• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮುಖ್ಯ ಚುನಾವಣಾ ಆಯುಕ್ತರ ಬಂಧನಕ್ಕೆ ಆಗ್ರಹಿಸಿ ಕೆಪಿಸಿಸಿ ಸಮರ: ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತರ ಬಂಧನಕ್ಕೆ ಆಗ್ರಹಿಸಿ ಕೆಪಿಸಿಸಿ ಸಮರ: ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಚುನಾವಣಾ ಆಯೋಗದ ಈ ಏಕಪಕ್ಷೀಯ ನಿರ್ಧಾರದಿಂದಾಗಿ ಬಿಹಾರದಲ್ಲಿ 63 ಲಕ್ಷ, ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಹಾಗೂ ಕರ್ನಾಟಕದಲ್ಲೇ ಬರೋಬ್ಬರಿ 1.07 ಕೋಟಿ ಅರ್ಹ ಮತದಾರರ ಹಕ್ಕನ್ನು ಕಸಿದುಕೊಳ್ಳಲಾಗಿದೆ.

Reported ByManjunath NaragundEdited ByManjunath Naragund
Published: Sep 25, 2026, 01:33 PM IST|Updated: Sep 25, 2026, 01:46 PM IST
joinshare
ಮುಖ್ಯ ಚುನಾವಣಾ ಆಯುಕ್ತರ ಬಂಧನಕ್ಕೆ ಆಗ್ರಹಿಸಿ ಕೆಪಿಸಿಸಿ ಸಮರ: ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ
Image Credit: B K Hariprasad

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಒಂದು ನಿರ್ದಿಷ್ಟ ರಾಜಕೀಯ ಪಕ್ಷ ಹಾಗೂ ಒಬ್ಬ ನಾಯಕನ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುತ್ತಿದ್ದು, ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ತಕ್ಷಣದ ರಾಜೀನಾಮೆ ಹಾಗೂ ಬಂಧನಕ್ಕೆ ಆಗ್ರಹಿಸಿ ನಾಳೆ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ (ಫ್ರೀಡಂ ಪಾರ್ಕ್) ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಚುನಾವಣಾ ಆಯೋಗದ ಇತ್ತೀಚಿನ ನಡೆಗಳನ್ನು ಸವಿಸ್ತಾರವಾಗಿ ಖಂಡಿಸಿದ ಬಿ.ಕೆ. ಹರಿಪ್ರಸಾದ್, “ಕಳೆದ 10 ತಿಂಗಳಲ್ಲಿ ಆಯೋಗದ ಇನ್ನುಳಿದ ಇಬ್ಬರು ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ ಅವರು ಬರೆದ 14 ಭಿನ್ನಮತೀಯ ಟಿಪ್ಪಣಿಗಳನ್ನು ತಳ್ಳಿಹಾಕಿ ಜ್ಞಾನೇಶ್ ಕುಮಾರ್ ಅವರು ಗೌಪ್ಯವಾಗಿ ಎಸ್ಐಆರ್ (SIR) ಪ್ರಕ್ರಿಯೆ ನಡೆಸಿದ್ದಾರೆ. ಇಬ್ಬರು ಆಯುಕ್ತರ ತೀವ್ರ ವಿರೋಧದ ನಡುವೆಯೂ ಫಾರಂ 6 ಅನ್ನು ಅಕ್ರಮವಾಗಿ ಮಾರ್ಪಾಡು ಮಾಡಲಾಗಿದೆ. ಇದು ದೇಶದ ನಾಗರಿಕರಿಗೆ ಎಸಗಿದ ಅತಿ ದೊಡ್ಡ ಅಘಾತ” ಎಂದು ಆಕ್ರೋಶ ಹೊರಹಾಕಿದರು.

