• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /KPSC ಹಗರಣದ ಕರಾಳ ಮುಖ ಬಯಲು! ಪ್ರಶ್ನೆಪತ್ರಿಕೆ ಸೋರಿಕೆ, ಕೋಟಿ ಕೋಟಿ ಹಣದ ಆಟ ಬಿಚ್ಚಿಟ್ಟ ED!

KPSC ಹಗರಣದ ಕರಾಳ ಮುಖ ಬಯಲು! ಪ್ರಶ್ನೆಪತ್ರಿಕೆ ಸೋರಿಕೆ, ಕೋಟಿ ಕೋಟಿ ಹಣದ ಆಟ ಬಿಚ್ಚಿಟ್ಟ ED!

ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ವಿಶೇಷ ನ್ಯಾಯಾಲಯಕ್ಕೆ ಪ್ರಾಸಿಕ್ಯೂಷನ್ ಕಂಪ್ಲೇಂಟ್ ಸಲ್ಲಿಸಿದೆ. ಪಶು ವೈದ್ಯಾಧಿಕಾರಿ ಮತ್ತು ಕೆಎಎಸ್ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, ಉತ್ತರಗಳ ಕೀ ಹಂಚಿಕೆ ಹಾಗೂ ಅಭ್ಯರ್ಥಿಗಳಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿದ ಆರೋಪಗಳನ್ನ ತನಿಖೆಯಲ್ಲಿ ಉಲ್ಲೇಖಿಸಲಾಗಿದೆ. ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿರುವ ಇಡಿ, ₹1.22 ಕೋಟಿ ಮೌಲ್ಯದ ಆಸ್ತಿಗಳನ್ನ ತಾತ್ಕಾಲಿಕವಾಗಿ ಜಪ್ತಿ ಮಾಡಿದ್ದು, ಕೆಪಿಎಸ್‌ಸಿ ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ಪಾತ್ರದ ಬಗ್ಗೆ ತನಿಖೆ ಮುಂದುವರಿಸಿದೆ.

Written ByPuttaraj K Alur
Published: Nov 16, 2026, 14:31 IST|Updated: Nov 16, 2026, 14:46 IST
joinshare
KPSC ಹಗರಣದ ಕರಾಳ ಮುಖ ಬಯಲು! ಪ್ರಶ್ನೆಪತ್ರಿಕೆ ಸೋರಿಕೆ, ಕೋಟಿ ಕೋಟಿ ಹಣದ ಆಟ ಬಿಚ್ಚಿಟ್ಟ ED!
Image Credit: KPSC Recruitment Scam

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

KPSC Recruitment Scam: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮಹತ್ವದ ಮಾಹಿತಿಯನ್ನ ಪ್ರಕಟಿಸಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA), 2002ರ ಸೆಕ್ಷನ್ 44 ಮತ್ತು 45ರ ಅಡಿಯಲ್ಲಿ ವಿಶೇಷ ನ್ಯಾಯಾಲಯದ ಮುಂದೆ ಪ್ರಾಸಿಕ್ಯೂಷನ್ ಕಂಪ್ಲೇಂಟ್ ಸಲ್ಲಿಸಿರುವುದಾಗಿ ಇಡಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಪ್ರಕರಣದಲ್ಲಿ ಶಿವಶಂಕರಪ್ಪ ಸಾಹುಕಾರ್, ಬಿ.ವಿ.ಗೀತಾ ಶಿವಮೂರ್ತಿ, ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮತ್ತು ಬಸವರಾಜ್ ಕಣ್ಣಾಲೆ ಅವರನ್ನ ಆರೋಪಿಗಳೆಂದು ಉಲ್ಲೇಖಿಸಲಾಗಿದೆ.

ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆ ಹಾಗೂ ಕೆಎಎಸ್ ಪರೀಕ್ಷೆಗೆ ಸಂಬಂಧಿಸಿದ ಅಕ್ರಮಗಳ ಕುರಿತು ಇಡಿ ನಡೆಸಿದ ತನಿಖೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, ಅಭ್ಯರ್ಥಿಗಳಿಗೆ ಉತ್ತರಗಳ ಕೀ ಒದಗಿಸುವುದು, ಹಣದ ವಹಿವಾಟು ಮತ್ತು ಅಕ್ರಮ ಹಣದಿಂದ ಆಸ್ತಿ ಖರೀದಿಸಿರುವ ಆರೋಪಗಳು ಬೆಳಕಿಗೆ ಬಂದಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಶು ವೈದ್ಯಾಧಿಕಾರಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು ದಾಖಲಾಗಿದ್ದವು. 2026ರ ಜನವರಿ 9ರಂದು ಸುಮಾರು 400 ಹುದ್ದೆಗಳಿಗಾಗಿ ಪಶು ವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ನಕಲಿ ಪ್ರಮಾಣಪತ್ರ ಸಲ್ಲಿಕೆ ಮತ್ತು ಪರೀಕ್ಷಾ ಅಕ್ರಮಗಳು ನಡೆದಿರುವ ಆರೋಪ ಕೇಳಿಬಂದಿತ್ತು. ಇಡಿ ತನಿಖೆಯ ಪ್ರಕಾರ, ಅಭ್ಯರ್ಥಿಗಳಿಗೆ ಸರಿಯಾದ ಉತ್ತರಗಳೊಂದಿಗೆ ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿತ್ತು. ಅಲ್ಲದೆ, ನಿರ್ದಿಷ್ಟ ಅಭ್ಯರ್ಥಿಗಳಿಗೆ ಸರಿಯಾದ ಉತ್ತರಗಳ ಕೀ ಒದಗಿಸಲಾಗಿತ್ತು. 1:3 ಅರ್ಹತಾ ಪಟ್ಟಿಯನ್ನೂ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.

ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಪ್ರಶ್ನೆಪತ್ರಿಕೆಗಳನ್ನ ಸರಿಯಾದ ಉತ್ತರಗಳೊಂದಿಗೆ ನಕಲು ಮಾಡಿದ್ದ ಎನ್ನಲಾಗಿದೆ. ಬಳಿಕ ಪೆನ್‌ಡ್ರೈವ್ ಮೂಲಕ ಈ ಮಾಹಿತಿಯನ್ನ ಬಸವರಾಜ್ ಕಣ್ಣಾಲೆಗೆ ನೀಡಿದ್ದ ಎಂದು ಇಡಿ ಆರೋಪಿಸಿದೆ. ಕಣ್ಣಾಲೆ ಬೆಂಗಳೂರು ಹೊರವಲಯದ ವಿಲ್ಲಾಗಳಲ್ಲಿ ಅಭ್ಯರ್ಥಿಗಳಿಗೆ ಪರೀಕ್ಷಾ ತರಬೇತಿ ನೀಡಿದ್ದಲ್ಲದೆ, ಪರೀಕ್ಷೆಗೆ ಒಂದು ದಿನ ಮೊದಲು ಪ್ರಶ್ನೆಪತ್ರಿಕೆಗಳ ಮುದ್ರಿತ ಪ್ರತಿಗಳನ್ನ ಅಭ್ಯರ್ಥಿಗಳಿಗೆ ತಲುಪಿಸಿದ್ದ ಎನ್ನಲಾಗಿದೆ.

ಈ ಅಕ್ರಮದಲ್ಲಿ 10 ಅಭ್ಯರ್ಥಿಗಳಿಂದ ಒಟ್ಟು ₹3.20 ಕೋಟಿ ಬೇಡಿಕೆ ಇಡಲಾಗಿತ್ತು. ಅದರಲ್ಲಿ ₹1.52 ಕೋಟಿ ಸಂಗ್ರಹಿಸಲಾಗಿತ್ತು. ಈ ಹಣದಲ್ಲಿ ₹92 ಲಕ್ಷವನ್ನ ಬ್ಯಾಂಕಿಂಗ್ ಮಾರ್ಗದ ಮೂಲಕ ಹಾಗೂ ₹60 ಲಕ್ಷವನ್ನ ನಗದು ರೂಪದಲ್ಲಿ ಪಡೆದಿದ್ದರು ಎಂದು ಇಡಿ ತಿಳಿಸಿದೆ. ಉಳಿದ ಹಣಕ್ಕೆ ಬದಲಾಗಿ ಖಾಲಿ ಸಹಿ ಮಾಡಿದ ಚೆಕ್‌ಗಳು ಮತ್ತು ಪ್ರಾಮಿಸರಿ ನೋಟುಗಳನ್ನ ಪಡೆದಿದ್ದರು ಎನ್ನಲಾಗಿದೆ. ನಂತರ ಪೆನ್‌ಡ್ರೈವ್ ನಾಶಪಡಿಸಿ, ಮುದ್ರಿಸಿದ್ದ ಪ್ರಶ್ನೆಪತ್ರಿಕೆಗಳನ್ನ ಸುಟ್ಟು ಹಾಕಲಾಗಿತ್ತು ಎಂಬ ಆರೋಪವೂ ಇದೆ.

