SOCIAL MEDIA

Newsletter

PARTNER SITES
Select Language Select State

ಕರ್ನಾಟಕ MLC ಚುನಾವಣೆ ಫಲಿತಾಂಶ.. 4ಕ್ಷೇತ್ರಗಳಲ್ಲಿ ಯಾರಿಗೆ ಗೆಲುವು? ಕಾಂಗ್ರೆಸ್, BJP - JDS ಅಭ್ಯರ್ಥಿಗಳು ಪಡೆದ ಮತಗಳೆಷ್ಟು?

ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಮೇಲುಗೈ ಸಾಧಿಸಿದೆ. ಎರಡು ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿರುವ ಎನ್‌ಡಿಎ, ಉಳಿದ ಎರಡು ಕ್ಷೇತ್ರಗಳಲ್ಲೂ ಮುನ್ನಡೆ ಕಾಯ್ದುಕೊಂಡಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಎ.ಪಿ. ರಂಗನಾಥ್ ಭರ್ಜರಿ ಗೆಲುವು ಸಾಧಿಸಿದ್ರೆ, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ವಿಜಯಶಾಲಿಯಾಗಿದ್ದಾರೆ. ಇತ್ತ ಆಡಳಿತಾರೂಢ ಕಾಂಗ್ರೆಸ್‌ಗೆ ಈ ಫಲಿತಾಂಶ ಹಿನ್ನಡೆಯ ಸಂಕೇತವಾಗಿದೆ. ಹಾಗಾದ್ರೆ, ನಾಲ್ಕು ಕ್ಷೇತ್ರಗಳಲ್ಲಿ ನಡೆದ ಚುನಾವಣೆಯ ಫಲಿತಾಂಶದ ಚಿತ್ರಣ ಹೇಗಿದೆ? ನೋಡೋಣ ಈ ವರದಿಯಲ್ಲಿ.

Written By Ramya. R. Gowda
Published: Oct 27, 2026, 08:56 PM IST | Updated: Oct 27, 2026, 09:01 PM IST
Join

Karnataka Mlc election results:ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಮೇಲುಗೈ ಸಾಧಿಸಿದೆ. ಎರಡು ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿರುವ ಎನ್‌ಡಿಎ, ಉಳಿದ ಎರಡು ಕ್ಷೇತ್ರಗಳಲ್ಲೂ ಮುನ್ನಡೆ ಕಾಯ್ದುಕೊಂಡಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಎ.ಪಿ. ರಂಗನಾಥ್ ಭರ್ಜರಿ ಗೆಲುವು ಸಾಧಿಸಿದ್ರೆ, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ವಿಜಯಶಾಲಿಯಾಗಿದ್ದಾರೆ. ಇತ್ತ ಆಡಳಿತಾರೂಢ ಕಾಂಗ್ರೆಸ್‌ಗೆ ಈ ಫಲಿತಾಂಶ ಹಿನ್ನಡೆಯ ಸಂಕೇತವಾಗಿದೆ. ಹಾಗಾದ್ರೆ, ನಾಲ್ಕು ಕ್ಷೇತ್ರಗಳಲ್ಲಿ ನಡೆದ ಚುನಾವಣೆಯ ಫಲಿತಾಂಶದ ಚಿತ್ರಣ ಹೇಗಿದೆ? ನೋಡೋಣ ಈ ವರದಿಯಲ್ಲಿ.


ಕರ್ನಾಟಕ ರಾಜಕೀಯದಲ್ಲಿ ಮತ್ತೊಮ್ಮೆ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದ ಶಕ್ತಿ ಪ್ರದರ್ಶನ.. ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಅಕ್ಟೋಬರ್ 23ರಂದು ನಡೆದ ಮತದಾನದ ಬಳಿಕ ನಡೆದ ಮತ ಎಣಿಕೆಯಲ್ಲಿ ಮೈತ್ರಿಕೂಟಕ್ಕೆ ಮುನ್ನಡೆ ಸಿಕ್ಕಿದೆ. ನಾಲ್ಕು ಕ್ಷೇತ್ರಗಳ ಪೈಕಿ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಗೆಲುವು ಸಾಧಿಸಿದ್ರೆ, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರ

ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್‌ಗೆ ಗೆಲುವು

ರಂಗನಾಥ್‌ಗೆ 10,810 ಮತ

ಕಾಂಗ್ರೆಸ್‌ನ ಪುಟ್ಟಣ್ಣಗೆ 9,902 ಮತ

908 ಮತಗಳ ಅಂತರದಿಂದ ಜಯ


ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಎ.ಪಿ. ರಂಗನಾಥ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ವಿರುದ್ಧ 908 ಮತಗಳ ಅಂತರದಿಂದ ಜಯ ದಾಖಲಿಸಿದ್ದಾರೆ. ಈ ಗೆಲುವಿಗೆ ಮೈತ್ರಿಕೂಟದ ನಾಯಕರು ಸಂತಸ ವ್ಯಕ್ತಪಡಿಸಿದ್ದು, ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

