SOCIAL MEDIA

Newsletter

PARTNER SITES
Select Language Select State

KAS Exams : ಪಾರದರ್ಶಕತೆಗೆ ಒತ್ತು, ಅಕ್ರಮ ತಡೆಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ

ಕೆಪಿಎಸ್‌ಸಿ ಪರೀಕ್ಷೆಗಳಲ್ಲಿ ಹಿಂದೆ ನಡೆದ ಅಕ್ರಮಗಳು ಮತ್ತು ಸವಾಲುಗಳ ಹಿನ್ನೆಲೆಯಲ್ಲಿ, ನವೆಂಬರ್ 15ರಂದು ನಡೆಯಲಿರುವ 319 ಗೆಜೆಟೆಡ್ ಪ್ರೊಬೇಷನರ್ಸ್ (ಕೆಎಎಸ್) ಹುದ್ದೆಗಳ ಮುಖ್ಯ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಕಟ್ಟುನಿಟ್ಟಾಗಿ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳನ್ನು ತಡೆಯಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು, ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.. ಈ ವೇಳೆ ಮಹತ್ವದ ನಿರ್ಧಾರಗಳನ್ನು ಕೈಗೊಂಡರು..

Written By Krishna NK
Published: Nov 12, 2026, 21:53 IST | Updated: Nov 12, 2026, 21:56 IST
Image Credit: KAS Exams
Join

ಬೆಂಗಳೂರು : ಕೆಪಿಎಸ್‌ಸಿ ಕರ್ಮಕಾಂಡ ವಿಪಕ್ಷಗಳಿಗೆ ಬ್ರಹ್ಮಾಸ್ತ್ರ ಆದ ಬೆನ್ನಲ್ಲೇ ಸಿಎಂ ಡಿಕೆ ಶಿವಕುಮಾರ್ ಇಂದು ಉನ್ನತ ಮಟ್ಟದ ಸಭೆ ನಡೆಸಿದ್ರು. ಪರೀಕ್ಷೆಯಲ್ಲಿ ಹಿಂದೆ ಬಾರಿ ಅಕ್ರಮ ನಡೆದಿತ್ತು ಮತ್ತೆ ಮುಂದಿನ ಪರೀಕ್ಷೆಯಲ್ಲಿ ಎಡವಟ್ಟು  ಆಗಬಾರದು ಎಂದು ಕೆಪಿಎಸ್‌ಸಿಯಲ್ಲಿ ಆಗಬೇಕಾದ ಅಮೂಲಾಗ್ರ ಬದಲಾವಣೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಹೀಗಾಗಿ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ಹಾಗೂ ಎಸ್ಪಿ, ಡಿಸಿಗಳ ಸಭೆ ಮಾಡಿದ ಸಿಎಂ ಹಲವು ಸೂಚನೆ ನೀಡಿದ್ದಾರೆ..

ಕೆಪಿಎಸ್‌ಸಿಯಿಂದ 319 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ನ.15ರಂದು ಪರೀಕ್ಷೆ ನಡೆಯುತ್ತಿದೆ. ಒಟ್ಟು 1.47 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಆದ್ರೆ ಸರ್ಕಾರಕ್ಕೆ ಭಯ ಇರೋದು ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆ ಅಕ್ರಮಗಳು ಸರ್ಕಾರದ ನಿದ್ದೆಗೆಡಿಸಿವೆ. 2011ರಲ್ಲಿ ಈ ಕೆಎಎಸ್ ಪರೀಕ್ಷೆಯಲ್ಲಿ ಭಾರಿ ಅಕ್ರಮವಾಗಿ ಈ ನೇಮಕಾತಿಯನ್ನ ಸುಪ್ರೀಂ ಕೋರ್ಟ್ ಅಸಿಂಧು ಮಾಡಿತ್ತು. ಕೆಪಿಎಸ್ಸಿ ಮಾಡಿದ ಹಲವು ಪರೀಕ್ಷೆಯಲ್ಲಿ ಅಕ್ರಮವಾಗಿ ಸರ್ಕಾರಕ್ಕೆ ಬಾರಿ ಮುಖಭಂಗವಾಗಿತ್ತು. ಹೀಗಾಗಿ ನವೆಂಬರ್ 15 ಕ್ಕೆ ಪರೀಕ್ಷೆ ಇರೋದರಿಂದ ಬಾರಿ ಬಂದೋಬಸ್ತ್ ಬಗ್ಗೆ ಸರ್ಕಾರ ಎಚ್ಚರಿಕೆ ವಹಿಸಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಸಿಎಂ ಹಲವು ಸೂಚನೆಯನ್ನು ನೀಡಿದ್ದಾರೆ. ಸಭೆಯಲ್ಲಿ ಪರೀಕ್ಷೆಯ ಸಿದ್ಧತೆಗಳನ್ನು ಪರಿಶೀಲಿಸಿ, ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶ ನೀಡದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ. ಹಾಗೇ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ, ಮೊಬೈಲ್ ಜಾಮರ್ ಅಳವಡಿಕೆ ಹಾಗೂ ಪೊಲೀಸ್ ಭದ್ರತೆ ಬಲಪಡಿಸಲು ಸೂಚನೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಪ್ರತಿ ಪರೀಕ್ಷಾ ಕೊಠಡಿಗೆ ಇಬ್ಬರು ಮೇಲ್ವಿಚಾರಕರನ್ನು ನೇಮಕ ಮಾಡಲಾಗುತ್ತಿದ್ದು, ಅವರಲ್ಲಿ ಒಬ್ಬರು ಕಡ್ಡಾಯವಾಗಿ ಸರ್ಕಾರಿ ಕಾಲೇಜಿನ ಸಿಬ್ಬಂದಿಯಾಗಿರಬೇಕು ಎಂದು ಸೂಚಿಸಿದ್ದಾರೆ