ಚುನಾವಣಾ ಆಯೋಗದ ಈ ಏಕಪಕ್ಷೀಯ ನಿರ್ಧಾರದಿಂದಾಗಿ ಬಿಹಾರದಲ್ಲಿ 63 ಲಕ್ಷ, ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಹಾಗೂ ಕರ್ನಾಟಕದಲ್ಲೇ ಬರೋಬ್ಬರಿ 1.07 ಕೋಟಿ ಅರ್ಹ ಮತದಾರರ ಹಕ್ಕನ್ನು ಕಸಿದುಕೊಳ್ಳಲಾಗಿದೆ. ಈ ಕುರಿತು ಎಐಸಿಸಿ ನಾಯಕ ರಾಹುಲ್ ಗಾಂಧಿಯವರು 2025ರ ಫೆಬ್ರವರಿಯಲ್ಲೇ ಆಯೋಗಕ್ಕೆ ಪತ್ರ ಬರೆದು ಎಚ್ಚರಿಸಿದ್ದರೂ, ಆಯೋಗವು ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಗಾಳಿಗೆ ತೂರಿ ನಿರ್ಧಾರಗಳನ್ನು ಕೈಗೊಂಡಿದೆ. ಈ ಕಾರ್ಯಗಳಿಗೆ ಕುಮ್ಮಕ್ಕು ನೀಡುತ್ತಿರುವ ಪ್ರಧಾನಮಂತ್ರಿ ಹಾಗೂ ಗೃಹಸಚಿವರ ನಡೆ ದೇಶದ್ರೋಹಕ್ಕೆ ಸಮನಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ಇತ್ತೀಚೆಗೆ ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ಅವರು 2,500 ಮತಗಳನ್ನು ತೆಗೆದುಹಾಕುವಂತೆ ಬರೆದಿದ್ದ ಪತ್ರವನ್ನು ಬಿಡುಗಡೆ ಮಾಡಿದ್ದನ್ನು ಸ್ಮರಿಸಿದ ಹರಿಪ್ರಸಾದ್, “ಇಂದು ನನ್ನ ಬಳಿ 65,000 ಮತದಾರರ ಹೆಸರು ಡಿಲೀಟ್ ಮಾಡಲು ಸಲ್ಲಿಕೆಯಾಗಿರುವ ಅರ್ಜಿಗಳಿವೆ. ಈ ಯಾವುದೇ ಅರ್ಜಿಗಳಲ್ಲೂ ಅರ್ಜಿದಾರರ ಸಹಿ ಇಲ್ಲ. ಇದನ್ನು ಆಳವಾಗಿ ಪರಿಶೀಲಿಸಿದಾಗ ಹೆಚ್ಚಾಗಿ ಅಲ್ಪಸಂಖ್ಯಾತರು, ದಲಿತರು ಹಾಗೂ ಬಡವರ ಮತಗಳನ್ನೇ ಗುರಿಯಾಗಿಸಿಕೊಂಡು ಮತಪಟ್ಟಿಯಿಂದ ತೆಗೆದುಹಾಕಲಾಗಿರುವುದು ಸ್ಪಷ್ಟವಾಗಿದೆ. ಬಬಲೇಶ್ವರ, ಹಬ್ಬಳ್ಳಿ-ಧಾರವಾಡ ಕ್ಷೇತ್ರಗಳಲ್ಲಿ ಇಂತಹ ಅಕ್ರಮ ಪ್ರಯತ್ನಗಳು ನಿರಂತರವಾಗಿ ನಡೆದಿವೆ” ಎಂದು ಆತಂಕ ವ್ಯಕ್ತಪಡಿಸಿದರು.

ನಾಳೆ ರಾಜ್ಯವ್ಯಾಪಿ ಹೋರಾಟಕ್ಕೆ ಕರೆ:

ಆಯೋಗದ ಈ ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಿ ನಾಳೆ (ಶನಿವಾರ) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮೊದಲ ಹಂತದ ಪ್ರತಿಭಟನೆ ನಡೆಯಲಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇರುವ ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ನಾಗರಿಕ ಸಮಾಜದ ಸಂಘಟನೆಗಳು ಈ ಹೋರಾಟದಲ್ಲಿ ಭಾಗವಹಿಸಬೇಕೆಂದು ಅವರು ಆಹ್ವಾನ ನೀಡಿದರು. ಎರಡನೇ ಹಂತದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಮತ್ತು ಬಂಧನಕ್ಕೆ ಆಗ್ರಹಿಸಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದರು.

“ನಾವು ಚುನಾವಣಾ ಆಯೋಗವನ್ನು ಪ್ರಶ್ನಿಸಿದರೆ ಉತ್ತರ ನೀಡಬೇಕಾದದ್ದು ಆಯೋಗವೇ ಹೊರತು ಕೇಂದ್ರ ಬಿಜೆಪಿ ನಾಯಕರಲ್ಲ. ಆಯೋಗದ ಬೆನ್ನಿಗೆ ನಿಂತು ಸಮರ್ಥಿಸಿಕೊಳ್ಳುತ್ತಿರುವ ಬಿಜೆಪಿಯವರ ನಡೆ ಅನುಮಾನಾಸ್ಪದವಾಗಿದೆ” ಎಂದು ಬಿ.ಕೆ. ಹರಿಪ್ರಸಾದ್ ತಮ್ಮ ಪತ್ರಿಕಾಗೋಷ್ಠಿಯಲ್ಲಿ ನೇರವಾಗಿ ಚಾಟಿ ಬೀಸಿದರು.

Add Zee News as a Preferred Source
TAGS:
Kannada News