• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಬೆಂಗಳೂರು ಮೆಟ್ರೋ ಹೊಸೂರು ವಿಸ್ತರಣೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ತೀವ್ರ ವಿರೋಧ

ಬೆಂಗಳೂರು ಮೆಟ್ರೋ ಹೊಸೂರು ವಿಸ್ತರಣೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ತೀವ್ರ ವಿರೋಧ

ಕನ್ನಡಿಗರ ಹಾಗೂ ರಾಜ್ಯದ ಹಿತಾಸಕ್ತಿಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕರವೇ ಆಗ್ರಹಿಸಿದೆ. ಕೂಡಲೇ ಈ ಹೊಸೂರು ಮೆಟ್ರೋ ವಿಸ್ತರಣೆ ಪ್ರಸ್ತಾವನೆಯನ್ನು ಕೈಬಿಡಬೇಕು.

Reported ByManjunath NaragundEdited ByManjunath Naragund
Published: Oct 23, 2026, 08:31 AM IST|Updated: Oct 23, 2026, 08:39 AM IST
joinshare
ಬೆಂಗಳೂರು ಮೆಟ್ರೋ ಹೊಸೂರು ವಿಸ್ತರಣೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ತೀವ್ರ ವಿರೋಧ
Image Credit: Namma Metro

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ಬೆಂಗಳೂರು ಮೆಟ್ರೋ ಹೊಸೂರು ವಿಸ್ತರಣೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ತೀವ್ರ ವಿರೋಧ

ಬೆಂಗಳೂರು ಮೆಟ್ರೋ ಹೊಸೂರು ವಿಸ್ತರಣೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ತೀವ್ರ ವಿರೋಧ

2

ಕರ್ನಾಟಕದಲ್ಲಿ ಅಕ್ಟೋಬರ್ 24ರವರೆಗೆ ಮುಂದುವರಿಯಲಿದೆ ಮಳೆಯ ಅಬ್ಬರ: ಹವಾಮಾನ ಇಲಾಖೆ ಎಚ್ಚರಿಕೆ

3

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣಾ ರಣಕಹಳೆ: ಗದಗದಲ್ಲಿ ಬಿಗಿ ಭದ್ರತೆಯೊಂದಿಗೆ ಬಿರುಸಿನ ಮತದಾನ ಆರಂಭ!

4

ಇಂದಿನ ಹನ್ನೆರಡು ರಾಶಿಗಳ ಫಲಾಫಲಗಳು: ನಿಮ್ಮ ರಾಶಿಗೆ ಅಕ್ಟೋಬರ್ 23 ಹೇಗಿರಲಿದೆ? ಇಲ್ಲಿದೆ ಸಂಪೂರ್ಣ ವಿವರ

5

ಅಪ್ಪನ ಆಸ್ತಿಯನ್ನ ಮಗಳಿಗೆ ಗೊತ್ತಿಲ್ಲದಂತೆ ಮಾರಬಹುದೇ..? ಹೆಣ್ಣುಮಕ್ಕಳೇ ಸಹೋದರರಿಂದ ಮೋಸ ಹೋಗಬೇಡಿ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ನಮ್ಮ ಮೆಟ್ರೋ ರೈಲನ್ನು ಬೆಂಗಳೂರಿನಿಂದ ತಮಿಳುನಾಡಿನ ಹೊಸೂರಿಗೆ ವಿಸ್ತರಿಸುವ ಪ್ರಸ್ತಾವನೆಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ವಿರೋಧ ವ್ಯಕ್ತಪಡಿಸಿದೆ. 

ಬೊಮ್ಮಸಂದ್ರದಿಂದ ಅತ್ತಿಬೆಲೆ ಮೂಲಕ ತಮಿಳುನಾಡಿನ ಹೊಸೂರುವರೆಗೆ ಮೆಟ್ರೋ ಮಾರ್ಗವನ್ನು ವಿಸ್ತರಿಸಲು ತಮಿಳುನಾಡು ಮುಖ್ಯಮಂತ್ರಿ ಸಲ್ಲಿಸಿರುವ ಮನವಿಯ ಮೇರೆಗೆ, ರಾಜ್ಯ ಸರ್ಕಾರವು ಡಿಪಿಆರ್ (ಸವಿವರ ಯೋಜನಾ ವರದಿ) ಸಿದ್ಧಪಡಿಸಲು ಮುಂದಾಗಿರುವುದಕ್ಕೆ ಕರವೇ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಮಾತನಾಡಿರುವ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಕನ್ನಡಿಗರ ತೆರಿಗೆ ಹಣದಿಂದ ರೂಪುಗೊಳ್ಳುವ ಮೆಟ್ರೋ ಯೋಜನೆಯನ್ನು ಅನ್ಯ ರಾಜ್ಯಕ್ಕೆ ವಿಸ್ತರಿಸುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ. ಇದರಿಂದ ಕರ್ನಾಟಕದ ಹಿತಾಸಕ್ತಿಗೆ ಧಕ್ಕೆಯಾಗಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿದು ಯೋಜನೆ ಜಾರಿಗೆ ಮುಂದಾದರೆ ಕನ್ನಡಿಗರ ಆಕ್ರೋಶ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕನ್ನಡಿಗರ ಹಾಗೂ ರಾಜ್ಯದ ಹಿತಾಸಕ್ತಿಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕರವೇ ಆಗ್ರಹಿಸಿದೆ. ಕೂಡಲೇ ಈ ಹೊಸೂರು ಮೆಟ್ರೋ ವಿಸ್ತರಣೆ ಪ್ರಸ್ತಾವನೆಯನ್ನು ಕೈಬಿಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಸ್ವರೂಪದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರವೀಣ್ ಕುಮಾರ್ ಶೆಟ್ಟಿ ಕತ್ತೆಗಂಟಿಸಿ ತಿಳಿಸಿದ್ದಾರೆ. ಮೆಟ್ರೋ ವಿಸ್ತರಣೆ ವಿವಾದವು ಈಗ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿದೆ.
 
