SOCIAL MEDIA

Newsletter

PARTNER SITES
Select Language Select State

ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಕೆ.. ಈ ಜಿಲ್ಲೆಗಳಿಗೆ ಅ.19ರವರೆಗೆ ಎಲ್ಲೊ ಅಲರ್ಟ್ ಘೋಷಣೆ!

ಬೆಂಗಳೂರು ಹಾಗೂ ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಷ್ಟೇ ಅಲ್ಲದೆ, ಅಕ್ಟೋಬರ್‌ 19ರವರೆಗೆ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಕುರಿತು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ..

Written By Krishna NK
Published: Oct 17, 2026, 08:16 PM IST | Updated: Oct 17, 2026, 08:22 PM IST
Image Credit: Karnataka Rain News
Join

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ತಣ್ಣಗಾಗಿತ್ತು ಎನ್ನುವಷ್ಟರಲ್ಲಿ, ಮಳೆರಾಯ ಮತ್ತೆ ತನ್ನ ಪ್ರತಾಪ ತೋರಿಸಲು ಶುರು ಮಾಡಿದ್ದಾನೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ವರುಣ ದೇವ ಬಿಡುವು ನೀಡದೆ ಸತಾಯಿಸುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ರಾಜಧಾನಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಮುಂದಿನ ಕೆಲ ದಿನಗಳವರೆಗೆ ರಾಜ್ಯದ ವಿವಿಧ ಭಾಗಗಳಿಗೆ ಮಳೆ ಎಚ್ಚರಿಕೆ ಘೋಷಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ

ಬೆಂಗಳೂರು ನಗರ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಹವಾಮಾನ ಇಲಾಖೆಯು ಇಂದು ‘ಆರೆಂಜ್ ಅಲರ್ಟ್’ ಎಚ್ಚರಿಕೆ ನೀಡಿದೆ. ಅಷ್ಟೇ ಅಲ್ಲದೆ, ನಾಳೆಯಿಂದ ಅಕ್ಟೋಬರ್ 23ರವರೆಗೂ ವಿವಿಧ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಮುಂದುವರಿಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಇನ್ನು ಕರಾವಳಿ ಭಾಗದ ಜಿಲ್ಲೆಗಳಲ್ಲೂ ಅಕ್ಟೋಬರ್ 19ರವರೆಗೆ ಯೆಲ್ಲೊ ಅಲರ್ಟ್ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಮಳೆಯ ಈ ಅನಿರೀಕ್ಷಿತ ಅಬ್ಬರ ಕ್ರೀಡಾಭಿಮಾನಿಗಳ ಉತ್ಸಾಹಕ್ಕೂ ತಣ್ಣೀರು ಎರಚಿದೆ. ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ರೋಚಕ 5 ಪಂದ್ಯಗಳ ಟಿ20 ಸರಣಿಯಲ್ಲಿ ಉಭಯ ತಂಡಗಳು ಈಗಾಗಲೇ ತಲಾ 2 ಪಂದ್ಯಗಳನ್ನು ಗೆದ್ದು 2-2ರಿಂದ ಸಮಬಲ ಸಾಧಿಸಿವೆ. ಇವತ್ತು ನಡೆಯಲಿರುವ 5ನೇ ಹಾಗೂ ಅತ್ಯಂತ ನಿರ್ಣಾಯಕ ಅತಿಯಾದ ಕುತೂಹಲ ಕೆರಳಿಸಿರುವ ಕೊನೆಯ ಟಿ20 ಪಂದ್ಯವು ಸರಣಿ ವಿಜೇತರನ್ನು ಅಧಿಕೃತವಾಗಿ ನಿರ್ಧರಿಸಲಿದೆ. ಆದರೆ, ಸಂಜೆಯಿಂದಲೇ ಬೆಂಗಳೂರಿನಲ್ಲಿ ಕಾರ್ಮೋಡ ಕವಿದು ಮಳೆ ಆರಂಭವಾಗಿರುವುದು ಕ್ರಿಕೆಟ್ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ.

ಹವಾಮಾನ ಇಲಾಖೆಯ ವರದಿ ಪ್ರಕಾರ, ಅಕ್ಟೋಬರ್ 20ರಿಂದ 22ರವರೆಗೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಅಕ್ಟೋಬರ್ 18ರಿಂದ 23ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲೂ ಇಂದು ಒಂದೆರಡು ಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ರಾಜ್ಯದ ಈ ನಿರ್ದಿಷ್ಟ ಪ್ರದೇಶಗಳಲ್ಲಿ ಕೆಲವೆಡೆ 64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆಯಿರುವುದರಿಂದ ಐಎಂಡಿ ಯೆಲ್ಲೊ ಅಲರ್ಟ್ ನೀಡಿದೆ. ಸಾರ್ವಜನಿಕರು ಹಾಗೂ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಹಾಗೂ ತಗ್ಗು ಪ್ರದೇಶಗಳ ಜನರು ಎಚ್ಚರಿಕೆಯಿಂದ ಇರುವಂತೆ ಆಡಳಿತ ಮಂಡಳಿ ಮನವಿ ಮಾಡಿದೆ.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ZEENEWS TRENDING STORIES