SOCIAL MEDIA

Newsletter

PARTNER SITES
Select Language Select State

ಕರ್ನಾಟಕದಲ್ಲಿ ಅಕ್ಟೋಬರ್ 24ರವರೆಗೆ ಮುಂದುವರಿಯಲಿದೆ ಮಳೆಯ ಅಬ್ಬರ: ಹವಾಮಾನ ಇಲಾಖೆ ಎಚ್ಚರಿಕೆ

ಕೇವಲ ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ಇನ್ನುಳಿದ ಹಲವು ಜಿಲ್ಲೆಗಳಲ್ಲಿಯೂ ಅಕ್ಟೋಬರ್ 24ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Reported By Manjunath Naragund Written By Manjunath Naragund
Published: Oct 23, 2026, 07:50 AM IST | Updated: Oct 23, 2026, 07:55 AM IST
Image Credit: Rain Effect
Join

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರುಣದೇವನ ಆರ್ಭಟ ಮುಂದುವರಿದಿದ್ದು, ಇಂದು ಬೆಳ್ಳಂಬೆಳಗ್ಗೆಯೇ ಅನೇಕ ಪ್ರದೇಶಗಳಲ್ಲಿ ಬಿರುಸಿನ ಮಳೆಯಾಗಿದೆ. ಪ್ರಮುಖ ವಾಣಿಜ್ಯ ಕೇಂದ್ರವಾದ ಕೆ.ಆರ್ ಮಾರ್ಕೆಟ್ ಹಾಗೂ ಗಿರಿನಗರ ಸೇರಿದಂತೆ ನಗರದ ವಿವಿಧೆಡೆ ಜೋರು ಮಳೆ ಸುರಿದಿದ್ದು, ಬೆಳಗಿನ ಜಾವ ಕೆಲಸಕ್ಕೆ ತೆರಳುವ ಸಾರ್ವಜನಿಕರು ಮತ್ತು ವಾಹನ ಸವಾರರು ಪರದಾಡುವಂತಾಯಿತು. ತಂಪಾದ ವಾತಾವರಣದೊಂದಿಗೆ ಶುರುವಾದ ದಿನದಿಂದ ನಗರದ ಜನತೆಗೆ ಮಳೆಯ ಅನುಭವವಾಗಿದೆ.

ಕೇವಲ ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ಇನ್ನುಳಿದ ಹಲವು ಜಿಲ್ಲೆಗಳಲ್ಲಿಯೂ ಅಕ್ಟೋಬರ್ 24ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಮುಂಬರುವ ಚಳಿಗಾಲದಲ್ಲಿ ರಾಜ್ಯದಲ್ಲಿ ಚಳಿಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ದಕ್ಷಿಣ ಒಳನಾಡಿನ ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಲಾಗಿದೆ. ಇದರೊಂದಿಗೆ ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಹಾಗೆಯೇ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಹಾಗೂ ತುಂತುರು ಮಳೆಯಾಗುವ ಸಂಭವವಿದೆ. ಮತ್ತೊಂದೆಡೆ, ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಿಲ್ಲದೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಮಳೆಯ ಅಬ್ಬರವು ಕೆಲ ದಿನಗಳವರೆಗೆ ಮುಂದುವರಿಯಲಿದ್ದು, ಕೃಷಿ ಚಟುವಟಿಕೆಗಳ ಮೇಲೂ ಇದರ ಪ್ರಭಾವ ಬೀರಲಿದೆ.
 

Add Zee News as a Preferred Source
TAGS:

About the Author

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

ZEENEWS TRENDING STORIES