• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್‌

ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್‌

ಹವಾಮಾನ ವರದಿಯ ಪ್ರಕಾರ, ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Written ByYashaswini V
Published: Sep 26, 2026, 08:31 AM IST|Updated: Sep 26, 2026, 08:38 AM IST
joinshare
ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್‌

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬಂಗಾಳಕೊಲ್ಲಿಯಲ್ಲಿ ಎದ್ದಿರುವ ʼಅರ್ನಬ್‌ ಚಂಡಮಾರುತʼ ನೆರೆಯ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಿದ್ದು ಇದರಿಂದಾಗಿ ಆಂಧ್ರದ ಕೆಲವು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಇದರ ಪ್ರಭಾವ ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಭಾಗಗಳಲ್ಲೂ ಕಂಡು ಬರಲಿದ್ದು, ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣದಿಂದ ಬಿರುಗಾಳಿ ಸಹಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಭವಿಷ್ಯ ನುಡಿದಿದೆ.

ಸೆಪ್ಟೆಂಬರ್ 30ರವರೆಗೂ ದಕ್ಷಿಣ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಬಗ್ಗೆ ಭವಿಷ್ಯ ನುಡಿದಿರುವ ಭಾರತೀಯ ಹವಾಮಾನ ಇಲಾಖೆ ಕರಾವಳಿ ಕರ್ನಾಟಕ ಉತ್ತರ ಒಳನಾಡಿನಲ್ಲೂ ಸಾಧಾರಣದಿಂದ ಭಾರೀ ಮಳೆಯಾಗುವ ಬಗ್ಗೆ ಸೂಚಿಸಿದ್ದು, ಇದೇ ವೇಳೆ ಕರಾವಳಿ ಕರ್ನಾಟಕವೂ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಕರ್ನಾಟಕ ಹವಾಮಾನ ವರದಿಯು ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆ ಸೂಚನೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭವಿಷ್ಯ ನುಡಿದಿದೆ.

ಇದಲ್ಲದೆ, ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಉತ್ತರ ಒಳನಾಡಿನಲ್ಲಿಯೂ ಹಗುರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ಭಾನುವಾರವೂ ಸಹ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಪ್ರದೇಶಗಳಲ್ಲಿ ಜಾಗರೂಕತೆ ವಹಿಸಲು ಮುನ್ನೆಚ್ಚರಿಕೆಯಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂಬರುವ ದಿನಗಳಲ್ಲೂ ಕರಾವಳಿ ಹಾಗೂ ಮಲೆನಾಡಿನ ಪ್ರಮುಖ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ ಎನ್ನಲಾಗಿದೆ.

ಉತ್ತರ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಹಾವೇರಿ, ಬೆಳಗಾವಿ, ಧಾರವಾಡ ಮತ್ತು ಗದಗ್ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ದಕ್ಷಿಣ ಒಳನಾಡಿನ ಮಲೆನಾಡು ಪಕ್ಕದ ಪ್ರದೇಶಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಸಾಧಾರಣ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರತೀಯ ಹವಾಮಾನ ಇಲಾಖೆ ಮುಂದಿನ ಬುಧವಾರ (ಸೆ. 30)ದವರೆಗೂ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಬಗ್ಗೆ ನಿರೀಕ್ಷೆ ಇದ್ದು, ಕೆಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್‌ ಅನ್ನು ಸಹ ಘೋಷಿಸಲಾಗಿದೆ. ಎಲ್ಲೆಲ್ಲಿ ಮಳೆ ಆಗಲಿದೆ ಎಂಬ ವಿವರ ಇಲ್ಲಿದೆ.

ಸೆಪ್ಟೆಂಬರ್‌ 26ರ ಶನಿವಾರದ ಹವಾಮಾನ ವರದಿಯ ಪ್ರಕಾರ, ಇಂದು ಕರ್ನಾಟಕದ ಕರಾವಳಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗುವ ನಿರೀಕ್ಷೆ ಇದೆ ಎನ್ನಲಾಗಿದೆ.  

ಸೆಪ್ಟೆಂಬರ್‌ 27 ರಿಂದ ಸೆಪ್ಟೆಂಬರ್‌ 29:
ಸೆಪ್ಟೆಂಬರ್‌ 27 ರಿಂದ ಸೆಪ್ಟೆಂಬರ್‌ 29ರವರೆಗೆ ಎಂದರೆ ಭಾನುವಾರ, ಸೋಮವಾರ ಮತ್ತು ಮಂಗಳವಾರ ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.

ಸೆಪ್ಟೆಂಬರ್‌ 30 ರ ಬುಧವಾರದಂದು ಕರಾವಳಿ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದ್ದು, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ, ದಕ್ಷಿಣ ಒಳನಾಡಿನಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಭವಿಷ್ಯ ನುಡಿದಿದೆ. 

ಕರ್ನಾಟಕದ ವಾಯು ಗುಣಮಟ್ಟ ವರದಿ:  
ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ, ಎಕ್ಯೂಐ ಅತ್ಯುತ್ತಮ ಮಟ್ಟದಲ್ಲಿದೆ. ಸತತ ಮಳೆಯ ಪರಿಣಾಮವಾಗಿ ಬೆಂಗಳೂರಿನ ಸರಾಸರಿ ಎಕ್ಯೂಐ 38 ರಿಂದ 49 ರಷ್ಟಿದ್ದು, ಉತ್ತಮ ವಿಭಾಗಕ್ಕೆ ಸೇರಿದೆ. ಮಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿಯಲ್ಲೂ ಧೂಳಿನ ಪ್ರಮಾಣ ತಗ್ಗಿ ಶುದ್ಧ ಗಾಳಿ ದಾಖಲಾಗಿದೆ. ಶ್ವಾಸಕೋಶದ ಸಮಸ್ಯೆಯಿರುವವರಿಗೆ ಇದು ಸೂಕ್ತ ವಾತಾವರಣವಾಗಿದೆ.
 

Add Zee News as a Preferred Source
TAGS:
Weather Update
Kannada News