ನಮ್ಮ ಮೆಟ್ರೋ ರೈಲನ್ನು ಬೆಂಗಳೂರಿನಿಂದ ತಮಿಳುನಾಡಿನ ಹೊಸೂರಿಗೆ ವಿಸ್ತರಿಸುವ ಪ್ರಸ್ತಾವನೆಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ವಿರೋಧ ವ್ಯಕ್ತಪಡಿಸಿದೆ. ಬೊಮ್ಮಸಂದ್ರದಿಂದ ಅತ್ತಿಬೆಲೆ ಮೂಲಕ ತಮಿಳುನಾಡಿನ ಹೊಸೂರುವರೆಗೆ ಮೆಟ್ರೋ ಮಾರ್ಗವನ್ನು ವಿಸ್ತರಿಸಲು ತಮಿಳುನಾಡು ಮುಖ್ಯಮಂತ್ರಿ ಸಲ್ಲಿಸಿರುವ ಮನವಿಯ ಮೇರೆಗೆ, ರಾಜ್ಯ ಸರ್ಕಾರವು ಡಿಪಿಆರ್ (ಸವಿವರ ಯೋಜನಾ ವರದಿ) ಸಿದ್ಧಪಡಿಸಲು ಮುಂದಾಗಿರುವುದಕ್ಕೆ ಕರವೇ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಮಾತನಾಡಿರುವ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಕನ್ನಡಿಗರ ತೆರಿಗೆ ಹಣದಿಂದ ರೂಪುಗೊಳ್ಳುವ ಮೆಟ್ರೋ ಯೋಜನೆಯನ್ನು ಅನ್ಯ ರಾಜ್ಯಕ್ಕೆ ವಿಸ್ತರಿಸುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ. ಇದರಿಂದ ಕರ್ನಾಟಕದ ಹಿತಾಸಕ್ತಿಗೆ ಧಕ್ಕೆಯಾಗಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿದು ಯೋಜನೆ ಜಾರಿಗೆ ಮುಂದಾದರೆ ಕನ್ನಡಿಗರ ಆಕ್ರೋಶ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕನ್ನಡಿಗರ ಹಾಗೂ ರಾಜ್ಯದ ಹಿತಾಸಕ್ತಿಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕರವೇ ಆಗ್ರಹಿಸಿದೆ. ಕೂಡಲೇ ಈ ಹೊಸೂರು ಮೆಟ್ರೋ ವಿಸ್ತರಣೆ ಪ್ರಸ್ತಾವನೆಯನ್ನು ಕೈಬಿಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಸ್ವರೂಪದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರವೀಣ್ ಕುಮಾರ್ ಶೆಟ್ಟಿ ಕತ್ತೆಗಂಟಿಸಿ ತಿಳಿಸಿದ್ದಾರೆ. ಮೆಟ್ರೋ ವಿಸ್ತರಣೆ ವಿವಾದವು ಈಗ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು: ನಮ್ಮ ಮೆಟ್ರೋ ರೈಲನ್ನು ಬೆಂಗಳೂರಿನಿಂದ ತಮಿಳುನಾಡಿನ ಹೊಸೂರಿಗೆ ವಿಸ್ತರಿಸುವ ಪ್ರಸ್ತಾವನೆಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ವಿರೋಧ ವ್ಯಕ್ತಪಡಿಸಿದೆ. ಬೊಮ್ಮಸಂದ್ರದಿಂದ ಅತ್ತಿಬೆಲೆ ಮೂಲಕ ತಮಿಳುನಾಡಿನ ಹೊಸೂರುವರೆಗೆ ಮೆಟ್ರೋ ಮಾರ್ಗವನ್ನು ವಿಸ್ತರಿಸಲು ತಮಿಳುನಾಡು ಮುಖ್ಯಮಂತ್ರಿ ಸಲ್ಲಿಸಿರುವ ಮನವಿಯ ಮೇರೆಗೆ, ರಾಜ್ಯ ಸರ್ಕಾರವು ಡಿಪಿಆರ್ (ಸವಿವರ ಯೋಜನಾ ವರದಿ) ಸಿದ್ಧಪಡಿಸಲು ಮುಂದಾಗಿರುವುದಕ್ಕೆ ಕರವೇ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

Add Zee News as a Preferred Source
TAGS:
Kannada News