟುಂಬದವರಿಗೆ ಕಿರುಕುಳ ಕೊಡುತ್ತಿದ್ದಾರೆ ಎಂಬ ಮಾಹಿತಿ ನನಗೆ ಬಂದಿದೆ. ಇದೆಲ್ಲವನ್ನೂ ಸಹಿಸುವ ಪ್ರಶ್ನೆಯೇ ಇಲ್ಲ. ನಮ್ಮವರಿಗೆ ಹೀಗೆ ಸುಖಾಸುಮ್ಮನೆ ಕಿರುಕುಳ ಕೊಟ್ಟರೆ ಕೈಕಟ್ಟಿ ಕೂರುವುದಿಲ್ಲ ನಾವು. ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಎದುರಿಸಲು ಸಿದ್ಧರಿದ್ದೇವೆ.

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 14, 2026

 ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಶಂಕರ್ ಎಂಬ ಯುವಕನನ್ನ ಬುಧವಾರ ಬೆಳಗ್ಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ತಮ್ಮ ಹೇಳಿಕೆಯ ಪ್ರಕಾರ, ಆ ಸಂದರ್ಭದಲ್ಲಿ ಯಾವುದೇ ಪ್ರಕರಣ ದಾಖಲಿಸಿರುವ ಬಗ್ಗೆ ಮಾಹಿತಿ ಇರಲಿಲ್ಲವೆಂದು ಅವರು ಪ್ರಶ್ನಿಸಿದ್ದಾರೆ.

 

ನಂತರ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಜೆಡಿಎಸ್‌ನ ಕಾನೂನು ವಿಭಾಗ ದೂರು ದಾಖಲಿಸಿದ ಬಳಿಕ, ಶಂಕರ್ ಅವರಿಂದ ಪತ್ನಿಗೆ ಕರೆ ಮಾಡಿಸಿ ತಾನು ಸಿಸಿಬಿ ಪೊಲೀಸರ ವಶದಲ್ಲಿರುವುದಾಗಿ ತಿಳಿಸಿ ಕರೆ ಕಡಿತಗೊಳಿಸಲಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಶಂಕರ್ ಅವರನ್ನ ಯಾವ ಪ್ರಕರಣದ ಆಧಾರದ ಮೇಲೆ ಕರೆದುಕೊಂಡು ಹೋಗಲಾಗಿದೆ? ಪೊಲೀಸ್ ಕ್ರಮಕ್ಕೆ ಕಾರಣವೇನು? ಎಂಬ ಪ್ರಶ್ನೆಗಳನ್ನ ಅವರು ಎತ್ತಿದ್ದಾರೆ.  

'ನನ್ನನ್ನ ಎದುರಿಸಲಾಗದೆ ಕಾರ್ಯಕರ್ತರ ಬೆನ್ನಟ್ಟಿದ್ದೀರಿ'

ಮಾಜಿ ಸಿಎಂ ಸಿದ್ದರಾಮಯ್ಯರ ವಿರುದ್ಧ ಸ್ಟಿಂಗ್ ಕಾರ್ಯಾಚರಣೆ ನಡೆಸಿ, ದೃಶ್ಯಗಳನ್ನ ಚಿತ್ರೀಕರಿಸಿ ಅವರ ಚಾರಿತ್ರ್ಯಕ್ಕೆ ಧಕ್ಕೆ ಉಂಟುಮಾಡುವ ಪ್ರಯತ್ನ ನಡೆದಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆಂದು ತಾವು ಹೇಳುತ್ತಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಅದನ್ನ ಪ್ರಶ್ನಿಸಿದ ತಮ್ಮ ಪಕ್ಷದ ಕಾರ್ಯಕರ್ತರನ್ನ ಗುರಿಯಾಗಿಸಲಾಗಿದೆ ಎಂಬುದು ಅವರ ವಾದವಾಗಿದೆ.

