• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ದೀಪಾವಳಿಗೆ ಗೃಹಲಕ್ಷ್ಮಿಯರಿಗೆ ಭರ್ಜರಿ ಗಿಫ್ಟ್‌ ನೀಡಿದ ರಾಜ್ಯ ಸರ್ಕಾರ: ಹಬ್ಬಕ್ಕೂ ಮೊದಲೇ ಖಾತೆ ಸೇರಲಿದೆ ₹6,000

ದೀಪಾವಳಿಗೆ ಗೃಹಲಕ್ಷ್ಮಿಯರಿಗೆ ಭರ್ಜರಿ ಗಿಫ್ಟ್‌ ನೀಡಿದ ರಾಜ್ಯ ಸರ್ಕಾರ: ಹಬ್ಬಕ್ಕೂ ಮೊದಲೇ ಖಾತೆ ಸೇರಲಿದೆ ₹6,000

ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಮೂರು ಕಂತಿನ ಹಣವನ್ನು ಒಟ್ಟಿಗೆ ಖಾತೆಗೆ ಜಮಾ ಮಾಡಲು ಸಿಎಂ ಡಿ.ಕೆ. ಶಿವಕುಮಾರ್‌ ಆದೇಶಿಸಿದ್ದಾರೆ.

Written ByYashaswini V
Published: Nov 05, 2026, 11:29 IST|Updated: Nov 05, 2026, 11:31 IST
joinshare
ದೀಪಾವಳಿಗೆ ಗೃಹಲಕ್ಷ್ಮಿಯರಿಗೆ ಭರ್ಜರಿ ಗಿಫ್ಟ್‌ ನೀಡಿದ ರಾಜ್ಯ ಸರ್ಕಾರ: ಹಬ್ಬಕ್ಕೂ ಮೊದಲೇ ಖಾತೆ ಸೇರಲಿದೆ ₹6,000

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಲೆ ಏರಿಕೆಯ ನಡುವೆ ದೀಪಾವಳಿ ಹಬ್ಬಕ್ಕೆ ಮನೆಯ ಯಜಮಾನಿಯರಿಗೆ ಭರ್ಜರಿ ಉಡುಗೊರೆ ನೀಡಿರುವ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಮೂರೂ ತಿಂಗಳ ಹಣವನ್ನು ಎಂದರೆ ₹6,000 ಒಟ್ಟಿಗೆ ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಆದೇಶಿಸಲಾಗಿದೆ.

ಹೌದು, ಮಹಿಳೆಯರಿಗೆ ಆರ್ಥಿಕ ಬಲ ನೀಡುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ಆರಂಭಿಸಿರುವ ʼಗೃಹಲಕ್ಷ್ಮಿ ಯೋಜನೆʼಯಲ್ಲಿ ಪ್ರತಿ ತಿಂಗಳು ಅವರ ಖಾತೆಗೆ ₹2,000 ನಗದನ್ನು ಜಮಾ ಮಾಡಲಾಗುತ್ತದೆ. ಆದರೆ, ಇತ್ತೀಚಿಗೆ ಗೃಹಲಕ್ಷ್ಮಿ ಯೋಜನೆಯ ಇ-ಕೆವೈಸಿ ಪೂರ್ಣಗೊಳಿಸಲು ಸೂಚಿಸಿದ್ದ ಸರ್ಕಾರ, ಕಳೆದ ಮೂರು ತಿಂಗಳಿನಿಂದ ಈ ಹಣವನ್ನು ಖಾತೆಗೆ ಜಮಾ ಮಾಡಿಲ್ಲ.

