• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /"ನನ್ನಿಂದ ಏನೇನು ಪಡೆದ್ರು, ಏನು ಕೊಟ್ರು ಗೊತ್ತಿದೆ".. ಡಿಕೆಶಿಗೆ ಹೆಚ್‌ಡಿಕೆ ತಿರುಗೇಟು!

"ನನ್ನಿಂದ ಏನೇನು ಪಡೆದ್ರು, ಏನು ಕೊಟ್ರು ಗೊತ್ತಿದೆ".. ಡಿಕೆಶಿಗೆ ಹೆಚ್‌ಡಿಕೆ ತಿರುಗೇಟು!

ಮೈತ್ರಿ ಸರ್ಕಾರದ ಅವಧಿಯಲ್ಲಿ ನಾನು ಕುಮಾರಸ್ವಾಮಿಗೆ ಕೆಟ್ಟದ್ದನ್ನೇ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಖಾರವಾಗಿಯೇ ತಿರುಗೇಟು ನೀಡಿದ್ದಾರೆ. ನನ್ನಿಂದ ಏನೇನು ಪಡೆದುಕೊಂಡರು, ಕೊನೆಗೆ ನನಗೆ ಏನು ಬಳುವಳಿ ಕೊಟ್ಟರು ಎಂಬುದು ಜನರಿಗೆ ಗೊತ್ತಿದೆ. ನಾನು ಸಿಎಂ ಆಗಿದ್ದನ್ನೇ ಅವರಿಂದ ಸಹಿಸಿಕೊಳ್ಳಲು ಆಗಲಿಲ್ಲ ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲ, ರೈತರ ಪರಿಹಾರದಿಂದ ಹಿಡಿದು ಬರ ಪರಿಹಾರದವರೆಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Written ByRamya. R. Gowda
Published: Nov 12, 2026, 12:40 IST|Updated: Nov 12, 2026, 12:50 IST
joinshare
"ನನ್ನಿಂದ ಏನೇನು ಪಡೆದ್ರು, ಏನು ಕೊಟ್ರು ಗೊತ್ತಿದೆ".. ಡಿಕೆಶಿಗೆ ಹೆಚ್‌ಡಿಕೆ ತಿರುಗೇಟು!

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಮೈತ್ರಿ ಸರ್ಕಾರದ ಅವಧಿಯಲ್ಲಿ ನಾನು ಕುಮಾರಸ್ವಾಮಿಗೆ ಕೆಟ್ಟದ್ದನ್ನೇ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಖಾರವಾಗಿಯೇ ತಿರುಗೇಟು ನೀಡಿದ್ದಾರೆ. ನನ್ನಿಂದ ಏನೇನು ಪಡೆದುಕೊಂಡರು, ಕೊನೆಗೆ ನನಗೆ ಏನು ಬಳುವಳಿ ಕೊಟ್ಟರು ಎಂಬುದು ಜನರಿಗೆ ಗೊತ್ತಿದೆ. ನಾನು ಸಿಎಂ ಆಗಿದ್ದನ್ನೇ ಅವರಿಂದ ಸಹಿಸಿಕೊಳ್ಳಲು ಆಗಲಿಲ್ಲ ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲ, ರೈತರ ಪರಿಹಾರದಿಂದ ಹಿಡಿದು ಬರ ಪರಿಹಾರದವರೆಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಮೈತ್ರಿ ಸರ್ಕಾರದ ಅವಧಿಯ ಸಂದರ್ಭದಲ್ಲಿ ಕುಮಾರಸ್ವಾಮಿ ಅವರಿಗೆ ಕೆಟ್ಟದನ್ನೇ ಮಾಡಿಲ್ಲ ಎಂದಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದ ಬಳಿ ಇಂದು ಬೆಳಗ್ಗೆ ಮಾಧ್ಯಮ ವರದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ತಾವು ಯಾವತ್ತೂ ಕುಮಾರಸ್ವಾಮಿಯವರಿಗೆ ಕೆಟ್ಟದ್ದನ್ನು ಬಯಸಿಲ್ಲ ಎಂದು ಅವರು ಹೇಳಿರುವುದನ್ನು ನಾನು ಕೂಡ ಗಮನಿಸಿದ್ದೇನೆ. ಆದರೆ ಮೈತ್ರಿ ಸರ್ಕಾರದ ಕಾಲದಲ್ಲಿ ಅವರು ನನ್ನಿಂದ ಏನೇನು ಪಡೆದುಕೊಂಡರು ಮತ್ತು ಕೊನೆಗೆ ನನಗೆ ಏನನ್ನು ಬಳುವಳಿಯಾಗಿ ನೀಡಿದರು ಎಂಬುದು ನನಗಿಂತ ರಾಜ್ಯದ ಜನರಿಗೆ ಬಹಳ ಚೆನ್ನಾಗಿ ಗೊತ್ತಿದೆ ಎಂದು ಟಾಂಗ್ ನೀಡಿದರು.

