SOCIAL MEDIA

Newsletter

PARTNER SITES
Select Language Select State

ನಾಳೆ ಕರ್ನಾಟಕ ಬಂದ್, ನಾಡಿದ್ದು ಜೈಲ್ ಭರೋ; ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಹೋರಾಟ

ಗುರ್ಲಾಪುರದಲ್ಲಿ ರೈತ ಮುಖಂಡರಾದ ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜಾರಿ ಅವರು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ.

Written By Chetana Devarmani
Published: Oct 30, 2026, 09:45 PM IST | Updated: Oct 30, 2026, 09:47 PM IST
Join

ಚಿಕ್ಕೋಡಿ: ಕಬ್ಬು ಬೆಳೆಗಾರರ ಹೋರಾಟ ಇದೀಗ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಹೊಸ ತಿರುವು ಸಿಕ್ಕಿದ್ದು, ನಾಳೆ ಕರ್ನಾಟಕ ಬಂದ್‌ಗೆ ರೈತ ಸಂಘಟನೆಗಳು ಕರೆ ನೀಡಿವೆ. ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಮುಂದಾಗಿದ್ದ ರೈತರಿಗೆ ಜಿಲ್ಲಾಡಳಿತ ಬ್ರೇಕ್ ಹಾಕಿದ ಬೆನ್ನಲ್ಲೇ ಈ ನಿರ್ಧಾರ ಪ್ರಕಟಿಸಲಾಗಿದೆ.

ಗುರ್ಲಾಪುರದಲ್ಲಿ ರೈತ ಮುಖಂಡರಾದ ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜಾರಿ ಅವರು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ನಾಳೆ ಇಡೀ ದಿನ ರಾಜ್ಯಾದ್ಯಂತ ಬಂದ್‌ಗೆ ಬೆಂಬಲ ನೀಡುವಂತೆ ರೈತ ಸಂಘಟನೆಗಳು ಸಾರ್ವಜನಿಕರಲ್ಲಿ ಮನವಿ ಮಾಡಿವೆ. ರೈತರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬ ಆಕ್ರೋಶದ ಹಿನ್ನೆಲೆಯಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಸಂಘಟನೆಗಳು ನಿರ್ಧರಿಸಿವೆ.

ರಾಷ್ಟ್ರೀಯ ಹೆದ್ದಾರಿ ತಡೆಗೆ ಜಿಲ್ಲಾಡಳಿತ ಬ್ರೇಕ್

ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ನಾಳಿನ ಹೆದ್ದಾರಿ ತಡೆಗೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದು, ಪ್ರತಿಭಟನೆಗೆ ಅಡ್ಡಿಯಾಗಿದೆ. ಇದರಿಂದ ಆಕ್ರೋಶಗೊಂಡ ರೈತ ಮುಖಂಡರು ರಾಜ್ಯ ಬಂದ್‌ಗೆ ಕರೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಜಿಲ್ಲಾಡಳಿತವೇ ಬಂದು ನಿಲ್ಲಲಿ, ನಾವು ಹೆದ್ದಾರಿಗೆ ಹೋಗುವುದಿಲ್ಲ ಎಂದು ರೈತ ಮುಖಂಡರು ಹೇಳಿದ್ದಾರೆ. ಸರ್ಕಾರ ರೈತರಿಗೆ ಮೋಸ ಮಾಡಿದೆ. ರೈತರು ಸಂಕಷ್ಟದಲ್ಲಿ ಸಾಯುವ ಪರಿಸ್ಥಿತಿ ಎದುರಿಸುತ್ತಿದ್ದರೂ ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾಳೆ ಒಂದು ದಿನ ಕರ್ನಾಟಕ ಬಂದ್‌ಗೆ ಬೆಂಬಲ ನೀಡಬೇಕು. ಬಳಿಕ ನಾಡಿದ್ದು ಮತ್ತೆ ಗುರ್ಲಾಪುರದಲ್ಲಿ ಎಲ್ಲರೂ ಒಗ್ಗೂಡಲಿದ್ದೇವೆ. ಅಲ್ಲಿಂದ ನೇರವಾಗಿ ಹಿಂಡಲಗಾ ಜೈಲಿಗೆ ತೆರಳಿ ಜೈಲ್ ಭರೋ ಚಳವಳಿ ನಡೆಸುತ್ತೇವೆ ಎಂದು ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜಾರಿ ತಿಳಿಸಿದ್ದಾರೆ. ಶಾಲಾ ಮಕ್ಕಳು, ವಕೀಲರು, ವ್ಯಾಪಾರಿಗಳು ಸೇರಿದಂತೆ ಸಾರ್ವಜನಿಕರು ಬಂದ್‌ಗೆ ಬೆಂಬಲ ನೀಡಬೇಕು ಎಂದು ರೈತ ಮುಖಂಡರು ಮನವಿ ಮಾಡಿದ್ದಾರೆ. ನಮ್ಮಿಂದ ಆಯ್ಕೆಯಾದ ಶಾಸಕರು ರೈತರ ಬೆನ್ನಿಗೆ ನಿಂತಿಲ್ಲ. ಹೀಗಾಗಿ ಸಾಮಾನ್ಯ ಜನರು ರೈತರ ಬೆಂಬಲಕ್ಕೆ ನಿಂತು ನಮ್ಮ ಹೋರಾಟಕ್ಕೆ ಶಕ್ತಿ ತುಂಬಬೇಕು ಎಂದು ಕರೆ ನೀಡಿದ್ದಾರೆ. ಇದೀಗ ರೈತ ಸಂಘಟನೆಗಳ ಕರ್ನಾಟಕ ಬಂದ್ ಕರೆಗೆ ಸಾರ್ವಜನಿಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಲಿದೆ ಮತ್ತು ಸರ್ಕಾರ ರೈತರ ಬೇಡಿಕೆಗಳಿಗೆ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

ZEENEWS TRENDING STORIES