ಕೆಎಎಸ್ ಪರೀಕ್ಷೆಯಲ್ಲೂ ಅಕ್ರಮದ ಆರೋಪ

ಕೆಎಎಸ್ ಪರೀಕ್ಷೆಯಲ್ಲಿಯೂ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಉತ್ತರಗಳ ಕೀ ಹಂಚಿಕೆ ಮಾಡಲಾಗಿತ್ತು ಎಂದು ಇಡಿ ಆರೋಪಿಸಿದೆ. ಶಿವಶಂಕರಪ್ಪ ಸಾಹುಕಾರ್ ಸೂಚನೆಯ ಮೇರೆಗೆ ಗಂಗ್ವಾರ್ ಆರು ಅಭ್ಯರ್ಥಿಗಳ ಸರಿಯಾದ ಉತ್ತರಗಳ ಕೀಗಳನ್ನ ಬಿ.ವಿ.ಗೀತಾ ಅವರಿಗೆ ನೀಡಿದ್ದರು ಎನ್ನಲಾಗಿದೆ. ಇದಕ್ಕೆ ಪ್ರತಿಯಾಗಿ ಕೆಎಎಸ್ ಸಂದರ್ಶನದಲ್ಲಿ ಅಭ್ಯರ್ಥಿಗಳಿಗೆ ಹೆಚ್ಚಿನ ಅಂಕ ಕೊಡಿಸುವ ಭರವಸೆ ನೀಡಲಾಗಿತ್ತು ಎಂಬ ಆರೋಪವಿದೆ.

ಸಾಹುಕಾರ್ ಒಬ್ಬ ಅಭ್ಯರ್ಥಿಯಿಂದ ₹20 ಲಕ್ಷಕ್ಕೆ ಮಾತುಕತೆ ನಡೆಸಿ ₹10 ಲಕ್ಷ ನಗದು ಪಡೆದಿದ್ದರು ಎನ್ನಲಾಗಿದೆ. ಮತ್ತೊಂದೆಡೆ ಗೀತಾ ಮತ್ತೊಬ್ಬ ಅಭ್ಯರ್ಥಿಯಿಂದ ₹40 ಲಕ್ಷ ಬೇಡಿಕೆ ಇಟ್ಟಿದ್ದರು ಎಂದು ಇಡಿ ತಿಳಿಸಿದೆ. 2026ರ ಜನವರಿ 8ರಂದು ತಮ್ಮ ಕಾರಿನಲ್ಲಿ ₹20 ಲಕ್ಷ ನಗದು ಪಡೆದಿದ್ದರೆಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಅಕ್ರಮ ಹಣದಿಂದ ಚಿನ್ನ, ವಿದೇಶ ಪ್ರವಾಸ ಮತ್ತು ಆಸ್ತಿ ಖರೀದಿ

ಪಶು ವೈದ್ಯಾಧಿಕಾರಿ ಪರೀಕ್ಷೆಯ ಅಕ್ರಮದಲ್ಲಿ ಬಸವರಾಜ್ ಕಣ್ಣಾಲೆಯಿಂದ ಗಂಗ್ವಾರ್ ₹1.52 ಕೋಟಿ ನಗದು ಪಡೆದಿದ್ದರು ಎಂದು ಇಡಿ ಆರೋಪಿಸಿದೆ. ಈ ಹಣದಲ್ಲಿ ₹52.3 ಲಕ್ಷ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣಗಳನ್ನ ಖರೀದಿಸಲಾಗಿತ್ತು. ₹13.31 ಲಕ್ಷವನ್ನ ವಿದೇಶ ಪ್ರವಾಸಕ್ಕೆ ಖರ್ಚು ಮಾಡಲಾಗಿತ್ತು. ಕಣ್ಣಾಲೆ ತಮ್ಮ ಸಂಬಂಧಿಕರ ಹೆಸರಿನಲ್ಲಿ ಸ್ಥಿರಾಸ್ತಿಗಳನ್ನ ಖರೀದಿಸಿದ್ದರು ಎಂಬ ಆರೋಪವೂ ಇದೆ.

ಶಿವಶಂಕರಪ್ಪ ಸಾಹುಕಾರ್ 2025ರ ಆಗಸ್ಟ್‌ನಿಂದ ಡಿಸೆಂಬರ್‌ವರೆಗೆ ₹3.99 ಕೋಟಿ ನಗದು ಹೊಂದಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ಹಣವನ್ನ ರಿಯಲ್ ಎಸ್ಟೇಟ್ ಡೆವಲಪರ್ ಬಳಿ ಇರಿಸಲಾಗಿತ್ತು ಮತ್ತು ಬಿ.ವಿ.ಗೀತಾ ಹಾಗೂ ಅವರ ಮಗಳಿಗೆ ವರ್ಗಾಯಿಸಲಾಗಿತ್ತು ಎನ್ನಲಾಗಿದೆ. ಶಹಾಪುರದ ಮಾದ್ರಿಯಲ್ಲಿರುವ ತಮ್ಮ ಜಮೀನಿನಲ್ಲಿ ಶಾಲೆ, ಕನ್ವೆನ್ಷನ್ ಹಾಲ್ ಮತ್ತು ರೆಸ್ಟೋರೆಂಟ್ ನಿರ್ಮಿಸಲು ಅಕ್ರಮ ಹಣ ಬಳಸುವ ಯೋಜನೆಯೂ ಇತ್ತು ಎಂದು ಇಡಿ ಆರೋಪಿಸಿದೆ.

