SOCIAL MEDIA

Newsletter

PARTNER SITES
Select Language Select State

ಮಳೆ ನಿಂತಿತು ಅಂದುಕೊಳ್ಳಬೇಡಿ.. ರಾಜಧಾನಿ ಜನರಿಗೆ ಎಚ್ಚರಿಕೆ.. ಈ 5 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ!

Karnataka Rain Alert : ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಈ ಕೆಳಗೆ ನೀಡಿರುವ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ. ಒಂದ್ಕಡೆ ಮುಂಗಾರು ಕೈಕೊಟ್ಟು ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿತ್ತು, ಆದ್ರೆ ಈಗ ಹಿಂಗಾರು ಮಳೆ ಮತ್ತೆ ಚುರುಕಾಗಿದೆ.. ಸಂಪೂರ್ಣ ವಿವರ ಇಲ್ಲಿದೆ ನೋಡಿ..

Written By Krishna NK
Published: Oct 16, 2026, 06:14 PM IST | Updated: Oct 16, 2026, 06:16 PM IST
Image Credit: Karnataka Rain News
Join

Karnataka Weather report : ಹವಾಮಾನ ಇಲಾಖೆ ನೀಡಿರುವ ಮುನ್ನೆಚ್ಚರಿಕೆ ಪ್ರಕಾರ, ರಾಜ್ಯದ ಒಟ್ಟು 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತ ಎಚ್ಚರಿಕೆ ನೀಡಲಾಗಿದೆ.

ಇದರ ಜೊತೆಗೆ ಒಟ್ಟು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಲಾಗಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಂತೂ ಮಳೆಯಾ ಅಬ್ಬರ ಮುಂದುವರೆದಿದೆ. ಮಧ್ಯಾಹ್ನದಿಂದಲೇ ಆರಂಭವಾದ ಜಿಟಿಜಿಟಿ ಮಳೆ ಹಾಗೂ ಕೆಲವೆಡೆ ಬಿರುಸಿನ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ ಬೆಂಗಳೂರಿಗೆ ಮುಂದಿನ ಮೂರು ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಿದ್ದು, ನಗರದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಅಂತ ತಿಳಿಸಿದೆ.

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಹಲವು ಪ್ರಮುಖ ರಸ್ತೆಗಳು ಜಲಾವೃತವಾಗಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಸಂಜೆ ವೇಳೆ ಆಫೀಸ್ ಮುಗಿಸಿ ಮನೆಗೆ ಹೊರಟ ಸವಾರರು ಟ್ರಾಫಿಕ್ ಜಾಮ್ ಹಾಗೂ ರಸ್ತೆಗಳಲ್ಲಿ ನಿಂತ ನೀರಿಂದಾಗಿ ಪರದಾಡುವಂತಾಗಿದೆ. ವಾಹನ ಸವಾರರು ಹಾಗೂ ದಾರಿಯಲ್ಲಿ ಹೋಗುವ ಜನರು ಮಳೆಯಿಂದ ರಕ್ಷಣೆ ಪಡೆಯಲು ಹರಸಾಹಸ ಪಡುತ್ತಿದ್ದಾರೆ.

ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯವಿರುವ ಕಡೆಗಳಲ್ಲಿ ಆಡಳಿತ ಮಂಡಳಿಗಳು ತುರ್ತು ಕ್ರಮಗಳನ್ನು ಕೈಗೊಳ್ಳುತ್ತಿವೆ. ಮುಂದಿನ ಕೆಲವು ದಿನಗಳವರೆಗೆ ಮಳೆಯ ಆರ್ಭಟ ಹೀಗೆಯೇ ಮುಂದುವರಿಯುವ ಸೂಚನೆ ಇದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ZEENEWS TRENDING STORIES