SOCIAL MEDIA

Newsletter

PARTNER SITES
Select Language Select State

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು & ನಾಳೆ ಗುಡುಗು ಸಹಿತ ಭಾರೀ ಮಳೆ

ಅಕ್ಟೋಬರ್ 15 ಮತ್ತು 16ರಂದು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗಿನಿಂದ ಕೂಡಿದ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.

Written By Yashaswini V
Published: Oct 15, 2026, 11:07 AM IST | Updated: Oct 15, 2026, 11:08 AM IST
Join

ಕರ್ನಾಟಕದ ಹಲವು ಭಾಗಗಳಲ್ಲಿ ಇಂದು (ಅಕ್ಟೋಬರ್ 15, ಗುರುವಾರ) ಮತ್ತು ನಾಳೆ (ಅಕ್ಟೋಬರ್ 16, ಶುಕ್ರವಾರ) ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಈಶಾನ್ಯ ಮಾನ್ಸೂನ್‌ ದಕ್ಷಿಣ ಭಾರತದತ್ತ ಸಮೀಪಿಸುತ್ತಿರುವುದರಿಂದ ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ತಿಳಿದುಬಂದಿದೆ.

ಅಕ್ಟೋಬರ್‌ 15 ರಿಂದ ಅಕ್ಟೋಬರ್‌ 18ರ ನಡುವೆ ರಾಜ್ಯದಲ್ಲಿ ಭಾರೀ ಮಳೆ:
ಅಕ್ಟೋಬರ್‌ 15 ಮತ್ತು ಅಕ್ಟೋಬರ್‌ 16ರಂದು ಎಂದರೆ ಗುರುವಾರ & ಶುಕ್ರವಾರ ಎರಡೂ ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಭವಿಷ್ಯ ನುಡಿದಿದೆ. ಇದಲ್ಲದೆ, ಅಕ್ಟೋಬರ್‌ 17 ಮತ್ತು ಅಕ್ಟೋಬರ್‌ 18 ರಂದು ಎಂದರೆ ಶನಿವಾರ, ಭಾನುವಾರದಂದು ಕರ್ನಾಟಕದ ವಿವಿಧ ಭಾಗಗಳಲ್ಲಿ ಚದುರಿದಂತೆ ಮಳೆ ಆಗುವ ನಿರೀಕ್ಷೆಯಿದೆ ಎನ್ನಲಾಗಿದೆ.

ಮುಂದಿನ ಮೂರ್ನಾಲ್ಕು ದಿನಗಳ ಕಾಲ ಕರ್ನಾಟಕದ ಹವಾಮಾನ ಹೇಗಿರಲಿದೆ? ಎಲ್ಲೆಲ್ಲಿ ಮಳೆ ಆಗಲಿದೆ ಎಂದು ನೋಡುವುದಾದರೆ...
ಅಕ್ಟೋಬರ್‌ 15 ಮತ್ತು ಅಕ್ಟೋಬರ್‌ 16ರಂದು ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ:
ಐಎಂಡಿ ನೀಡಿರುವ ಅಲರ್ಟ್ ಪ್ರಕಾರ, ಅಕ್ಟೋಬರ್‌ 15 ಮತ್ತು ಅಕ್ಟೋಬರ್‌ 16ರಂದು ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40-50 ಕಿ.ಮೀ. ಇರಲಿದ್ದು ಗುಡುಗು, ಮಿಂಚು, ಬಿರುಗಾಳಿಯಿಂದ ಕೂಡಿದ ಭಾರೀ ಮಳೆ ನಿರೀಕ್ಷಿಸಲಾಗಿದೆ ಎನ್ನಲಾಗಿದೆ.

ಅಕ್ಟೋಬರ್ 15ರಂದು ಎಲ್ಲೆಲ್ಲಿ ಮಳೆ ಮುನ್ಸೂಚನೆ:
ಐಎಂಡಿ ಪ್ರಕಾರ, ಅಕ್ಟೋಬರ್ 15ರಂದು ಸಿಲಿಕಾನ್‌ ಸಿಟಿ ಬೆಂಗಳೂರು, ಮೈಸೂರು, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಯೂ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಆಗಲಿದೆ ಎನ್ನಲಾಗುತ್ತಿದೆ.

ಅಕ್ಟೋಬರ್ 16ರಂದು ಹವಾಮಾನ ಮುನ್ಸೂಚನೆ:
ಅಕ್ಟೋಬರ್ 16ರಂದು ಬೆಂಗಳೂರು, ಮೈಸೂರು, ಕೊಡಗು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ ಇದ್ದು, ಒಂದೆರಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ನಿರೀಕ್ಷೆ ಇದೆ ಎನ್ನಲಾಗಿದೆ.

ಉತ್ತರ ಒಳನಾಡಿನಲ್ಲಿ ಒಣ ಹವೆ:
ಇದಲ್ಲದೆ, ಅಕ್ಟೋಬರ್‌ 15 & 16ರಂದು ಉತ್ತರ ಒಳನಾಡಿನ ಗದಗ, ಹಾವೇರಿ, ಕೊಪ್ಪಳ, ರಾಯಚೂರು ಸೇರಿದಂತೆ ಒಂದೆರಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷೆ ಇದ್ದು, ಬೀದರ್‌, ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎನ್ನಲಾಗಿದೆ.  
 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 

ZEENEWS TRENDING STORIES