SOCIAL MEDIA

Newsletter

PARTNER SITES
Select Language Select State

ದಕ್ಷಿಣ ಒಳನಾಡಿನ 6 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’: ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ

ಇಷ್ಟು ದಿನ ತಣ್ಣಗಿದ್ದ ಮಳೆರಾಯ ಮತ್ತೆ ಅಬ್ಬರಿಸಲು ಸಜ್ಜಾಗಿದ್ದಾನೆ. ಒಳನಾಡಿನ ಮೇಲಿರುವ ಕಡಿಮೆ ಒತ್ತಡದ ಪಟ್ಟಿ ಹಾಗೂ ಅರಬ್ಬಿ ಸಮುದ್ರದಿಂದ ಬೀಸುತ್ತಿರುವ ತೇವಾಂಶಭರಿತ ಗಾಳಿ ಒಂದೇ ಬಾರಿಗೆ ಒಂದಾಗಿದ್ದು, ದಕ್ಷಿಣ ಒಳನಾಡಿನಲ್ಲಿ ನಾಳೆ ಅಂದರೆ ಸೆಪ್ಟೆಂಬರ್ 29 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ 6 ಪ್ರಮುಖ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಜಾರಿ ಮಾಡಿದೆ.

Reported By Krishna NK Written By Krishna NK
Published: Sep 28, 2026, 07:16 PM IST | Updated: Sep 28, 2026, 07:18 PM IST
Image Credit: karnataka weather news
Join

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಬಿರುಸುಗೊಂಡಿದ್ದು, ಸೆಪ್ಟೆಂಬರ್ 29 ರಂದು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ದಕ್ಷಿಣ ಒಳನಾಡಿನ ಆರು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಕರ್ನಾಟಕದ ಒಳನಾಡಿನ ಮೇಲೆ ಹಾದುಹೋಗಿರುವ ಕಡಿಮೆ ಒತ್ತಡದ ಪಟ್ಟಿ (ಟ್ರಫ್) ಮತ್ತು ಅರಬ್ಬಿ ಸಮುದ್ರದಿಂದ ಬೀಸುತ್ತಿರುವ ತೇವಾಂಶಭರಿತ ಗಾಳಿಯ ಪ್ರಭಾವದಿಂದಾಗಿ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.

‘ಯೆಲ್ಲೋ ಅಲರ್ಟ್’ ಪಡೆದ ಜಿಲ್ಲೆಗಳು
ಸೆಪ್ಟೆಂಬರ್ 29ರ ಬೆಳಿಗ್ಗೆ 8:30 ರಿಂದ ಮರುದಿನ ಬೆಳಿಗ್ಗೆ 8:30 ರವರೆಗಿನ ಅವಧಿಯಲ್ಲಿ ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಮುನ್ನೆಚ್ಚರಿಕೆ ನೀಡಲಾಗಿದೆ.

ರಾಜಧಾನಿ ಬೆಂಗಳೂರು ಹಾಗೂ ಇತರ ದಕ್ಷಿಣ ಒಳನಾಡು ಜಿಲ್ಲೆಗಳು
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಶಿವಮೊಗ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಗುಡುಗು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು ಮತ್ತು ಕರಾವಳಿ ಹವಾಮಾನ ವರದಿ
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ರಾಯಚೂರು, ಕಲಬುರಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಬಹುತೇಕ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಯಾವುದೇ ತುರ್ತು ಎಚ್ಚರಿಕೆ ನೀಡಿಲ್ಲ.

ಬೆಂಗಳೂರು ನಗರದ ವಾತಾವರಣ
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ ತಾಪಮಾನ 31°C ಹಾಗೂ ಕನಿಷ್ಠ ತಾಪಮಾನ 21°C ದಾಖಲಾಗುವ ನಿರೀಕ್ಷೆಯಿದೆ.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ZEENEWS TRENDING STORIES