SOCIAL MEDIA

Newsletter

PARTNER SITES
Select Language Select State

ಶಿಕ್ಷಕರ ನೇಮಕಾತಿ ವಿಳಂಬಕ್ಕೆ ಬ್ರೇಕ್ ಬೀಳುತ್ತಾ? ಜೂನ್‌ನಿಂದ ಹೊಸ ಶಿಕ್ಷಕರು ಶಾಲೆಗಳಲ್ಲಿ!

High School Teacher Recruitment 2026 : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15,000 ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Written By Chetana Devarmani
Published: Nov 27, 2026, 15:46 IST | Updated: Nov 27, 2026, 15:50 IST
Join

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದೆ. ಖಾಲಿ ಇರುವ ಬರೋಬ್ಬರಿ 15,000 ಶಿಕ್ಷಕರ ಹುದ್ದೆಗಳ ನೇಮಕಾತಿಯನ್ನು ಆದಷ್ಟು ಬೇಗ ಮುಗಿಸಿ, ಮುಂದಿನ ವರ್ಷ ಅಂದರೆ 2027ರ ಜೂನ್‌ನಲ್ಲಿ ಶಾಲೆಗಳು ಶುರುವಾಗುವಷ್ಟರಲ್ಲಿ ಹೊಸ ಶಿಕ್ಷಕರು ಕ್ಲಾಸ್‌ರೂಮ್‌ಗೆ ಬರುವಂತಾಗಬೇಕು ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಮತ್ತು ವಿಧಾನ ಪರಿಷತ್ ಸದಸ್ಯರ ಜೊತೆ ನಡೆದ ಸಭೆಯಲ್ಲಿ ಸಚಿವರು ಈ ಡೆಡ್‌ಲೈನ್ ಫಿಕ್ಸ್ ಮಾಡಿದ್ದಾರೆ.

ನೇಮಕಾತಿ ಪ್ರಕ್ರಿಯೆಯ ಕಂಪ್ಲೀಟ್ ಟೈಮ್‌ಟೇಬಲ್ ಇಲ್ಲಿದೆ: ಶಿಕ್ಷಕರ ನೇಮಕಾತಿಯಲ್ಲಿ ಯಾವುದೇ ಗೊಂದಲ ಅಥವಾ ಲೇಟ್ ಆಗಬಾರದು ಅಂತ ಸಚಿವರು ಪ್ರತಿಯೊಂದು ಹಂತಕ್ಕೂ ಸ್ಪಷ್ಟವಾದ ದಿನಾಂಕಗಳನ್ನು ನಿಗದಿ ಮಾಡಿದ್ದಾರೆ:

ಅರ್ಜಿ ಸಲ್ಲಿಸಲು ಅವಕಾಶ: ಈಗಾಗಲೇ 15,000 ಶಿಕ್ಷಕರ ಹುದ್ದೆಗಳಿಗೆ ನೋಟಿಫಿಕೇಶನ್ ಹೊರಡಿಸಲಾಗಿದ್ದು, ಅಭ್ಯರ್ಥಿಗಳಿಗೆ ಅನುಕೂಲ ಆಗಲಿ ಅಂತ ಅರ್ಜಿ ಸಲ್ಲಿಸಲು ಡಿಸೆಂಬರ್ 21, 2026ರವರೆಗೆ ಟೈಮ್ ವಿಸ್ತರಿಸಲಾಗಿದೆ.

ಪರೀಕ್ಷೆ ಯಾವಾಗ?: ನೇಮಕಾತಿ ಪರೀಕ್ಷೆಗಳನ್ನು 2027ರ ಜನವರಿ 18ರಿಂದ ಫೆಬ್ರವರಿ 12ರವರೆಗೆ ನಡೆಸಲು ಪ್ಲಾನ್ ಮಾಡಲಾಗಿದೆ. ಜನವರಿ ಅಂತ್ಯದೊಳಗೆ ಪರೀಕ್ಷಾ ಪ್ರಕ್ರಿಯೆಗಳನ್ನು ಚುರುಕುಗೊಳಿಸಿ ಮುಗಿಸುವಂತೆ ಸಚಿವರು ಹೇಳಿದ್ದಾರೆ.

ಆರ್ಡರ್ ಕಾಪಿ ಯಾವಾಗ ಸಿಗುತ್ತೆ?: ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮುಗಿದ ತಕ್ಷಣ, 2027ರ ಮಾರ್ಚ್ ಅಥವಾ ಏಪ್ರಿಲ್ ತಿಂಗಳೊಳಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ (Appointment Order) ಕೊಡಬೇಕು ಅಂತ ಸೂಚಿಸಿದ್ದಾರೆ.