ಮಾಧ್ಯಮದ ಸೋಗಿನಲ್ಲಿ ಸಂಚು ರೂಪಿಸಿದ ವ್ಯಕ್ತಿ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ ಎಂದು ತಮ್ಮ ಪೋಸ್ಟ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ನೈಜ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಇದೇ ವೇಳೆ ಈ ಪ್ರಕರಣದಲ್ಲಿ ತಾವು ಸಿಬಿಐ ತನಿಖೆಗೆ ಒತ್ತಾಯಿಸಿದ್ದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ತಮ್ಮನ್ನ ನೇರವಾಗಿ ಎದುರಿಸುವ ಧೈರ್ಯವಿದ್ದರೆ ತಮ್ಮ ಬಳಿಗೆ ಪೊಲೀಸರನ್ನ ಕಳುಹಿಸಬೇಕಿತ್ತು ಎಂಬ ಸವಾಲಿನ ಮಾತುಗಳನ್ನೂ ಅವರು ಆಡಿದ್ದಾರೆ.

ತೊಂದರೆ ನೀಡಿದರೆ ಸುಮ್ಮನೆ ಕೂರುವುದಿಲ್ಲ!

ತಮ್ಮ ಸಾಮಾಜಿಕ ಜಾಲತಾಣ ತಂಡದ ಮತ್ತೊಬ್ಬ ಸದಸ್ಯ ಮೋಹನ್ ಅವರ ಮನೆ ಮುಂದೆ ಪೊಲೀಸರು ತೆರಳಿ ಗಲಾಟೆ ಮಾಡುತ್ತಿದ್ದಾರೆ ಮತ್ತು ಅವರ ಕುಟುಂಬದವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಪಕ್ಷದ ಕಾರ್ಯಕರ್ತರಿಗೆ ಸುಖಾಸುಮ್ಮನೆ ತೊಂದರೆ ನೀಡಿದರೆ ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಸಿರುವ ಅವರು, ಈ ವಿಚಾರವನ್ನ ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಎದುರಿಸಲು ಸಿದ್ಧರಿರುವುದಾಗಿ ಹೇಳಿದ್ದಾರೆ. ಕುಮಾರಸ್ವಾಮಿ ಅವರ ಆರೋಪಗಳು ಹನಿಟ್ರ್ಯಾಪ್ ವಿವಾದಕ್ಕೆ ಹೊಸ ರಾಜಕೀಯ ಆಯಾಮ ನೀಡಿವೆ. ಆದರೆ ಶಂಕರ್ ಮತ್ತು ಮೋಹನ್ ಪ್ರಕರಣಗಳಲ್ಲಿನ ಪೊಲೀಸ್ ಕ್ರಮದ ಹಿನ್ನೆಲೆ, ದೂರುಗಳ ಸ್ವರೂಪ ಹಾಗೂ ಆರೋಪಗಳ ಸತ್ಯಾಸತ್ಯತೆ ಕುರಿತು ಅಧಿಕೃತ ಮಾಹಿತಿ ಬಹಿರಂಗವಾಗಬೇಕಿದೆ.

ಒಟ್ನಲ್ಲಿ ಹನಿಟ್ರ್ಯಾಪ್ ವಿವಾದದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರನ್ನ ಪೊಲೀಸರು ಗುರಿಯಾಗಿಸುತ್ತಿದ್ದಾರೆ ಎಂಬ ಕುಮಾರಸ್ವಾಮಿ ಅವರ ಆರೋಪ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಈ ಬೆಳವಣಿಗೆಗಳ ಕುರಿತು ಪೊಲೀಸ್ ಇಲಾಖೆ ಮತ್ತು ಸಂಬಂಧಪಟ್ಟ ಇತರರ ಪ್ರತಿಕ್ರಿಯೆ ಮುಂದಿನ ದಿನಗಳಲ್ಲಿ ಮಹತ್ವ ಪಡೆಯಲಿದೆ.

Add Zee News as a Preferred Source
TAGS:
Karnataka Politics
Kannada News