₹1.22 ಕೋಟಿ ಮೌಲ್ಯದ ಆಸ್ತಿ ತಾತ್ಕಾಲಿಕ ಜಪ್ತಿ

ಬಾಲ್ಕಿ ಮತ್ತು ಬೀದರ್‌ನ ಲಕ್ಷ್ಮೀ ಸೌಹಾರ್ದ ಸಹಕಾರಿ ಬ್ಯಾಂಕ್ ಸೇರಿದಂತೆ ಇತರ ಬ್ಯಾಂಕ್ ಖಾತೆಗಳ ಮೂಲಕ ಹಣ ಸಂಗ್ರಹಿಸಲಾಗಿತ್ತು. ಬಸವರಾಜ್ ಕಣ್ಣಾಲೆಯ ಅಕೌಂಟೆಂಟ್ ಹೆಸರಿನಲ್ಲಿ 'ಭಗವತಿ ಎಂಟರ್‌ಪ್ರೈಸಸ್' ಖಾತೆ ತೆರೆದು ಹಣ ಇರಿಸಲಾಗಿತ್ತು ಎಂಬ ವಿವರಗಳನ್ನೂ ಇಡಿ ಬಹಿರಂಗಪಡಿಸಿದೆ. ಇಡಿ ಪ್ರಕಾರ, ಶಿವಶಂಕರಪ್ಪ ಸಾಹುಕಾರ್‌ಗೆ ಸಂಬಂಧಿಸಿದ ಅಕ್ರಮ ಹಣದ ಮೊತ್ತ ₹4.17 ಕೋಟಿ, ಬಿ.ವಿ.ಗೀತಾ ಶಿವಮೂರ್ತಿಗೆ ₹1.48 ಕೋಟಿ, ಜ್ಞಾನೇಂದ್ರ ಕುಮಾರ್ ಗಂಗ್ವಾರ್‌ಗೆ ₹1.52 ಕೋಟಿ ಹಾಗೂ ಬಸವರಾಜ್ ಕಣ್ಣಾಲೆಗೆ ₹1.52 ಕೋಟಿ ಎಂದು ಉಲ್ಲೇಖಿಸಲಾಗಿದೆ.

ಈ ಪ್ರಕರಣದಲ್ಲಿ PMLA ಸೆಕ್ಷನ್ 17ರ ಅಡಿಯಲ್ಲಿ 37 ಸ್ಥಳಗಳಲ್ಲಿ ಶೋಧ ನಡೆಸಲಾಗಿತ್ತು. ಬಸವರಾಜ್ ಕಣ್ಣಾಲೆಯನ್ನ ಸೆಪ್ಟೆಂಬರ್ 17ರಂದು, ಗಂಗ್ವಾರ್ ಅವರನ್ನ ಸೆಪ್ಟೆಂಬರ್ 18ರಂದು ಹಾಗೂ ಸಾಹುಕಾರ್ ಮತ್ತು ಗೀತಾ ಅವರನ್ನ ಅಕ್ಟೋಬರ್ 6ರಂದು ಬಂಧಿಸಲಾಗಿತ್ತು. ಸದ್ಯ ಮೂವರು ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದಲ್ಲದೆ ಕಳೆದ ನವೆಂಬರ್ 13ರಂದು ಆರೋಪಿಗಳಿಗೆ ಸಂಬಂಧಿಸಿದ ₹1.22 ಕೋಟಿ ಮೌಲ್ಯದ ಆಸ್ತಿಗಳನ್ನ ಇಡಿ ತಾತ್ಕಾಲಿಕವಾಗಿ ಜಪ್ತಿ ಮಾಡಿದೆ. ಪ್ರಕರಣದಲ್ಲಿ ಕೆಪಿಎಸ್‌ಸಿ ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿದಿದೆ. ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮ ಹಾಗೂ ಹಣದ ವಹಿವಾಟಿನ ಕುರಿತು ಹೆಚ್ಚಿನ ವಿವರಗಳನ್ನ ಪತ್ತೆಹಚ್ಚಲು ಇಡಿ ತನಿಖೆ ಮುಂದುವರಿಸಿದೆ.

Add Zee News as a Preferred Source
TAGS:
Karnataka Politics
Kannada News