ಇದೀಗ ದೀಪಾವಳಿಗೆ ಗೃಹಲಕ್ಷ್ಮಿಯರಿಗೆ ಭರ್ಜರಿ ಉಡುಗೊರೆ ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಗೃಹಲಕ್ಷ್ಮಿ ಯೋಜನೆಯ ಬಾಕಿ ಉಳಿದಿರುವ ಮೂರು ಕಂತಿನ ಹಣ ₹6,000 ಒಟ್ಟಿಗೆ ಮಹಿಳೆಯರ ಖಾತೆಗೆ ಜಮಾ ಮಾಡುವಂತೆ ಆದೇಶಿಸಿದ್ದು, ಈ ನಿಟ್ಟಿನಲ್ಲಿ ಒಟ್ಟು 7405.86 ಕೋಟಿ ರೂ. ಹಣ ಬಿಡುಗಡೆ ಮಾಡಲು ಸೂಚನೆ ನೀಡಿದ್ದಾರೆ. ಇದರಿಂದಾಗಿ ಹಣದುಬ್ಬರದ ನಡುವೆ ಹಾಲಿನ ದರ ಏರಿಕೆ ಹಾಗೂ ಇತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಕೊಂಚ ಪರಿಹಾರ ಸಿಕ್ಕಂತಾಗುತ್ತದೆ.

ಹೌದು, ಕರ್ನಾಟಕ ಸರ್ಕಾರವು ರಾಜ್ಯದ ಪ್ರತಿ ಮನೆಯ ಯಜಮಾನಿಯರಿಗಾಗಿ ಜಾರಿಗೆ ತಂದಿರುವ 'ಗೃಹ ಲಕ್ಷ್ಮಿ ಯೋಜನೆ'ಯ ಬಾಕಿ ಉಳಿದಿದ್ದ ಮೂರು ಕಂತುಗಳನ್ನು ಎಂದರೆ 34, 35 ಮತ್ತು 36ನೇ ಕಂತಿನ ಹಣ ಪಾವತಿಸಲು ₹7,405 ಕೋಟಿಗೂ ಹೆಚ್ಚು ಮೊತ್ತವನ್ನು ಬಿಡುಗಡೆ ಮಾಡಿದೆ.

ಗೃಹಲಕ್ಷ್ಮಿ ಯೋಜನೆಯಲ್ಲಿ ಈಗಾಗಲೇ 33 ಕಂತಿನ ಹಣ ಜಮಾ:
ಗಮನಾರ್ಹವಾಗಿ, ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 33 ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಿದೆ. ಇನ್ನುಳಿದ 34ನೇ ಕಂತಿನ 2,500 ಕೋಟಿ ರೂ., 35ನೇ ಕಂತಿನ 2,452.93 ಕೋಟಿ ರೂ. ಹಾಗೂ 36ನೇ ಕಂತಿನ 2,452.93 ಕೋಟಿ ರೂ. ಹೀಗೆ ಒಟ್ಟಾರೆಯಾಗಿ 7405.86 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ಸಿಎಂ ಡಿ.ಕೆ. ಶಿವಕುಮಾರ್‌ ಆದೇಶಿಸಿದ್ದಾರೆ.

ಪರಿಷ್ಕರಣೆ ಬಳಿಕ ಗೃಹಲಕ್ಷ್ಮಿ ಯೋಜನೆಯಡಿ ಒಟ್ಟು 1.24 ಕೋಟಿ ಫಲಾನುಭವಿಗಳಿದ್ದು ಪ್ರತಿಯೊಬ್ಬರಿಗೂ ತಲಾ ₹6,000 ಹಣ ಹಬ್ಬಕ್ಕೂ ಮೊದಲೇ ಖಾತೆಗೆ ಸೇರಲಿದೆ. ಇದರೊಂದಿಗೆ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ಫಲಾನುಭವಿ ಖಾತೆಗೆ 72,000 ರೂ. ಹಣ ಸೇರಿದಂತಾಗಲಿದೆ. ಸರ್ಕಾರ ಗೃಹಲಕ್ಷ್ಮಿ ಯೋಜನೆ ಆರಂಭವಾದಾಗಿನಿಂದ ಇದುವರೆಗೆ ಒಟ್ಟು 86,838.36 ಕೋಟಿ ರೂ. ಹಣ ಪಾವತಿಸಿದಂತೆ ಆಗಲಿದೆ.

Add Zee News as a Preferred Source
TAGS:
Govt Schemes
D K Shivakumar
Kannada News