ನಾನು ಮುಖ್ಯಮಂತ್ರಿಯಾದ ಮೇಲೆ ಅವರಿಗೆ ಸಹಿಸಿಕೊಳ್ಳಲು ಏಕೆ ಸಾಧ್ಯವಾಗಲಿಲ್ಲ ಎಂದು ನೇರವಾಗಿ ಪ್ರಶ್ನಿಸಿದ ಕೇಂದ್ರ ಸಚಿವರು ಹಳೆಯ ವಿಚಾರಗಳ ಬಗ್ಗೆ ಈಗ ಚರ್ಚೆ ಮಾಡುವುದು ಬೇಡ, ಯಾರು ಯಾರಿಗೆ ಏನು ಸಹಾಯ ಮಾಡಿದರು ನನ್ನ ಸರ್ಕಾರ ತೆಗೆಯಲು ಯಾರು ಏನು ಮಾಡಿದರು ಎಂಬುದೆಲ್ಲಾ ಈಗ ಕೇವಲ ಇತಿಹಾಸ. ಅದೆಲ್ಲವೂ ನನಗೆ ಗೊತ್ತಿದೆ ಎಂದರು.

ನನಗೇನು ಕೆಟ್ಟದ್ದು ಮಾಡಿಲ್ಲ ಎಂದು ಅವರು ಬಾಯಿ ಮಾತಿನಲ್ಲಿ ಹೇಳುತ್ತಿದ್ದಾರೆ. ಆದರೆ ನಮ್ಮ ಪಕ್ಷದ ಶಾಸಕರನ್ನು ಸೆಳೆದುಕೊಳ್ಳಲು ಅವರು ಏನೆಲ್ಲಾ ಕುತಂತ್ರಗಳನ್ನು ನಡೆಸುತ್ತಿದ್ದಾರೆ ಎಂಬ ಮಾಹಿತಿಯು ನನಗಿದೆ. ಇಂತಹವರು ನನಗೆ ಒಳ್ಳೆಯದನ್ನು ಮಾಡಿದ್ದಾರೆ ಎಂದರೆ ನಮ್ಮಲು ಸಾಧ್ಯವೇ? ಒಳಗೊಂದು ಹೊರಗೊಂದು ಇಂತಹ ಇಬ್ಬೆಯ ನೀತಿಯ ಜನರನ್ನ ನಂಬಲು ಸಾಧ್ಯವೇ? ಎಂದು ಕುಮಾರಸ್ವಾಮಿ ಅವರು ಮರು ಪ್ರಶ್ನೆ ಕೇಳಿದರು.


ಹಳಬರು ಬಂದರೆ ಸ್ವಾಗತಿಸುತ್ತೇನೆ:
ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಸೇರಿದ್ದ 30-40  ಜನತಾ ಪರಿವಾರದ ನಾಯಕರು ವಾಪಸ್ ಮಾತೃಪಕ್ಷಕ್ಕೆ ಬಂದರೆ ನಾನು ಸ್ವಾಗತಿಸುತ್ತೇನೆ. ಸದ್ಯದ ಸರ್ಕಾರ ನಡೆಯುತ್ತಿರುವ ರೀತಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕತ್ವದ ವಿರುದ್ಧ ತೀವ್ರ ಅತೃಪ್ತಿ ಹೊಂದಿರುವ ಅನೇಕ ನಾಯಕರು ಜೆಡಿಎಸ್ ಗೆ ವಾಪಸ್ಸಾಗುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎಂಬ ಬಗ್ಗೆ ಕೇಳಲಾದ ಪ್ರಶ್ನೆಗೆ ಸಚಿವರು ಮೇಲಿನಂತೆ ಉತ್ತರಿಸಿದರು. ಯಾರು ಬರುತ್ತಾರೆ? ಯಾರು ಹೋಗುತ್ತಾರೆ? ಎಂಬ ಬಗ್ಗೆ ನಾನು ತಲೆಕೆಡಿಸುವುದಿಲ್ಲ. ಆದರೆ ಪಕ್ಷವನ್ನು ಸಂಘಟನೆ ಮಾಡುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದೇನೆ. ಅದು ನನ್ನ ಜವಾಬ್ದಾರಿ ನನ್ನ ಕೈಯಲ್ಲಾದ ಮಟ್ಟಿಗೆ ರಾಜ್ಯಕ್ಕೆ ಒಳ್ಳೆಯದನ್ನು ಮಾಡುವುದಕ್ಕೆ ಪ್ರಯತ್ನ ಮಾಡುತ್ತಾ ಬಂದಿದ್ದೇನೆ ಎಂದು ಸಚಿವರು ತಿಳಿಸಿದರು.


