• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಕರ್ನಾಟಕದ ಕರಾವಳಿಯಲ್ಲಿ ಇಂದು-ನಾಳೆ ವ್ಯಾಪಕ ಮಳೆ, ಒಳನಾಡಿನ ಹಲವೆಡೆ ಸಾಧಾರಣ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿಯಲ್ಲಿ ಇಂದು-ನಾಳೆ ವ್ಯಾಪಕ ಮಳೆ, ಒಳನಾಡಿನ ಹಲವೆಡೆ ಸಾಧಾರಣ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ಇಲಾಖೆ ರಾಜ್ಯದ ಕೆಲವು ಭಾಗಗಳಲ್ಲಿ ಅಕ್ಟೋಬರ್‌ 3 ಮತ್ತು 4 ರಂದು ಮಳೆ ಮುನ್ಸೂಚನೆ ನೀಡಿದ್ದು, ಕರಾವಳಿಯಲ್ಲಿ ವ್ಯಾಪಕ ಮಳೆ, ಒಳನಾಡಿನ ಹಲವೆಡೆ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

Written ByYashaswini V
Published: Oct 03, 2026, 07:57 AM IST|Updated: Oct 03, 2026, 07:59 AM IST
joinshare
ಕರ್ನಾಟಕದ ಕರಾವಳಿಯಲ್ಲಿ ಇಂದು-ನಾಳೆ ವ್ಯಾಪಕ ಮಳೆ, ಒಳನಾಡಿನ ಹಲವೆಡೆ ಸಾಧಾರಣ ಮಳೆ ಸಾಧ್ಯತೆ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ಕರ್ನಾಟಕದ ಕರಾವಳಿಯಲ್ಲಿ ಇಂದು-ನಾಳೆ ವ್ಯಾಪಕ ಮಳೆ, ಒಳನಾಡಿನ ಹಲವೆಡೆ ಸಾಧಾರಣ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿಯಲ್ಲಿ ಇಂದು-ನಾಳೆ ವ್ಯಾಪಕ ಮಳೆ, ಒಳನಾಡಿನ ಹಲವೆಡೆ ಸಾಧಾರಣ ಮಳೆ ಸಾಧ್ಯತೆ

2

ದಿನ ಭವಿಷ್ಯ 03-10-2026: ಶನಿವಾರದಂದು ವರಿಯಾನ್‌ ಯೋಗ.. ಈ ರಾಶಿಯವರಿಗೆ ಅಪಾರ ಲಾಭ

3

ವಯಸ್ಸು ಒಂದೇ ಆದರೂ ಕೆಲವರು ಯಂಗ್‌, ಕೆಲವರು ವಯಸ್ಸಾದಂತೆ ಕಾಣೋದ್ಯಾಕೆ? ವೈದ್ಯರ ಉತ್ತರ ಇಲ್ಲಿದೆ

4

ಬೇಲ್‌ಗೆ ಮೊದಲ ದಿನವೇ ಫುಲ್ ಮಾರ್ಕ್ಸ್.. ಶಿವಣ್ಣನ ಮೀಸೆ ಲುಕ್‌ಗೆ ಫ್ಯಾನ್ಸ್ ಫಿದಾ!..

5

44 ವರ್ಷಗಳ ಬಳಿಕ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಬೇಟೆ! ಭಾರತ ಮಹಿಳಾ ಹಾಕಿ ತಂಡಕ್ಕೆ ಐತಿಹಾಸಿಕ ಗೆಲುವು!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 3 ಮತ್ತು 4ರಂದು ಕೆಲವೆಡೆ ವ್ಯಾಪಕ ಮಳೆ ಆಗಲಿದ್ದು, ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆ ಮುನ್ಸೂಚನೆ ನೀಡಲಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎನ್ನಲಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ವಿವರ ಇಲ್ಲಿದೆ.

ಕರ್ನಾಟಕ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ,  ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆ ಮುನ್ಸೂಚನೆ ನೀಡಲಾಗಿದ್ದು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎನ್ನಲಾಗಿದೆ.

ಕರಾವಳಿಯಲ್ಲಿ ವ್ಯಾಪಕ ಮಳೆ:
ಇಂದು (ಅಕ್ಟೋಬರ್‌ 3) ನಾಳೆ (ಅಕ್ಟೋಬರ್‌ 4) ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ.

ಅಕ್ಟೋಬರ್‌ 3 ರಂದು ಹವಾಮಾನ ವರದಿ:
ಅಕ್ಟೋಬರ್‌ 3  ಶನಿವಾರ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ,  ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅಕ್ಟೋಬರ್ 3ರಂದು ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ಯಾವೆಲ್ಲ ಜಿಲ್ಲೆಗಳಲ್ಲಿ ಒಣಹವೆ?
ಐಎಂಡಿ ಪ್ರಕಾರ, ರಾಮನಗರ, ತುಮಕೂರು, ವಿಜಯನಗರ, ದಾವಣಗೆರೆ, ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ಅಕ್ಟೋಬರ್‌ 4ರಂದು ಹವಾಮಾನ ವರದಿ:
ಅಕ್ಟೋಬರ್ 4ರಂದು ಕೂಡ ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ:-
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಭಾನುವಾರ (ಅಕ್ಟೋಬರ್ 4) ರಾಜ್ಯ ರಾಜಧಾನಿ ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷೆ ಇದೆ ಎನ್ನಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ:
ಭಾನುವಾರ (ಅಕ್ಟೋಬರ್ 4) ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಕೊಪ್ಪಳ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಆದರೆ, ಬಾಗಲಕೋಟೆ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
 

Add Zee News as a Preferred Source
TAGS:
Weather Update