• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಗೃಹಲಕ್ಷ್ಮಿ ಹಣ ವಿತರಣೆಗೆ ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಸರ್ಕಾರ; ಇದೇ ಕಾರಣಕ್ಕೆ 2 ತಿಂಗಳ ಬಾಕಿ ಪಾವತಿಯಾಗಿಲ್ಲ!

ಗೃಹಲಕ್ಷ್ಮಿ ಹಣ ವಿತರಣೆಗೆ ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಸರ್ಕಾರ; ಇದೇ ಕಾರಣಕ್ಕೆ 2 ತಿಂಗಳ ಬಾಕಿ ಪಾವತಿಯಾಗಿಲ್ಲ!

ಗೃಹಲಕ್ಷ್ಮಿ ಯೋಜನೆಯಡಿ 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಬಾಕಿ ಹಣ ಬಿಡುಗಡೆ ಮಾಡದಿರುವುದಕ್ಕೆ ಹಣಕಾಸಿನ ಕೊರತೆಯೇ ಕಾರಣವೆಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದೆ. ಫಲಾನುಭವಿಗಳು ಈ ಹಣವನ್ನ ಕಾನೂನುಬದ್ಧ ಹಕ್ಕಿನಂತೆ ಕೇಳಲು ಸಾಧ್ಯವಿಲ್ಲವೆಂದು ವಾದಿಸಿರುವ ಸರ್ಕಾರ, ಬಾಕಿ ಹಣ ಬಿಡುಗಡೆ ಕೋರಿ ಸಲ್ಲಿಸಿರುವ ಪಿಐಎಲ್ ವಜಾಗೊಳಿಸುವಂತೆ ಮನವಿ ಮಾಡಿದೆ. ಈ ಸಂಬಂಧ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರಿಗೆ ಹೈಕೋರ್ಟ್ ಎರಡು ವಾರಗಳ ಕಾಲಾವಕಾಶ ನೀಡಿದೆ.

Written ByPuttaraj K Alur
Published: Nov 05, 2026, 17:20 IST|Updated: Nov 05, 2026, 17:33 IST
joinshare
ಗೃಹಲಕ್ಷ್ಮಿ ಹಣ ವಿತರಣೆಗೆ ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಸರ್ಕಾರ; ಇದೇ ಕಾರಣಕ್ಕೆ 2 ತಿಂಗಳ ಬಾಕಿ ಪಾವತಿಯಾಗಿಲ್ಲ!
Image Credit: Gruhalakshmi Scheme

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Gruhalakshmi Outstanding Payments: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ನೀಡಬೇಕಿದ್ದ ಎರಡು ತಿಂಗಳ ಹಣ ಇನ್ನೂ ಬಿಡುಗಡೆಯಾಗಿಲ್ಲವೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಹಣಕಾಸಿನ ಕೊರತೆಯಿಂದ 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣವನ್ನ ವಿತರಿಸಲು ಸಾಧ್ಯವಾಗಿಲ್ಲವೆಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದೆ. ಈ ಮೂಲಕ ಯೋಜನೆಯ ಹಣ ಬಿಡುಗಡೆ ವಿಳಂಬಕ್ಕೆ ಆರ್ಥಿಕ ಸಮಸ್ಯೆಯೇ ಕಾರಣ ಎಂಬುದನ್ನ ಸರ್ಕಾರ ಒಪ್ಪಿಕೊಂಡಿದೆ.

ಗೃಹಲಕ್ಷ್ಮಿ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಹಣಕಾಸಿನ ನೆರವು ಒದಗಿಸಲಾಗುತ್ತದೆ. ಆದರೆ 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಇನ್ನೂ ಪಾವತಿಯಾಗದ ಹಿನ್ನೆಲೆಯಲ್ಲಿ ಈ ಬಾಕಿ ಮೊತ್ತವನ್ನ ಬಿಡುಗಡೆ ಮಾಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿತ್ತು. ಇದೀಗ ಈ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನ್ನ ನಿಲುವನ್ನ ನ್ಯಾಯಾಲಯದ ಮುಂದೆ ಸ್ಪಷ್ಟಪಡಿಸಿದೆ.

