• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಕರ್ನಾಟಕ ಗಡಿಯಲ್ಲಿ ಶಿವಸೇನೆ ಪುಂಡಾಟ; ಬೆಳಗಾವಿ ಎಂಇಎಸ್ ಕರಾಳ ದಿನ

ಕರ್ನಾಟಕ ಗಡಿಯಲ್ಲಿ ಶಿವಸೇನೆ ಪುಂಡಾಟ; ಬೆಳಗಾವಿ ಎಂಇಎಸ್ ಕರಾಳ ದಿನ

ರಾಜ್ಯೋತ್ಸವಕ್ಕೆ ಪ್ರತಿಯಾಗಿ ಕರಾಳ ದಿನ ಆಚರಿಸುತ್ತಿರುವ ಎಂಇಎಸ್ ಕಾರ್ಯಕರ್ತರು, ಬೆಳಗಾವಿ ಸೇರಿದಂತೆ ಗಡಿಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಘೋಷಣೆ ಕೂಗಿದ್ದಾರೆ.

Written ByChetana Devarmani
Published: Nov 01, 2026, 12:09 PM IST|Updated: Nov 01, 2026, 12:10 PM IST
joinshare
ಕರ್ನಾಟಕ ಗಡಿಯಲ್ಲಿ ಶಿವಸೇನೆ ಪುಂಡಾಟ; ಬೆಳಗಾವಿ ಎಂಇಎಸ್  ಕರಾಳ ದಿನ

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

Trending

  • News
  • Photos
  • Videos
56ನೇ ವಯಸ್ಸಿನಲ್ಲಿ ಸಿಎಂ ಮದುವೆ.. ಕೈ ಹಿಡಿದ ಪತ್ರಕರ್ತೆ ಯಾರು? ವಯಸ್ಸಿನ ಅಂತರ ಎಷ್ಟು?

56ನೇ ವಯಸ್ಸಿನಲ್ಲಿ ಸಿಎಂ ಮದುವೆ.. ಕೈ ಹಿಡಿದ ಪತ್ರಕರ್ತೆ ಯಾರು? ವಯಸ್ಸಿನ ಅಂತರ ಎಷ್ಟು?

2

ಸಲ್ಮಾನ್ ಖಾನ್‌ ಫುಲ್ ಗರಂ! ನಿನ್ನಷ್ಟು ನೀಚ ಯಾರೂ ಇಲ್ಲ ಎಂದು ಕಿಡಿಕಾರಿದ್ದೇಕೆ? ಯಾರ ವಿರುದ್ಧ ಭಾಯ್‌ಜಾನ್ ಆಕ್ರೋಶ?

3

9ನೇ ತಿಂಗಳ ಗರ್ಭಾವಸ್ಥೆಯಲ್ಲೂ ವರ್ಕೌಟ್! ಸಮಂತಾ ರುತ್ ಪ್ರಭು ವಿಡಿಯೋಗೆ ಅಭಿಮಾನಿಗಳು ಫಿದಾ

4

ಕರ್ನಾಟಕ ಗಡಿಯಲ್ಲಿ ಶಿವಸೇನೆ ಪುಂಡಾಟ; ಬೆಳಗಾವಿ ಎಂಇಎಸ್ ಕರಾಳ ದಿನ

5

ಹಾಲು, ಅಕ್ಕಿ ಬಳಿಕ.. ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಳಗಾವಿ: ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆಯೇ ಬೆಳಗಾವಿಯಲ್ಲಿ ಮತ್ತೆ ನಾಡದ್ರೋಹಿ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಕಾರ್ಯಕರ್ತರ ಕಿರಿಕ್ ಮುಂದುವರಿದಿದೆ. ರಾಜ್ಯೋತ್ಸವಕ್ಕೆ ಪ್ರತಿಯಾಗಿ ಕರಾಳ ದಿನ ಆಚರಿಸುತ್ತಿರುವ ಎಂಇಎಸ್ ಕಾರ್ಯಕರ್ತರು, ಬೆಳಗಾವಿ ಸೇರಿದಂತೆ ಗಡಿಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಘೋಷಣೆ ಕೂಗಿದ್ದಾರೆ. ಮತ್ತೊಂದೆಡೆ, ಕರಾಳ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಕರ್ನಾಟಕಕ್ಕೆ ಪ್ರವೇಶಿಸಲು ಯತ್ನಿಸಿದ ಶಿವಸೇನೆ ಕಾರ್ಯಕರ್ತರನ್ನು ಪೊಲೀಸರು ಗಡಿಯಲ್ಲೇ ತಡೆದಿದ್ದಾರೆ.

ಅನುಮತಿ ನಿರಾಕರಣೆ ನಡುವೆಯೂ ಕರಾಳ ದಿನದ ಮೆರವಣಿಗೆ

ಪ್ರತಿ ವರ್ಷದಂತೆ ಈ ಬಾರಿಯೂ ಕನ್ನಡ ರಾಜ್ಯೋತ್ಸವದ ದಿನ ಎಂಇಎಸ್ ಕಾರ್ಯಕರ್ತರು ಕರಾಳ ದಿನ ಆಚರಣೆಗೆ ಮುಂದಾಗಿದ್ದಾರೆ. ಬೆಳಗಾವಿ ನಗರದ ಸಂಭಾಜಿ ಉದ್ಯಾನವನದಿಂದ ಕರಾಳ ದಿನದ ಮೆರವಣಿಗೆ ಆರಂಭವಾಗಿದೆ. ಅನುಮತಿ ನಿರಾಕರಿಸಿದ್ದರೂ ಮೆರವಣಿಗೆ ನಡೆಸಲು ಮುಂದಾದ ಕಾರ್ಯಕರ್ತರು, ಬೆಳಗಾವಿ ಸೇರಿದಂತೆ ಗಡಿಭಾಗಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೋಷಣೆ ಕೂಗಿದ್ದಾರೆ.

