• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬರದಿಂದ ಕಂಗಾಲಾದ ರೈತರಿಗೆ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ! ತಲಾ 2,500 ರೂ. ಇನ್‌ಪುಟ್ ಸಬ್ಸಿಡಿ

ಬರದಿಂದ ಕಂಗಾಲಾದ ರೈತರಿಗೆ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ! ತಲಾ 2,500 ರೂ. ಇನ್‌ಪುಟ್ ಸಬ್ಸಿಡಿ

ಕಠಿಣ ಬರಗಾಲದಿಂದ ಕಂಗೆಟ್ಟಿರುವ ಕರ್ನಾಟಕದ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಆಸರೆಯಾಗಿ ನಿಂತಿದೆ. ಕೇಂದ್ರದ ಪರಿಹಾರ ಧನಕ್ಕಾಗಿ ಕಾಯದೆ, ತಕ್ಷಣದ ನೆರವಿನಾಗಿ ಪ್ರತಿಯೊಬ್ಬ ಅರ್ಹ ರೈತನಿಗೆ ₹2,500 ಇನ್‌ಪುಟ್ ಸಬ್ಸಿಡಿ, ಕೃಷಿ ಸಾಲ ಮರುಪಾವತಿಗೆ ತಾತ್ಕಾಲಿಕ ತಡೆ ಹಾಗೂ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಬ್ರೇಕ್ ಹಾಕುವ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ.

Reported ByKrishna NKEdited ByKrishna NK
Published: Sep 25, 2026, 10:00 PM IST|Updated: Sep 25, 2026, 10:07 PM IST
joinshare
ಬರದಿಂದ ಕಂಗಾಲಾದ ರೈತರಿಗೆ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ! ತಲಾ 2,500 ರೂ. ಇನ್‌ಪುಟ್ ಸಬ್ಸಿಡಿ
Image Credit: CM DK Shivakumar

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Drought relief fund Karnataka : ಬರದಿಂದ ಕಂಗಾಲಾಗಿರುವ ಕರ್ನಾಟಕದ ರೈತರಿಗೆ ರಾಜ್ಯ ಸರ್ಕಾರದಿಂದ ಬಿಗ್ ರಿಲೀಫ್.. ಬರಪೀಡಿತ ರೈತರಿಗೆ ತಲಾ 2,500 ರೂಪಾಯಿ ಇನ್‌ಪುಟ್ ಸಬ್ಸಿಡಿ ನೀಡಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲ, ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಮರುಪಾವತಿಗೆ ತಾತ್ಕಾಲಿಕ ರಿಲೀಫ್ ನೀಡಲು ತೀರ್ಮಾನಿಸಲಾಗಿದೆ. ಇದೇ ವೇಳೆ ರೈತರ ಸಾಲ ಮನ್ನಾ ವಿಚಾರವೂ ವಿಧಾನಮಂಡಲದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಿದ್ರೆ, ರಾಜ್ಯದ ಪಾಲನ್ನೂ ಭರಿಸಲು ಸಿದ್ಧ ಎಂದು ಸಿಎಂ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ಹಾಗಾದ್ರೆ ಬರಪೀಡಿತ ರೈತರಿಗೆ ಸಿಗುವ 2,500 ರೂಪಾಯಿ ಯಾರಿಗೆ..? ಸಾಲ ಮರುಪಾವತಿಗೆ ಸಿಕ್ಕಿರೋ ರಿಲೀಫ್ ಏನು..? ಸಾಲ ಮನ್ನಾ ವಿಚಾರದಲ್ಲಿ ಸರ್ಕಾರದ ನಿಲುವೇನು..? ನೋಡೋಣ ಡಿಎನ್‌ಎ ನಾಲ್ಕನೇ ಸುದ್ದಿಯಲ್ಲಿ.

