SOCIAL MEDIA

Newsletter

PARTNER SITES
Select Language Select State

ಎಚ್ಚರ.. ರಾಜ್ಯದ 12 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ : ಮುಂದಿನ 3 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಮಳೆ ಮತ್ತೆ ಕಣ್ಣಾಮುಚ್ಚಾಲೆ ಆಟ ಆರಂಭಿಸಿದ್ದು, ಮುಂದಿನ ಕೆಲವೇ ಗಂಟೆಗಳಲ್ಲಿ ಭಾರಿ ಮಳೆಯಾಗುವ ಭೀತಿ ಎದುರಾಗಿದೆ. ಕಳೆದ ಕೆಲವು ದಿನಗಳಿಂದ ಸೃಷ್ಟಿಯಾಗಿದ್ದ ಅವಾಂತರಗಳ ನಡುವೆಯೇ, ರಾಜ್ಯ ಹವಾಮಾನ ಇಲಾಖೆಯು ಒಟ್ಟು 12 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..

Reported By Krishna NK Written By Krishna NK
Published: Oct 04, 2026, 05:35 PM IST | Updated: Oct 04, 2026, 05:37 PM IST
Image Credit: Karnataka rains
Join

ಬೆಂಗಳೂರು: ಈ ಬಾರಿ ಮುಂಗಾರು ಆರಂಭದಲ್ಲಿ ಸಂಪೂರ್ಣ ಕ್ಷೀಣಿಸಿ, ರಾಜ್ಯದಾದ್ಯಂತ ತೀವ್ರ ಅಭಾವ ಹಾಗೂ ಬರ ಪರಿಸ್ಥಿತಿ ತಲೆದೋರಿತ್ತು. ಮಳೆಯಿಲ್ಲದೆ ಬಿತ್ತನೆ ಮಾಡಿದ ಬೆಳೆಗಳು ಒಣಗಿ ಹೋಗಿ, ಕೃಷಿ ಚಟುವಟಿಕೆಗಳು ಸ್ಥಗಿತಗೊಂಡು ರಾಜ್ಯದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಇನ್ನೇನು ಈ ಬಾರಿಯ ಮಳೆಗಾಲ ಮುಗಿದೇ ಹೋಯಿತು, ಇಡೀ ವರ್ಷ ನೀರಿನ ಅಭಾವ ಎದುರಿಸಬೇಕಾಗುತ್ತದೆ ಎಂದು ಜನ ಹಾಗೂ ರೈತರು ಆತಂಕದಲ್ಲಿದ್ದಾಗ, ಕೊನೆಗೂ ವರುಣದೇವನ ಆಗಮನವಾಗಿತ್ತು.

ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಸುರಿದ ಭಾರಿ ಮಳೆಯು ಒಂದು ಕಡೆ ಆಶಾದಾಯಕ ವಾತಾವರಣ ನಿರ್ಮಿಸಿದರೆ, ಇನ್ನೊಂದೆಡೆ ಹಲವು ಜಿಲ್ಲೆಗಳಲ್ಲಿ ಜಲಾವೃತ, ಮರಗಳು ಉರುಳಿಬಿದ್ದಿರುವುದು ಹಾಗೂ ಸಂಚಾರ ವ್ಯತ್ಯಯದಂತಹ ಸಾಲು ಸಾಲು ಅವಾಂತರಗಳನ್ನೇ ಸೃಷ್ಟಿಸಿತ್ತು. ಇದೀಗ ಆ ಭಾರಿ ಆರ್ಭಟ ಕೊಂಚ ಕಡಿಮೆಯಾಗಿದ್ದರೂ, ಮಳೆರಾಯ ಸಂಪೂರ್ಣವಾಗಿ ವಿಶ್ರಾಂತಿ ಪಡೆದಿಲ್ಲ. ಮತ್ತೆ ತನ್ನ ಕಣ್ಣಾಮುಚ್ಚಾಲೆ ಆಟವನ್ನು ಆರಂಭಿಸಿದ್ದು, ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ರಾಮನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಹಲವೆಡೆ ಗುಡುಗು, ಮಿಂಚು ಸಹಿತ ಗಾಳಿ ಮಳೆಯಾಗಲಿದೆ ಎಂದು ವರದಿಯಾಗಿದೆ.

ಮಳೆಯ ಸಮಯದಲ್ಲಿ ವಾತಾವರಣದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಪ್ರಬಲ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಆಕಸ್ಮಿಕವಾಗಿ ಗುಡುಗು ಮತ್ತು ಮಿಂಚು ಸಂಭವಿಸುವಾಗ ಸಾರ್ವಜನಿಕರು, ವಿಶೇಷವಾಗಿ ಗ್ರಾಮೀಣ ಭಾಗದ ರೈತರು ಹಾಗೂ ತೆರೆದ ಪ್ರದೇಶಗಳಲ್ಲಿ ಕೆಲಸ ಮಾಡುವವರು ಮರಗಳ ಕೆಳಗೆ ನಿಲ್ಲದೆ, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹವಾಮಾನ ತಜ್ಞರು ಕಟ್ಟೆಚ್ಚರ ನೀಡಿದ್ದಾರೆ.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ZEENEWS TRENDING STORIES