SOCIAL MEDIA

Newsletter

PARTNER SITES
Select Language Select State

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಲಿದ್ದು ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Written By Yashaswini V
Published: Nov 02, 2026, 08:05 AM IST | Updated: Nov 02, 2026, 08:06 AM IST
Join

ನವೆಂಬರ್‌ ಮೊದಲ ವಾರದಿಂದ ರಾಜ್ಯದಲ್ಲಿ ಮತ್ತೆ ವರುಣ ಆರ್ಭಟಿಸಲಿದ್ದು, ನವೆಂಬರ್‌ 02ರಂದು ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದೆ.

ಹೌದು, ಕರ್ನಾಟಕ ಹವಾಮಾನದ ಬಗ್ಗೆ ಎಚ್ಚರಿಕೆ (Karnataka Weather Alert) ನೀಡಿರುವ ಭಾರತೀಯ ಹವಾಮಾನ ಇಲಾಖೆ, ನವೆಂಬರ್ 5ರವರೆಗೆ ರಾಜ್ಯದಲ್ಲಿ ಬಿರುಗಾಳಿ ಮತ್ತು ಮಿಂಚಿನ ಸಾಧ್ಯತೆ ಇದೆ. ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ ಬಗ್ಗೆ ಭವಿಷ್ಯ ನುಡಿದಿದೆ.

ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್:
ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ ಇದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ರಾಜ್ಯಾದ್ಯಂತ ನವೆಂಬರ್ 2 ರಿಂದ 5ರವರೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಅಲ್ಲಲ್ಲಿ ಗುಡುಗು-ಮಿಂಚು ಕೂಡ ಸಂಭವಿಸಬಹುದು ಎಂದು ಐಎಂಡಿ ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆಯೂ ನೀಡಲಾಗಿದೆ.

ನವೆಂಬರ್ 5 ರವರೆಗೂ ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ:
ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇದೇ ವೇಳೆ, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಭಾಗಗಳಲ್ಲೂ ಮಳೆ ಅಥವಾ ಗುಡುಗು ಸಹಿತ ಮಳೆಯ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ‌ ಎನ್ನಲಾಗಿದೆ.
 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 

ZEENEWS TRENDING STORIES