ರಾಜ್ಯದಲ್ಲಿ ಹವಾಮಾನದ ದಿಢೀರ್ ಬದಲಾವಣೆ; ಒಂದೆಡೆ ಕೊರೆಯುವ ಚಳಿ, ಮತ್ತೊಂದೆಡೆ ಚಂಡಮಾರುತದ ಆತಂಕ!
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಕೊಡಗಿನ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ರಾತ್ರಿ ಚಳಿಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ. ಮತ್ತೊಂದೆಡೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ನವೆಂಬರ್ 14 ಅಥವಾ 15ರ ವೇಳೆಗೆ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ. ನವೆಂಬರ್ 19ರ ವೇಳೆಗೆ ಆಂಧ್ರಪ್ರದೇಶದ ಕರಾವಳಿ ಸಮೀಪ ತಲುಪುವ ಅಂದಾಜಿದ್ದು, ಕರ್ನಾಟಕದ ಮೇಲಿನ ಪರಿಣಾಮದ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ.
Karnataka Weather Report: ಕರ್ನಾಟಕದ ಹವಾಮಾನದಲ್ಲಿ ದಿಢೀರ್ ಬದಲಾವಣೆಗಳು ಕಂಡುಬರುತ್ತಿದ್ದು, ರಾಜ್ಯದ ಜನರಿಗೆ ಮುಂದಿನ ಕೆಲವು ದಿನಗಳು ಹವಾಮಾನದ ದೃಷ್ಟಿಯಿಂದ ಮಹತ್ವದ್ದಾಗಿವೆ. ಒಂದೆಡೆ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಮುನ್ಸೂಚನೆ ಇದ್ದರೆ, ಮತ್ತೊಂದೆಡೆ ರಾತ್ರಿ ವೇಳೆ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಇದರ ನಡುವೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯೂ ವ್ಯಕ್ತವಾಗಿದೆ. ಹೀಗಾಗಿ ರಾಜ್ಯದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಯಾವ ರೀತಿಯ ಬದಲಾವಣೆಗಳಾಗಲಿವೆ ಎಂಬ ಕುತೂಹಲ ಮೂಡಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ
ಇಂದಿನ ಹವಾಮಾನ ವರದಿಯ ಪ್ರಕಾರ, ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯ ಲಕ್ಷಣಗಳಿಲ್ಲದೆ ಒಣ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ. ಆದರೆ ಕೊಡಗು ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಮಾತ್ರ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ತಿಳಿಸಿದೆ. ಇದರ ಹೊರತಾಗಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆ ಇಲ್ಲ. ಹೀಗಾಗಿ ಬಹುತೇಕ ಕಡೆಗಳಲ್ಲಿ ಒಣಹವೆಯ ವಾತಾವರಣ ಕಂಡುಬರಲಿದೆ. ಕೊಡಗು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಾತ್ರ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಲ್ಲಿನ ಹವಾಮಾನದಲ್ಲಿ ಸ್ವಲ್ಪ ವ್ಯತ್ಯಾಸ ಕಂಡುಬರಬಹುದು.
ರಾತ್ರಿ ಚಳಿ ಹೆಚ್ಚಳ, ಹಗಲು ಬಿಸಿಲಿನ ವಾತಾವರಣ
ರಾಜ್ಯದಲ್ಲಿ ಹಗಲು ಮತ್ತು ರಾತ್ರಿ ತಾಪಮಾನದ ನಡುವೆ ವ್ಯತ್ಯಾಸ ಕಂಡುಬರುತ್ತಿದೆ. ರಾತ್ರಿ ವೇಳೆಯಲ್ಲಿ ಚಳಿಯ ಪ್ರಮಾಣ ಹೆಚ್ಚಾಗುತ್ತಿದ್ದು, ಜನರು ಕೊರೆಯುವ ಚಳಿಯನ್ನ ಅನುಭವಿಸುವಂತಾಗಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಚಳಿಯ ತೀವ್ರತೆ ಸಾಮಾನ್ಯಕ್ಕಿಂತ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದೆ. ಆದರೆ ಹಗಲಿನ ವೇಳೆಯಲ್ಲಿ ಪರಿಸ್ಥಿತಿ ಇದಕ್ಕೆ ವಿರುದ್ಧವಾಗಿದೆ. ರಾತ್ರಿ ವೇಳೆ ಚಳಿಯ ವಾತಾವರಣವಿದ್ದರೂ, ಹಗಲಿನಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಾಗಿರುವುದು ಕಂಡುಬರುತ್ತಿದೆ. ಹೀಗಾಗಿ ಒಂದೇ ದಿನದಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ವಿಭಿನ್ನ ರೀತಿಯ ಹವಾಮಾನವನ್ನ ಜನರು ಅನುಭವಿಸುವಂತಾಗಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಮುನ್ಸೂಚನೆ
