SOCIAL MEDIA

Newsletter

PARTNER SITES
Select Language Select State

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ! ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಗಾಳಿ ಸಹಿತ ಭಾರೀ ಮಳೆ!

ಸೆಪ್ಟೆಂಬರ್ 27ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗಬಹುದು.

Written By Puttaraj K Alur
Published: Sep 27, 2026, 08:56 AM IST | Updated: Sep 27, 2026, 09:04 AM IST
Image Credit: Karnataka Rain Forecast
Join

Karnataka Rain Forecast: ರಾಜ್ಯದಲ್ಲಿ ಮತ್ತೆ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಸೆಪ್ಟೆಂಬರ್ 27 ಮತ್ತು 28ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದು, ಕರಾವಳಿ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದ್ದರೆ, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಸೆಪ್ಟೆಂಬರ್ 27ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗಬಹುದು. ಉಳಿದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಸೆಪ್ಟೆಂಬರ್ 28ರಂದು ಹಲವು ಜಿಲ್ಲೆಗಳಲ್ಲಿ ಮಳೆ

ಸೆಪ್ಟೆಂಬರ್ 28ರಂದು ರಾಜ್ಯದಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲಿ ಮಳೆಯ ಸಂದರ್ಭದಲ್ಲಿ ಗಾಳಿಯ ವೇಗವೂ ಹೆಚ್ಚಾಗುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

ಮೈಸೂರು, ಚಾಮರಾಜನಗರ, ಕೊಡಗಿನಲ್ಲಿ ಭಾರಿ ಮಳೆ ಸಾಧ್ಯತೆ

ದಕ್ಷಿಣ ಒಳನಾಡಿನ ಜಿಲ್ಲೆಗಳ ಪೈಕಿ ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 28ರಂದು ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಹೀಗಾಗಿ ಈ ಭಾಗಗಳಲ್ಲಿ ಸಂಚರಿಸುವವರು ಹವಾಮಾನ ಪರಿಸ್ಥಿತಿಯನ್ನ ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಮಳೆ ಮತ್ತು ಗಾಳಿಯ ಸಂದರ್ಭದಲ್ಲಿ ಮರಗಳ ಕೆಳಗೆ ಅಥವಾ ದುರ್ಬಲ ಕಟ್ಟಡಗಳ ಸಮೀಪ ನಿಲ್ಲದಿರುವುದು ಸುರಕ್ಷಿತ.

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಸೆಪ್ಟೆಂಬರ್ 28ರಂದು ಮಳೆಯ ಮುನ್ಸೂಚನೆ ಇದೆ. ಇದರೊಂದಿಗೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವುದು ಸೂಕ್ತ. ಮಳೆಯ ಸಮಯದಲ್ಲಿ ರಸ್ತೆಯಲ್ಲಿ ಗೋಚರತೆ ಕಡಿಮೆಯಾಗುವ ಸಾಧ್ಯತೆಯಿರುವುದರಿಂದ ನಿಧಾನವಾಗಿ ವಾಹನ ಚಲಾಯಿಸುವುದು ಉತ್ತಮ.

ಕರಾವಳಿಯಲ್ಲಿ ಮಳೆ ಮುಂದುವರಿಕೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಈಗಾಗಲೇ ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿಯೂ ಹವಾಮಾನ ಬದಲಾವಣೆಗಳನ್ನ ಗಮನಿಸುವುದು ಅಗತ್ಯವಾಗಿದೆ. ಮೀನುಗಾರರು ಹಾಗೂ ಸಮುದ್ರಕ್ಕೆ ತೆರಳುವವರು ಸ್ಥಳೀಯ ಹವಾಮಾನ ಮುನ್ಸೂಚನೆಗಳನ್ನ ಗಮನಿಸುವುದು ಮುಖ್ಯ. ಪ್ರವಾಸಿಗರು ಕೂಡ ಮಳೆ ಮತ್ತು ಗಾಳಿಯ ಪರಿಸ್ಥಿತಿಯನ್ನ ಗಮನದಲ್ಲಿಟ್ಟುಕೊಂಡು ಪ್ರವಾಸದ ಯೋಜನೆ ರೂಪಿಸುವುದು ಉತ್ತಮ.

ಯಾವ ಜಿಲ್ಲೆಗಳಲ್ಲಿ ಹೆಚ್ಚು ಎಚ್ಚರಿಕೆ?

ಸೆಪ್ಟೆಂಬರ್ 28ರಂದು ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರೀ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯೊಂದಿಗೆ ಗಾಳಿ ಬೀಸುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಒಟ್ನಲ್ಲಿ ಸೆಪ್ಟೆಂಬರ್ 27 ಮತ್ತು 28ರಂದು ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಹಾಗೂ ಮೈಸೂರು, ಚಾಮರಾಜನಗರ ಮತ್ತು ಕೊಡಗಿನಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸ್ಥಳೀಯ ಹವಾಮಾನ ಮುನ್ಸೂಚನೆಗಳನ್ನ ಗಮನಿಸುವುದು ಉತ್ತಮ.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 

ZEENEWS TRENDING STORIES