ಈಶಾನ್ಯ ಶಿಕ್ಷಕರ ಕ್ಷೇತ್ರ

ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿಗೆ ಗೆಲುವು

ಒಟ್ಟು 14,540 ಮತ

ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮತ್ತೂರ್‌ಗೆ ಸೋಲು

ಇನ್ನು ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಗೆಲುವು ಸಾಧಿಸಿದ್ದಾರೆ. ಎರಡು ಸುತ್ತಿನ ಮತ ಎಣಿಕೆಯಲ್ಲಿ ಒಟ್ಟು 14,540 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮತ್ತೂರ್ ಸೋಲು ಕಂಡಿದ್ದಾರೆ. ಈ ಫಲಿತಾಂಶದಿಂದ ಬಿಜೆಪಿ ಪಾಳಯದಲ್ಲಿ ಉತ್ಸಾಹ ಮನೆಮಾಡಿದೆ.

ಪಶ್ಚಿಮ ಪದವೀಧರರ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಸಂಕನೂರ ಎಸ್.ವಿ. ಮುನ್ನಡೆ ಕಾಯ್ದುಕೊಂಡಿದ್ದಾರೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ 6,459 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ 4,394 ಮತಗಳನ್ನು ಪಡೆದುಕೊಂಡಿದ್ದಾರೆ. ಸಂಕನೂರ 2,065 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.ಇನ್ನು ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲುವು ಸಾಧಿಸುತ್ತಿದ್ದಂತೆ ಜೆಡಿಎಸ್‌ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಮೈತ್ರಿಕೂಟದ ಕಾರ್ಯಕರ್ತರ ಒಗ್ಗಟ್ಟು ಮತ್ತು ಶ್ರಮವೇ ಗೆಲುವಿಗೆ ಕಾರಣ ಎಂದು ಹೇಳಿದ್ದಾರೆ. ಅಲ್ಲದೆ, ಈ ಫಲಿತಾಂಶ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಮುನ್ನುಡಿ ಎಂದು ರಾಜಕೀಯವಾಗಿ ಟೀಕಿಸಿದ್ದಾರೆ.

ರಾಜಕೀಯ ಮಹತ್ವ
ಈ ನಾಲ್ಕು ಕ್ಷೇತ್ರಗಳ ಚುನಾವಣೆಯು ಆಡಳಿತಾರೂಢ ಕಾಂಗ್ರೆಸ್‌ಗೆ ಪ್ರತಿಷ್ಠೆಯ ಪ್ರಶ್ನೆಯಾಗಿತ್ತು. ಈ ಹಿಂದೆ ಮೂರು ಕ್ಷೇತ್ರಗಳು ಬಿಜೆಪಿಯ ಹಿಡಿತದಲ್ಲಿದ್ದರೆ, ಬೆಂಗಳೂರು ಶಿಕ್ಷಕರ ಕ್ಷೇತ್ರ ಕಾಂಗ್ರೆಸ್ ವಶದಲ್ಲಿತ್ತು. ಹೀಗಾಗಿ ಈ ಚುನಾವಣೆಯು ಬಿಜೆಪಿ-ಜೆಡಿಎಸ್‌ ಮೈತ್ರಿಯ ಬಲ ಹಾಗೂ ಕಾಂಗ್ರೆಸ್‌ನ ರಾಜಕೀಯ ಪ್ರಭಾವವನ್ನು ಅಳೆಯುವ ಪರೀಕ್ಷೆಯಾಗಿ ಗಮನ ಸೆಳೆದಿತ್ತು.


ಒಟ್ಟಿನಲ್ಲಿ, ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟಕ್ಕೆ ಸಿಕ್ಕಿರುವ ಮುನ್ನಡೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ಗೆ ಈ ಫಲಿತಾಂಶ ಎಚ್ಚರಿಕೆಯ ಗಂಟೆಯಾಗುತ್ತದೆಯೇ? ಅಥವಾ ಮುಂದಿನ ಚುನಾವಣೆಗಳಲ್ಲಿ ಆಡಳಿತ ಪಕ್ಷ ತಿರುಗೇಟು ನೀಡುತ್ತದೆಯೇ? ಅನ್ನೋದನ್ನ ಕಾದು ನೋಡಬೇಕಿದೆ.

 

Add Zee News as a Preferred Source
TAGS:

About the Author

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.

ZEENEWS TRENDING STORIES