• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

ಕುಮಟಾ ಕಡೆಯಿಂದ ಅಂಕೋಲಾದತ್ತ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಬೆಳಸೆ ಗ್ರಾಮದ ಹತ್ತಿರ ಎದುರಿನಿಂದ ಬಂದ ಲಾರಿ ರಭಸವಾಗಿ ಗುದ್ದಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಬಸ್‌ನಲ್ಲಿದ್ದ ಪ್ರಯಾಣಿಕರು ಸೀಟುಗಳಿಂದ ಎಸೆಯಲ್ಪಟ್ಟು ತೀವ್ರ ರಕ್ತಸ್ರಾವದಿಂದ ಚೀರಾಡುವಂತಾಯಿತು

Reported ByManjunath NaragundEdited ByManjunath Naragund
Published: Oct 01, 2026, 07:18 PM IST|Updated: Oct 01, 2026, 07:27 PM IST
joinshare
ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!
Image Credit: Ankola Accident

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಸೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಕರುಣಾಜನಕ ಅಪಘಾತವೊಂದು ಸಂಭವಿಸಿದೆ. ವೇಗವಾಗಿ ಬಂದ ಲಾರಿಯೊಂದು ಕೆಎಸ್‌ಆರ್‌ಟಿಸಿ (KSRTC) ಬಸ್‌ಗೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ, ಬಸ್‌ನಲ್ಲಿದ್ದ ಒಂದೂವರೆ ವರ್ಷದ ಗಂಡು ಮಗು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಹತ್ತಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ಕುಮಟಾ ಕಡೆಯಿಂದ ಅಂಕೋಲಾದತ್ತ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಬೆಳಸೆ ಗ್ರಾಮದ ಹತ್ತಿರ ಎದುರಿನಿಂದ ಬಂದ ಲಾರಿ ರಭಸವಾಗಿ ಗುದ್ದಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಬಸ್‌ನಲ್ಲಿದ್ದ ಪ್ರಯಾಣಿಕರು ಸೀಟುಗಳಿಂದ ಎಸೆಯಲ್ಪಟ್ಟು ತೀವ್ರ ರಕ್ತಸ್ರಾವದಿಂದ ಚೀರಾಡುವಂತಾಯಿತು. ಈ ವೇಳೆ ತಾಯಿಯ ಮಡಿಲಲ್ಲಿದ್ದ ಒಂದೂವರೆ ವರ್ಷದ ಕಂದಮ್ಮ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದೆ. ಮಗುವನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಗಾಯಾಳುಗಳು ಆಸ್ಪತ್ರೆಗೆ ದಾಖಲು:

ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಜನ ಪ್ರಯಾಣಿಕರಿಗೆ ದೇಹದ ವಿವಿಧ ಭಾಗಗಳಲ್ಲಿ ತೀವ್ರ ಗಾಯಗಳಾಗಿವೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಬಸ್‌ನಿಂದ ಹೊರತೆಗೆದು ನೆರವಿಗೆ ಬಂದರು. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಪ್ರಯಾಣಿಕರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಜಿಲ್ಲಾಸ್ಪತ್ರೆಗೆ (ಕ್ರಿಮ್ಸ್ - KRIMS) ರವಾನಿಸಲಾಗಿದೆ. ಇನ್ನುಳಿದ ಗಾಯಾಳುಗಳಿಗೆ ಅಂಕೋಲಾದ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಅಂಕೋಲಾ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಪಘಾತದ ಕಾರಣ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು ಕಿಲೋಮೀಟರ್‌ಗಟ್ಟಲೆ ಸಾಲು ಗಟ್ಟಿ ನಿಂತಿದ್ದವು. ಪೊಲೀಸರು ಅಪಘಾತಕ್ಕೊಳಗಾದ ವಾಹನಗಳನ್ನು ಬದಿಗೆ ಸರಿಸಿ ಸಂಚಾರವನ್ನು ಸುಗಮಗೊಳಿಸಿದರು.

ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೇ ಅಥವಾ ತಾಂತ್ರಿಕ ತೊಂದರೆಯೇ ಎಂಬ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
 

Add Zee News as a Preferred Source
TAGS:
Kannada News