ಹಣಕಾಸಿನ ಕೊರತೆಯಿಂದ ಪಾವತಿ ವಿಳಂಬ

ಗೃಹಲಕ್ಷ್ಮಿ ಯೋಜನೆಯ ಹಣ ವಿತರಣೆಗೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಸ್ತ್ರೀಶಕ್ತಿ ಯೋಜನಾಧಿಕಾರಿ ಸೋನಲ್ ಎಸ್.ಐಗಲ್ ಅವರು ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ. 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣವನ್ನ ಹಣಕಾಸಿನ ಸಮಸ್ಯೆಯ ಕಾರಣದಿಂದ ಫಲಾನುಭವಿಗಳಿಗೆ ವಿತರಿಸಿಲ್ಲವೆಂದು ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸರ್ಕಾರದ ಪ್ರಕಾರ, ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಉಪಯೋಗಕ್ಕಾಗಿ ಜಾರಿಗೆ ತಂದಿರುವ ಯೋಜನೆಯಾಗಿದೆ. ಈ ಯೋಜನೆಯಡಿ ಫಲಾನುಭವಿಗಳಿಗೆ ನೀಡುವ ಆರ್ಥಿಕ ನೆರವನ್ನ ಕಾನೂನುಬದ್ಧವಾಗಿ ಒತ್ತಾಯಿಸಬಹುದಾದ ಹಕ್ಕು ಎಂದು ಪರಿಗಣಿಸಲು ಸಾಧ್ಯವಿಲ್ಲವೆಂಬ ವಾದವನ್ನ ಸರ್ಕಾರ ಮುಂದಿಟ್ಟಿದೆ.

ಫಲಾನುಭವಿಯ ಹಕ್ಕಿನ ಬಗ್ಗೆ ಸರ್ಕಾರದ ವಾದ

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಹಣವನ್ನ ತಮ್ಮ ಕಾನೂನುಬದ್ಧ ಹಕ್ಕಿನಂತೆ ನ್ಯಾಯಾಲಯದ ಮೂಲಕ ಕೇಳಲು ಸಾಧ್ಯವಿಲ್ಲವೆಂದು ಸರ್ಕಾರ ಪ್ರಮಾಣಪತ್ರದಲ್ಲಿ ತಿಳಿಸಿದೆ. ಸರ್ಕಾರದಿಂದ ಒದಗಿಸಲಾಗುವ ಹಣಕಾಸಿನ ನೆರವನ್ನ ಕಾನೂನುಬದ್ಧ ನಿರೀಕ್ಷೆಯ ಹಕ್ಕು ಎಂದು ಪರಿಗಣಿಸಲಾಗದು ಎಂಬುದು ಸರ್ಕಾರದ ನಿಲುವಾಗಿದೆ. ಯೋಜನೆಯ ಉದ್ದೇಶ ಮಹಿಳೆಯರಿಗೆ ಆರ್ಥಿಕ ನೆರವು ನೀಡುವುದಾಗಿದ್ದರೂ, ಹಣಕಾಸಿನ ಲಭ್ಯತೆಯ ಸಮಸ್ಯೆಯಿಂದ ಎರಡು ತಿಂಗಳ ಹಣ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲವೆಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಬಾಕಿ ಹಣ ಬಿಡುಗಡೆ ಮಾಡುವಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ವಜಾಗೊಳಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿದೆ.