ರಾಜ್ಯದಲ್ಲಿ ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ತಕ್ಷಣದ ನೆರವು ನೀಡಲು ಸರ್ಕಾರ ತಲಾ 2,500 ರೂಪಾಯಿ ಇನ್‌ಪುಟ್ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸುಮಾರು 40ರಿಂದ 50 ಲಕ್ಷ ರೈತರಿಗೆ ಈ ನೆರವು ತಲುಪಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ಸುಮಾರು 1,250 ಕೋಟಿ ರೂಪಾಯಿ ವೆಚ್ಚವಾಗಲಿದೆ. ಕೇಂದ್ರದ ಎನ್‌ಡಿಆರ್‌ಎಫ್‌ ನೆರವಿಗಾಗಿ ಕಾಯದೆ ರಾಜ್ಯ ಸರ್ಕಾರವೇ ಈ ನೆರವು ನೀಡಲು ಮುಂದಾಗಿದೆ ಎಂದು ವಿಧಾನಸಭೆಯಲ್ಲಿ ಸರ್ಕಾರದ ಪರವಾಗಿ ಮಾಹಿತಿ ನೀಡಲಾಗಿದೆ.

ಬರದ ಪರಿಣಾಮ ರೈತರ ಆದಾಯದ ಮೇಲೆ ಒತ್ತಡ ಹೆಚ್ಚಿರುವ ಹಿನ್ನೆಲೆಯಲ್ಲಿ ಸಾಲ ಮರುಪಾವತಿಯಲ್ಲೂ ರಿಲೀಫ್ ನೀಡಲು ಸರ್ಕಾರ ಮುಂದಾಗಿದೆ. ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಮರುಪಾವತಿಗೆ ತಾತ್ಕಾಲಿಕ ತಡೆ ನೀಡುವ ಬಗ್ಗೆ ಸರ್ಕಾರ ಘೋಷಿಸಿದೆ. ಮತ್ತೊಂದೆಡೆ, ರೈತರಿಗೆ ಮೈಕ್ರೋಫೈನಾನ್ಸ್‌ ಸಂಸ್ಥೆಗಳು ಕಿರುಕುಳ ನೀಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.

ಬರಗಾಲದ ಹಿನ್ನೆಲೆಯಲ್ಲಿ ರೈತರ ಸಾಲಮನ್ನಾ ವಿಚಾರವೂ ವಿಧಾನಮಂಡಲದಲ್ಲಿ ಚರ್ಚೆಯಾಗಿದೆ. ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಿದರೆ, ರಾಜ್ಯದ ಪಾಲನ್ನು ಭರಿಸಲು ಸಿದ್ಧ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಅಗತ್ಯವಿದ್ದರೆ ರೈತರಿಗಾಗಿ ರಾಜ್ಯದ ಕೆಲವು ಕಾರ್ಯಕ್ರಮಗಳನ್ನು ನಿಲ್ಲಿಸಿಯಾದರೂ ಸಾಲಮನ್ನಾ ವಿಚಾರದಲ್ಲಿ ರಾಜ್ಯದ ಪಾಲು ನೀಡಲು ಸಿದ್ಧ ಎಂದು ಅವರು ಹೇಳಿದ್ದಾರೆ. ಈ ಮೂಲಕ ರೈತರ ಸಾಲಮನ್ನಾ ವಿಚಾರವನ್ನು ಕೇಂದ್ರ-ರಾಜ್ಯ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಬರದಿಂದ ಉಂಟಾಗಿರುವ ಬೆಳೆ ನಷ್ಟದ ಪ್ರಮಾಣ ದೊಡ್ಡದಾಗಿದೆ ಎಂದು ಸರ್ಕಾರ ತಿಳಿಸಿದೆ. ಸುಮಾರು 40 ಸಾವಿರ ಕೋಟಿ ರೂಪಾಯಿ ಬೆಳೆ ನಷ್ಟದ ಅಂದಾಜು ಮಾಡಲಾಗಿದೆ. ಎನ್‌ಡಿಆರ್‌ಎಫ್‌ ನಿಯಮಗಳಡಿ ಕೇಂದ್ರದಿಂದ ಸುಮಾರು 18 ಸಾವಿರ ಕೋಟಿ ರೂಪಾಯಿ ನೆರವನ್ನು ರಾಜ್ಯ ನಿರೀಕ್ಷಿಸುತ್ತಿದೆ. ಈ ನಡುವೆ ಮಧ್ಯಂತರ ಪರಿಹಾರಕ್ಕಾಗಿ ಕೇಂದ್ರಕ್ಕೂ ಮನವಿ ಸಲ್ಲಿಸಲಾಗಿದೆ. ಕೇಂದ್ರದ ನೆರವು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ತಕ್ಷಣದ ನೆರವು ನೀಡುವ ಕ್ರಮ ಕೈಗೊಳ್ಳಲಾಗಿದೆ.