ಚುನಾವಣೆಯಲ್ಲಿ ಹೇಗೆ ಪೊಲೀಸರು ಹಾಗೂ ಅಧಿಕಾರಿಗಳು ಎಚ್ಚರಿಕೆ ವಹಿಸಿ ಭದ್ರತೆ ನೀಡುತ್ತಾರೋ‌ ಅದೇ ರೀತಿ ಪರೀಕ್ಷೆಗೆ ಭದ್ರತೆ ನೀಡಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ. ಪರೀಕ್ಷೆ ನಡೆದ ದಿನವೇ ಸ್ಕ್ಯಾನ್ ಮಾಡಿದ OMR ಪ್ರತಿಗಳನ್ನು ಕೆಪಿಎಸ್ಸಿ ವೆಬ್‌ಸೈಟ್‌ನಲ್ಲಿ ಸಾರ್ವಜನಿಕರ ವೀಕ್ಷಣೆಗೆ ಅಪ್‌ಲೋಡ್ ಮಾಡಲಾಗುವುದು. ನಕಲಿ ಅಭ್ಯರ್ಥಿಗಳ ಪ್ರವೇಶ ತಡೆಯಲು ವಿಶೇಷ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ.ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮಕ್ಕೆ ಅವಕಾಶ ನೀಡಿರುವುದು ಕಂಡುಬಂದರೆ ಅಂತಹ ಕಾಲೇಜುಗಳ ಪರವಾನಗಿಯನ್ನು ರದ್ದುಗೊಳಿಸಲಾಗುವುದು. ಅಕ್ರಮಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪರೀಕ್ಷೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳಿಗೆ ಅಭ್ಯರ್ಥಿಗಳು ಕಿವಿಗೊಡಬಾರದು. ಯಾವುದೇ ಮಾಹಿತಿಯನ್ನು ಅಧಿಕೃತ ಮೂಲಗಳಿಂದ ಖಚಿತಪಡಿಸಿಕೊಂಡು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ

ರಾಜ್ಯದ 319 ಹುದ್ದೆಗಳಲ್ಲಿ 202 ಗ್ರೂಪ್ ಬಿ ಹಾಗೂ 117 ಗ್ರೂಪ್ ಎ ಹುದ್ದೆಗಳಿವೆ. ಒಟ್ಟು 1,47,067 ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದ 15 ಜಿಲ್ಲೆಗಳಲ್ಲಿ 345 ಪರೀಕ್ಷಾ ಉಪಕೇಂದ್ರಗಳನ್ನು ಸ್ಥಾಪಿಸಲಾಗಿದೆ. ನವೆಂಬರ್ 15ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ಪತ್ರಿಕೆ-2 ಪರೀಕ್ಷೆ ನಡೆಯಲಿದೆ. ಪ್ರತಿ ಪತ್ರಿಕೆಯಲ್ಲಿ 100 ಪ್ರಶ್ನೆಗಳಿದ್ದು, 200 ಅಂಕಗಳನ್ನು ನಿಗದಿಪಡಿಸಲಾಗಿದೆ. ಈ ಭಾರಿ ಕಟ್ಟುನಿಟ್ಟಾಗಿ  ಪರೀಕ್ಷೆ ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಸ್ವಾಗತಾರ್ಹ.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

ZEENEWS TRENDING STORIES