ಇಬ್ಬರು ಮಹಿಳೆಯರಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡುವಂತೆ ಕೋರಿ ಬೆಂಗಳೂರಿನ ಕಮಲಾನಗರದ ಆರ್.ಗಂಗಾ ಮತ್ತು ನಂದಿನಿ ಲೇಔಟ್‌ನ ಜಿ.ಡಿ.ಪವಿತ್ರಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣವನ್ನ ಫಲಾನುಭವಿಗಳಿಗೆ ಬಿಡುಗಡೆ ಮಾಡುವಂತೆ ಕೋರುವುದು ಈ ಅರ್ಜಿಯ ಪ್ರಮುಖ ಉದ್ದೇಶವಾಗಿದೆ. ಈ ಅರ್ಜಿಯ ವಿಚಾರಣೆಯನ್ನ ಹೈಕೋರ್ಟ್‌ನ ವಿಭಾಗೀಯ ಪೀಠ ನಡೆಸಿದೆ. ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರವಾಗಿ ಸಲ್ಲಿಸಲಾದ ಪ್ರಮಾಣಪತ್ರದಲ್ಲಿನ ಅಂಶಗಳು ನ್ಯಾಯಾಲಯದ ಗಮನಕ್ಕೆ ಬಂದಿವೆ. ಎರಡು ತಿಂಗಳ ಹಣ ಪಾವತಿಯಾಗದಿರುವುದಕ್ಕೆ ಹಣಕಾಸಿನ ಕೊರತೆಯೇ ಕಾರಣ ಎಂದು ಸರ್ಕಾರ ತನ್ನ ನಿಲುವನ್ನ ತಿಳಿಸಿದೆ.

ಆಕ್ಷೇಪಣೆ ಸಲ್ಲಿಸಲು ಎರಡು ವಾರಗಳ ಕಾಲಾವಕಾಶ

ಸರ್ಕಾರ ಸಲ್ಲಿಸಿರುವ ಪ್ರಮಾಣಪತ್ರ ಮತ್ತು ಅದರಲ್ಲಿ ಉಲ್ಲೇಖಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಅರ್ಜಿದಾರರಿಗೆ ತಮ್ಮ ಆಕ್ಷೇಪಣೆಗಳನ್ನ ಸಲ್ಲಿಸಲು ಹೈಕೋರ್ಟ್ ಎರಡು ವಾರಗಳ ಕಾಲಾವಕಾಶ ನೀಡಿದೆ. ಸರ್ಕಾರದ ವಾದಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ತಮ್ಮ ಪ್ರತಿಕ್ರಿಯೆ ಹಾಗೂ ಆಕ್ಷೇಪಣೆಗಳನ್ನ ನ್ಯಾಯಾಲಯದ ಮುಂದೆ ಮಂಡಿಸಬಹುದಾಗಿದೆ.

ಒಟ್ನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಬಾಕಿ ಹಣ ವಿತರಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ರಾಜ್ಯ ಸರ್ಕಾರ ತನ್ನ ಆರ್ಥಿಕ ಸಮಸ್ಯೆಯನ್ನ ಹೈಕೋರ್ಟ್‌ಗೆ ತಿಳಿಸಿದೆ. ಹಣಕಾಸಿನ ಕೊರತೆಯಿಂದ ಹಣ ಬಿಡುಗಡೆ ಸಾಧ್ಯವಾಗಿಲ್ಲವೆಂದು ಹೇಳಿರುವ ಸರ್ಕಾರ, ಬಾಕಿ ಮೊತ್ತ ಬಿಡುಗಡೆ ಕೋರಿ ಸಲ್ಲಿಸಿರುವ ಪಿಐಎಲ್ ವಜಾಗೊಳಿಸುವಂತೆ ಮನವಿ ಮಾಡಿದೆ. ಮತ್ತೊಂದೆಡೆ ಸರ್ಕಾರದ ಪ್ರಮಾಣಪತ್ರಕ್ಕೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರಿಗೆ ಎರಡು ವಾರಗಳ ಸಮಯ ನೀಡಲಾಗಿದ್ದು, ಪ್ರಕರಣದ ಮುಂದಿನ ವಿಚಾರಣೆ ಮಹತ್ವ ಪಡೆದುಕೊಂಡಿದೆ.

Add Zee News as a Preferred Source
TAGS:
Karnataka Politics
Kannada News