• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಕರ್ನಾಟಕ ಹವಾಮಾನ ಮುನ್ಸೂಚನೆ: ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ, ಉತ್ತರ ಒಳನಾಡಿನಲ್ಲಿ ಒಣಹವೆ

ಕರ್ನಾಟಕ ಹವಾಮಾನ ಮುನ್ಸೂಚನೆ: ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ, ಉತ್ತರ ಒಳನಾಡಿನಲ್ಲಿ ಒಣಹವೆ

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನದ ಬಗ್ಗೆ ಐಎಂಡಿ ಮುನ್ಸೂಚನೆ ನೀಡಿದೆ.

Written ByYashaswini V
Published: Nov 07, 2026, 07:29 IST|Updated: Nov 07, 2026, 07:41 IST
joinshare
ಕರ್ನಾಟಕ ಹವಾಮಾನ ಮುನ್ಸೂಚನೆ: ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ, ಉತ್ತರ ಒಳನಾಡಿನಲ್ಲಿ ಒಣಹವೆ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Karnataka Rain Alert: ಸಕ್ಕರೆನಾಡು ಮಂಡ್ಯದ ಬೆಳ್ಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ 7 ಸೆಂ.ಮೀ. ಮಳೆ ದಾಖಲಾಗಿದ್ದು, ಇಂದು ಸಿಲಿಕಾನ್‌ ಸಿಟಿ ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ 11 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ:
ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ಇಂದು (ನ. 7) ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ:
ಇದೇ ವೇಳೆ ಉಡುಪಿ ಸೇರಿದಂತೆ ದಕ್ಷಿಣ ಕನ್ನಡ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಕೆ: 
ಐಎಂಡಿ ಪ್ರಕಾರ, ಉತ್ತರ ಒಳನಾಡಿನ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ ಎನ್ನಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ.

ದೀಪಾವಳಿಗೂ ವರುಣನ ಅಡ್ಡಿ:
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಏಳು ದಿನಗಳ ಕಾಲ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸೂಚನೆ ಇದೆ ಎನ್ನಲಾಗಿದೆ. ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಒಮ್ಮೆ ಬಿಸಿಲು, ಮತ್ತೊಮ್ಮೆ ಮೋಡ ಕವಿದ ವಾತಾವರಣಗಳು ಕಂಡು ಬರಬಹುದು ಎಂದು ತಿಳಿದುಬಂದಿದೆ. ಮಳೆಯಿಂದಾಗಿ ದೀಪಾವಳಿ ಆಚರಣೆಗೂ ಅಡ್ಡಿ ಉಂಟಾಗಬಹುದು ಎನ್ನಲಾಗುತ್ತಿದೆ.  

ಕರ್ನಾಟಕ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಕರಾವಳಿ ಕರ್ನಾಟಕ, ಮಲೆನಾಡು ಭಾಗದ ಜಿಲ್ಲೆಗಳು, ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಮಳೆಯಾಗಬಹುದು. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಂದಿನ ಒಂದು ವಾರಗಳ ಕಾಲ ಇದೇ ವಾತಾವರಣ ಮುಂದುವರೆಯುವ ನಿರೀಕ್ಷೆ ಇದ್ದು, ಮಲೆನಾಡು, ಕರಾವಳಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಮಳೆ ಸೂಚನೆಗಳಿವೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.

ಮಂಜು-ಚಳಿ:
ಈ ತಂಪಾದ ವಾತಾವರಣದಿಂದಾಗಿ ಮುಂಜಾನೆ ಹಾಗೂ ರಾತ್ರಿ ಸಮಯದಲ್ಲಿ ಚಳಿ ಜೊತೆಗೆ ಮಂಜು ಆವರಿಸುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. 
 

Add Zee News as a Preferred Source
TAGS:
Weather Update
Kannada News