SOCIAL MEDIA

Newsletter

PARTNER SITES
Select Language Select State

ಕೈ ನಾಯಕರ ನಡುವೆ ತೆರೆಮರೆಯಲ್ಲಿ ನಡೆಯುತ್ತಿದೆಯಾ ಹಾವು ಏಣಿಯಾಟ ?

ಕೆಲ ದಿನಗಳ ಹಿಂದಷ್ಟೇ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ರಾಜ್ಯ ರಾಜಕೀಯ ವಿದ್ಯಮಾನಗಳ ಸಂಪೂರ್ಣ ಮಾಹಿತಿ ನೀಡಿ ಮಾಜಿ ಸಿಎಂ ಸಿದ್ದರಾಮಯ್ಯ ವಾಪಸ್ ಆಗಿದ್ದರು.

Reported By Manjunath Naragund Written By Manjunath Naragund
Published: Oct 23, 2026, 12:07 PM IST | Updated: Oct 23, 2026, 12:18 PM IST
Image Credit: Karnataka Politics
Join

ಬೆಂಗಳೂರು/ದೆಹಲಿ: ರಾಜ್ಯ ರಾಜಕೀಯದಲ್ಲಿ ಮತ್ತೆ ಬಿರುಸುಗೊಂಡಿರುವ ರಾಜಕೀಯ ಚಟುವಟಿಕೆಗಳು ತೀವ್ರ ಕುತೂಹಲಕ್ಕೆ ಕಾರಣವಾಗಿವೆ. ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ನಡುವೆ ತೆರೆಮರೆಯಲ್ಲಿ 'ಹಾವು-ಏಣಿ'ಯಾಟ ನಡೆಯುತ್ತಿದೆಯಾ ಎಂಬ ಗುಸುಗುಸು ರಾಜಕೀಯ ವಲಯದಲ್ಲಿ ಜೋರಾಗಿದೆ. ಇದರ ಬೆನ್ನಲ್ಲೇ, ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ದೆಹಲಿಗೆ ಪ್ರತ್ಯೇಕವಾಗಿ ತೆರಳಿ, ಅಲ್ಲಿ ಒಟ್ಟಾಗಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕೆಲ ದಿನಗಳ ಹಿಂದಷ್ಟೇ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ರಾಜ್ಯ ರಾಜಕೀಯ ವಿದ್ಯಮಾನಗಳ ಸಂಪೂರ್ಣ ಮಾಹಿತಿ ನೀಡಿ ಮಾಜಿ ಸಿಎಂ ಸಿದ್ದರಾಮಯ್ಯ ವಾಪಸ್ ಆಗಿದ್ದರು. ಇದರ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ದೆಹಲಿಗೆ ತೆರಳಿರುವುದು ಮಹತ್ವ ಪಡೆದುಕೊಂಡಿದೆ. ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿರುವ ಈ ನಾಯಕರು, ರಾಜ್ಯದ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಕುರಿತು ವಿಸ್ತೃತ ಚರ್ಚೆ ನಡೆಸಿದ್ದಾರೆ.

ವಿಶೇಷವಾಗಿ ಇತ್ತೀಚೆಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಹಾಗೂ ವಿಡಿಯೋ ಬಿಡುಗಡೆ ಹಿಂದೆ ಯಾರ ಕೈವಾಡವಿದೆ ಎಂಬ ಬಗ್ಗೆ ಡಿ.ಕೆ. ಶಿವಕುಮಾರ್ ಹಾಗೂ ಪ್ರಿಯಾಂಕ್ ಖರ್ಗೆ ಅವರು ಹೈಕಮಾಂಡ್‌ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಅಲ್ಲದೆ, ಸ್ಟಿಂಗ್‌ಗೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆ ಹಾಗೂ ಒಟ್ಟಾರೆ ಆಡಳಿತಾತ್ಮಕ ವಿಚಾರಗಳ ಕುರಿತು ವೇಣುಗೋಪಾಲ್ ಅವರಿಗೆ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಹಾಗೂ ಡಿಕೆಶಿ ಬಣದ ಈ ಸಾಲು ಸಾಲು ದೆಹಲಿ ಪ್ರವಾಸಗಳು ಹಾಗೂ ಹೈಕಮಾಂಡ್ ಭೇಟಿಗಳು ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದೇನು ಎಂಬ ಕುತೂಹಲವನ್ನು ಇಮ್ಮಡಿಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
 

Add Zee News as a Preferred Source
TAGS:

About the Author

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

ZEENEWS TRENDING STORIES