ಕರ್ನಾಟಕದಲ್ಲಿ ಚಳಿಯ ಪ್ರಮಾಣ ಹೆಚ್ಚಾಗುತ್ತಿರುವ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಹವಾಮಾನ ಬೆಳವಣಿಗೆ ಗಮನ ಸೆಳೆದಿದೆ. ಉತ್ತರ ಪೆಸಿಫಿಕ್ ಸಾಗರದ ಕಡೆಯಿಂದ ಬಂಗಾಳಕೊಲ್ಲಿಯತ್ತ ಪ್ರಬಲ ಮಾರುತಗಳು ಚಲಿಸುತ್ತಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದರ ಜೊತೆಗೆ ಹಿಂದೂ ಮಹಾಸಾಗರದ ಕಡೆಯಿಂದ ಶ್ರೀಲಂಕಾದ ದಕ್ಷಿಣ ಕರಾವಳಿ ಭಾಗದಲ್ಲಿ ಗಾಳಿಯ ಚಲನೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳಲ್ಲಿ ಶ್ರೀಲಂಕಾದ ದಕ್ಷಿಣ ಕರಾವಳಿ ಭಾಗದಲ್ಲಿ ಪಶ್ಚಿಮದಿಂದ ಪೂರ್ವದ ಕಡೆಗೆ ಗಾಳಿಯ ಚಲನೆ ಹೆಚ್ಚಾಗುವ ನಿರೀಕ್ಷೆಯಿದೆ. ಈ ಬೆಳವಣಿಗೆಯ ಪರಿಣಾಮವಾಗಿ ಶ್ರೀಲಂಕಾದ ಆಗ್ನೇಯ ಕರಾವಳಿ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳು ಗೋಚರಿಸುತ್ತಿವೆ.
ನವೆಂಬರ್ 14 ಅಥವಾ 15ಕ್ಕೆ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ
ಶ್ರೀಲಂಕಾದ ಆಗ್ನೇಯ ಕರಾವಳಿ ಭಾಗದಲ್ಲಿ ಉಂಟಾಗುವ ಸಾಧ್ಯತೆಯಿರುವ ವಾಯುಭಾರ ಕುಸಿತವು ಮುಂದಿನ ದಿನಗಳಲ್ಲಿ ತೀವ್ರಗೊಳ್ಳಬಹುದು ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಈ ವ್ಯವಸ್ಥೆಯು ನವೆಂಬರ್ 14 ಅಥವಾ 15ರ ಸುಮಾರಿಗೆ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ತಿಳಿಸಿದೆ. ಆದರೆ ಈ ಚಂಡಮಾರುತದ ನಿಖರ ಚಲನೆಯ ದಿಕ್ಕು ಮತ್ತು ಪಥದ ಕುರಿತು ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಸದ್ಯದ ಅಂದಾಜಿನ ಪ್ರಕಾರ, ನವೆಂಬರ್ 19ರ ವೇಳೆಗೆ ಇದು ಆಂಧ್ರಪ್ರದೇಶದ ಕರಾವಳಿ ಸಮೀಪವನ್ನ ತಲುಪುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ವಾಯುಭಾರ ಕುಸಿತದ ಬೆಳವಣಿಗೆ ಮತ್ತು ಅದರ ಚಲನೆಯ ಕುರಿತು ಹೆಚ್ಚಿನ ಸ್ಪಷ್ಟತೆ ದೊರೆಯುವ ನಿರೀಕ್ಷೆಯಿದೆ.
ಕರ್ನಾಟಕದ ಮೇಲೂ ಚಂಡಮಾರುತದ ಪರಿಣಾಮ ಬೀರಲಿದೆಯೇ?
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ವ್ಯಕ್ತವಾಗಿರುವುದರಿಂದ ಕರ್ನಾಟಕದ ಮೇಲೂ ಅದರ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆ ಎದುರಾಗಿದೆ. ಚಂಡಮಾರುತದ ಚಲನೆಯ ನಿಖರ ಪಥ ಇನ್ನೂ ನಿರ್ಧಾರವಾಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆ ಮರಳುವ ಸಾಧ್ಯತೆ ಸೇರಿದಂತೆ ಮುಂದಿನ ಹವಾಮಾನ ಬದಲಾವಣೆಗಳ ಬಗ್ಗೆ ಕಾದು ನೋಡಬೇಕಿದೆ. ಒಟ್ನಲ್ಲಿ ಸದ್ಯ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಮುನ್ಸೂಚನೆ ಇದ್ದು, ಉತ್ತರ ಕರ್ನಾಟಕದಲ್ಲಿ ರಾತ್ರಿ ಚಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಮುನ್ಸೂಚನೆ ಹವಾಮಾನ ವಲಯದಲ್ಲಿ ಗಮನ ಸೆಳೆದಿದೆ. ಮುಂದಿನ ದಿನಗಳಲ್ಲಿ ಈ ಬೆಳವಣಿಗೆ ಯಾವ ತಿರುವು ಪಡೆದುಕೊಳ್ಳಲಿದೆ ಮತ್ತು ರಾಜ್ಯದ ಹವಾಮಾನದ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನ ಕಾದು ನೋಡಬೇಕಿದೆ.