NDRF ಅನುದಾನ ಮತ್ತು ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನ:
ರಾಜ್ಯ ಸರ್ಕಾರವು NDRF ಅನುದಾನದ ವಿಚಾರದಲ್ಲಿ ಸದಾ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುವುದು ಸರಿಯಲ್ಲ. ಕೇಂದ್ರದ ಮುಂದೆ ಹೋಗಿ ಅನುದಾನ ತರಬೇಕಾಗಿರುವುದು ರಾಜ್ಯ ಸರ್ಕಾರದ ಜವಾಬ್ದಾರಿ. ತಾವು ಎರಡು ಬಾರಿ ಮುಖ್ಯಮಂತ್ರಿಯಾಗಿ, ಯುಪಿಎ ಹಾಗೂ ಎನ್ಡಿಎ ಸರ್ಕಾರಗಳಿದ್ದಾಗಲೂ ಕೆಲಸ ಮಾಡಿದ್ದರೂ, ಪ್ರತಿಯೊಂದು ವಿಚಾರಕ್ಕೂ ಕೇಂದ್ರವನ್ನು ದೂರಿರಲಿಲ್ಲ ಎಂದು ಹೇಳಿದರು ಕುಮಾರಸ್ವಾಮಿ. ಕೇಂದ್ರ ಸರ್ಕಾರವನ್ನು ಟೀಕಿಸುವುದನ್ನೇ ಕಾಯಕ ಮಾಡಿಕೊಳ್ಳುವ ಬದಲು, ರಾಜ್ಯದ ಜನತೆ ನೀಡುವ ತೆರಿಗೆ ಹಣವನ್ನು ರಾಜ್ಯದ ಬೊಕ್ಕಸದಿಂದಲೇ ಜನೋಪಯೋಗಿ ಯೋಜನೆಗಳಿಗೆ ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ಕೇಂದ್ರ ಸಚಿವರು ಕಿವಿಮಾತು ಹೇಳಿದರು.

ರೈತರ ಪರಿಹಾರದ ವಿಚಾರದಲ್ಲಿ ಸರ್ಕಾರದ ನಿರ್ಲಕ್ಷ್ಯ:
ಬರಗಾಲ ಅಥವಾ ಬೆಳೆ ಹಾನಿಗೆ ಸಂಬಂಧಿಸಿದಂತೆ ರೈತರಿಗೆ ನೀಡಬೇಕಾದ ಪರಿಹಾರದ ಹಣದಲ್ಲಿ ₹2500 ಮೊತ್ತಕ್ಕೆ ಬದಲಿಗೆ ಕೇವಲ ₹1000 ನೀಡುತ್ತಿರುವುದರ ಬಗ್ಗೆ ಸಚಿವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯದ ರೈತರೇನು ಭಿಕ್ಷುಕರೇ? ಎಂದು ಖಾರವಾಗಿ ಪ್ರಶ್ನಿಸಿದ ಅವರು, ಏನೋ ತಪ್ಪಾಗಿದೆ ಸರಿಪಡಿಸುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಮುಂದೆ ಏನು ಸರಿಪಡಿಸುತ್ತಾರೋ ಕಾದುನೋಡೋಣ. ರೈತರ ವಿಚಾರದಲ್ಲಿ ಈ ರೀತಿಯ ತಾತ್ಸಾರ ಭಾವನೆ ಸರಿಯಲ್ಲ. ಸರಕಾರ ತನ್ನ ವರ್ತನೆ ಸರಿ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಒಟ್ಟಿನಲ್ಲಿ, ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಹೆಚ್‌ಡಿ ಕುಮಾರಸ್ವಾಮಿ ನೇರವಾಗಿಯೇ ತಿರುಗೇಟು ನೀಡಿದ್ದಾರೆ. ಮೈತ್ರಿ ಸರ್ಕಾರದ ಹಳೆಯ ರಾಜಕೀಯ ಕಹಿ ಘಟನೆಗಳನ್ನು ಮತ್ತೆ ಮುನ್ನೆಲೆಗೆ ತಂದಿದ್ದಾರೆ. ಇದರ ಜೊತೆಗೆ ರೈತರ ಪರಿಹಾರ ಮತ್ತು NDRF ಅನುದಾನದ ವಿಚಾರದಲ್ಲೂ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಡಿಕೆಶಿ ಮತ್ತು ಹೆಚ್‌ಡಿಕೆ ನಡುವಿನ ಈ ವಾಕ್ಸಮರ ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಕಿಚ್ಚು ಹಚ್ಚುವ ಸಾಧ್ಯತೆಯಿದೆ.

 

Add Zee News as a Preferred Source
TAGS:
Karnataka Politics