ಹೀಗಾಗಿ ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರ ಒಂದೇ ಹಂತದಲ್ಲಿ ಹಲವು ಕ್ರಮಗಳನ್ನು ಘೋಷಿಸಿದೆ. ತಕ್ಷಣದ ನೆರವಿಗಾಗಿ 2,500 ರೂಪಾಯಿ ಇನ್‌ಪುಟ್ ಸಬ್ಸಿಡಿ, ಸಾಲ ಮರುಪಾವತಿಯಲ್ಲಿ ರಿಲೀಫ್ ಮತ್ತು ಮೈಕ್ರೋಫೈನಾನ್ಸ್ ಕಿರುಕುಳದ ವಿರುದ್ಧ ಕ್ರಮದ ಭರವಸೆ ನೀಡಲಾಗಿದೆ. ಇದೇ ವೇಳೆ ರೈತರ ಸಾಲಮನ್ನಾ ವಿಚಾರದಲ್ಲಿ ಕೇಂದ್ರ ಸರ್ಕಾರ ನೆರವು ನೀಡಿದರೆ ರಾಜ್ಯದ ಪಾಲನ್ನೂ ಭರಿಸಲು ಸಿದ್ಧ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹೀಗಾಗಿ ರಾಜ್ಯದ ರೈತರ ದೃಷ್ಟಿಯಲ್ಲಿ ಈಗ ತಕ್ಷಣದ ಪರಿಹಾರದ ಜೊತೆಗೆ ಸಾಲದ ಹೊರೆ ಕಡಿಮೆ ಮಾಡುವ ವಿಚಾರವೂ ಪ್ರಮುಖವಾಗಿದೆ.

ಒಟ್ಟಾರೆಯಾಗಿ, ಬರದಿಂದ ಕಂಗಾಲಾಗಿರುವ ರೈತರಿಗೆ ರಾಜ್ಯ ಸರ್ಕಾರ ತಕ್ಷಣದ ಪರಿಹಾರ ಘೋಷಿಸಿದೆ.. ಬರಪೀಡಿತ ರೈತರಿಗೆ ತಲಾ 2,500 ರೂಪಾಯಿ ಇನ್‌ಪುಟ್ ಸಬ್ಸಿಡಿ ನೀಡಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಸುಮಾರು 1,250 ಕೋಟಿ ರೂಪಾಯಿ ವೆಚ್ಚವಾಗಲಿದೆ. ಜೊತೆಗೆ ಸಾಲ ಮರುಪಾವತಿಗೂ ರಿಲೀಫ್ ನೀಡಲಾಗಿದೆ. ಇನ್ನು ರೈತರ ಸಾಲಮನ್ನಾ ವಿಚಾರದಲ್ಲಿ ಕೇಂದ್ರ ಸರ್ಕಾರ ನೆರವು ನೀಡಿದರೆ ರಾಜ್ಯದ ಪಾಲನ್ನು ಭರಿಸಲು ಸಿದ್ಧ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹೀಗಾಗಿ ರೈತರಿಗೆ ಈಗ 2,500 ರೂಪಾಯಿ ತುರ್ತು ನೆರವು, ಸಾಲ ಮರುಪಾವತಿ ರಿಲೀಫ್ ಮತ್ತು ಸಾಲಮನ್ನಾ ನಿರೀಕ್ಷೆ ಎಂಬ ಮೂರು ಪ್ರಮುಖ ಬೆಳವಣಿಗೆಗಳು ಎದುರಾಗಿವೆ.

Add Zee News as a Preferred Source
TAGS:
Kannada News