ಜೂನ್‌ನಿಂದ ಶಾಲೆಗಳಲ್ಲಿ ಹೊಸ ಶಿಕ್ಷಕರು: ಮುಂದಿನ ಶೈಕ್ಷಣಿಕ ವರ್ಷಕ್ಕೆ 2027ರ ಜೂನ್‌ನಲ್ಲಿ ಶಾಲೆಗಳು ರೀ-ಓಪನ್ ಆಗುವ ಹೊತ್ತಿಗೆ, ಹೊಸದಾಗಿ ಸೆಲೆಕ್ಟ್ ಆದ ಎಲ್ಲಾ ಶಿಕ್ಷಕರು ಶಾಲೆಗಳಿಗೆ ಹಾಜರಾಗಿ ಮಕ್ಕಳಿಗೆ ಪಾಠ ಶುರು ಮಾಡಬೇಕು ಅಂತ ಸಚಿವರು ಸ್ಪಷ್ಟಪಡಿಸಿದ್ದಾರೆ.

ಅಧಿಕಾರಿಗಳಿಗೆ ಸಚಿವರ ಖಡಕ್ ವಾರ್ನಿಂಗ್ : ಈ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಕಾರಣಕ್ಕೂ ವಿಳಂಬ ಆಗಬಾರದು, ಕೊಟ್ಟಿರುವ ಟೈಮ್‌ಟೇಬಲ್ ಪ್ರಕಾರವೇ ಎಲ್ಲಾ ಕೆಲಸ ಮುಗಿಯಬೇಕು ಅಂತ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಅವರಿಗೆ ಮಧು ಬಂಗಾರಪ್ಪ ನಿರ್ದೇಶನ ನೀಡಿದ್ದಾರೆ.

ಸಭೆಯಲ್ಲಿ ಚರ್ಚೆಯಾದ ಇನ್ನಿತರ ಪ್ರಮುಖ ವಿಚಾರಗಳು : ಶಿಕ್ಷಕ ಮತ್ತು ಪದವೀಧರ ಕ್ಷೇತ್ರದ ಎಂಎಲ್‌ಸಿಗಳ ಜೊತೆ ನಡೆದ ಈ ಮೀಟಿಂಗ್‌ನಲ್ಲಿ ಶಿಕ್ಷಣ ಕ್ಷೇತ್ರದ ಹಲವು ಹಳೆಯ ಸಮಸ್ಯೆಗಳ ಬಗ್ಗೆಯೂ ಮಾತುಕತೆ ನಡೆದಿದೆ:

ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ 1998ರಿಂದ ಮತ್ತು ಅನುದಾನಿತ ಹೈಸ್ಕೂಲ್, ಕಾಲೇಜುಗಳಲ್ಲಿ 2015ರಿಂದ ಖಾಲಿ ಉಳಿದಿರುವ ಹುದ್ದೆಗಳನ್ನು ತುಂಬುವ ಬಗ್ಗೆ ಚರ್ಚಿಸಲಾಯಿತು.

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕಾತಿ ಮಾಡಬೇಕು ಅಂತ ಸದಸ್ಯರು ಸಚಿವರಿಗೆ ಮನವಿ ಮಾಡಿದರು.

ಅನುದಾನಿತ ಶಾಲಾ-ಕಾಲೇಜು ಸಿಬ್ಬಂದಿಗೂ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡುವುದು, ಕಾಲ್ಪನಿಕ ವೇತನದ ಹೈಕೋರ್ಟ್ ಆದೇಶ ಜಾರಿ ಹಾಗೂ ಶಾಲೆಗಳ ಮಾನ್ಯತೆ ನವೀಕರಣ  ಪ್ರಕ್ರಿಯೆಯನ್ನು ಸುಲಭಗೊಳಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಒಟ್ಟಿನಲ್ಲಿ, ಸರ್ಕಾರದ ಈ ನಿರ್ಧಾರದಿಂದ ಸಾವಿರಾರು ಶಿಕ್ಷಕ ಆಕಾಂಕ್ಷಿಗಳಿಗೆ ದೊಡ್ಡ ನಿರಾಳತೆ ಸಿಕ್ಕಂತಾಗಿದ್ದು, ಮುಂದಿನ ಜೂನ್‌ನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರ ಕೊರತೆ ನೀಗುವ ಭರವಸೆ ಮೂಡಿದೆ.
 

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ZEENEWS TRENDING STORIES