ಸಂಭಾಜಿ ಉದ್ಯಾನವನದಿಂದ ಬಸವೇಶ್ವರ ವೃತ್ತದ ಬಳಿಯ ಮರಾಠ ಮಂದಿರದವರೆಗೆ ಮೆರವಣಿಗೆ ಸಾಗಲಿದೆ. ಬೆಳಗಾವಿ ನಗರ ಪೊಲೀಸರ ಸಮ್ಮುಖದಲ್ಲೇ ಎಂಇಎಸ್ ಕಾರ್ಯಕರ್ತರು ನಾಡದ್ರೋಹಿ ಘೋಷಣೆಗಳನ್ನು ಕೂಗಿದ್ದಾರೆ. ಮೆರವಣಿಗೆಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.

ಕರ್ನಾಟಕದ ಗಡಿಯಲ್ಲಿ ಶಿವಸೇನೆ ಕಾರ್ಯಕರ್ತರಿಗೆ ತಡೆ

ಇನ್ನೊಂದೆಡೆ, ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿವಸೇನೆ ಮುಖಂಡ ವಿಜಯ ದೇವಣೆ ನೇತೃತ್ವದಲ್ಲಿ ಕಾರ್ಯಕರ್ತರು ಬೆಳಗಾವಿಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಆದರೆ, ಮಹಾರಾಷ್ಟ್ರದ ನಾಯಕರಿಗೆ ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿಯಲ್ಲಿರುವ ಕೊಗನೊಳ್ಳಿ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ಅವರನ್ನು ತಡೆದಿದ್ದಾರೆ.

ಉದ್ಧವ್ ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಕರಾಳ ದಿನದ ಕಾರ್ಯಕ್ರಮಕ್ಕೆ ಆಗಮಿಸಲು ಮುಂದಾಗಿದ್ದರು ಎನ್ನಲಾಗಿದೆ. ಈ ವೇಳೆ ಪೊಲೀಸರು ಅವರನ್ನು ಗಡಿಯಲ್ಲೇ ತಡೆದಿದ್ದಾರೆ. ಇದರಿಂದಾಗಿ ಕರ್ನಾಟಕದೊಳಗೆ ಪ್ರವೇಶಿಸಲು ಸಾಧ್ಯವಾಗದೆ ಶಿವಸೇನೆ ಕಾರ್ಯಕರ್ತರು ವಾಪಸ್ ಆಗಿದ್ದಾರೆ.

ಬೆಳಗಾವಿ, ನಿಪ್ಪಾಣಿ, ಬೀದರ್, ಬಾಲ್ಕಿ ಮಹಾರಾಷ್ಟ್ರಕ್ಕೆ ಸೇರಿಸಲು ಆಗ್ರಹ

ಗಡಿಯಲ್ಲಿ ತಡೆದಿದ್ದರೂ ಶಿವಸೇನೆ ಕಾರ್ಯಕರ್ತರು ನಾಡದ್ರೋಹಿ ಘೋಷಣೆಗಳನ್ನು ಕೂಗಿದ್ದಾರೆ. ಬೆಳಗಾವಿ, ನಿಪ್ಪಾಣಿ, ಬೀದರ್ ಹಾಗೂ ಬಾಲ್ಕಿ ಪ್ರದೇಶಗಳನ್ನು ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಘೋಷಣೆ ಕೂಗಿದ್ದಾರೆ. ಇದರಿಂದ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರತಿವರ್ಷವೂ ಬೆಳಗಾವಿಯಲ್ಲಿ ಕರಾಳ ದಿನ ಆಚರಣೆ ಮಾಡುವ ಮೂಲಕ ಎಂಇಎಸ್ ಕಾರ್ಯಕರ್ತರು ವಿವಾದ ಸೃಷ್ಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿವೆ. ನಗರದಲ್ಲಿ ಮೆರವಣಿಗೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಒಂದೆಡೆ ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರಿಂದ ಕರಾಳ ದಿನದ ಮೆರವಣಿಗೆ, ಮತ್ತೊಂದೆಡೆ ಗಡಿಯಲ್ಲಿ ಶಿವಸೇನೆ ಕಾರ್ಯಕರ್ತರ ಪ್ರವೇಶಕ್ಕೆ ಪೊಲೀಸರ ತಡೆ. ಹೀಗೆ ಕನ್ನಡ ರಾಜ್ಯೋತ್ಸವದ ದಿನ ಬೆಳಗಾವಿ ಗಡಿಭಾಗದಲ್ಲಿ ಮಹಾರಾಷ್ಟ್ರ ಪರ ಸಂಘಟನೆಗಳ ಚಟುವಟಿಕೆಗಳು ಮತ್ತೆ ಚರ್ಚೆಗೆ ಗ್ರಾಸವಾಗಿವೆ.

 

Add Zee News as a Preferred Source
TAGS:
Kannada News