• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ದೀಪಾವಳಿ ಹಬ್ಬಕ್ಕೆ KSRTCಯಿಂದ 2,600 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ

ದೀಪಾವಳಿ ಹಬ್ಬಕ್ಕೆ KSRTCಯಿಂದ 2,600 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ

ದೀಪಗಳ ಹಬ್ಬ ದೀಪಾವಳಿಗೆ ಊರಿಗೆ ಹೊರಡುವವರಿಗೆ ಅನುಕೂಲವಾಗಲೆಂದು ಕೆಎಸ್‌ಆರ್‌ಟಿಸಿ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಕಲ್ಪಿಸಿದೆ.

Written ByYashaswini V
Published: Nov 06, 2026, 08:42 IST|Updated: Nov 06, 2026, 08:43 IST
joinshare
ದೀಪಾವಳಿ ಹಬ್ಬಕ್ಕೆ KSRTCಯಿಂದ 2,600 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ

About the Author

Yashaswini V

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ದೀಪಾವಳಿ ಹಬ್ಬಕ್ಕಾಗಿ ತಮ್ಮ ತಮ್ಮ ಊರುಗಳಿಗೆ ಹೋಗಲು ಯೋಜಿಸುತ್ತಿರುವವರಿಗೆ ಕರ್ನಾಟಕ ರಾಜ್ಯ ಸಾರಿಗೆ ನಿಗಮ ಸಂಸ್ಥೆ (KSRTC) ಗುಡ್‌ ನ್ಯೂಸ್‌ ನೀಡಿದ್ದು, 2,600 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆಯನ್ನು ಕೈಗೊಂಡಿದೆ. ನವೆಂಬರ್ 7 ಮತ್ತು 8ರಂದು ವಾರಾಂತ್ಯದ ರಜೆ, ನವೆಂಬರ್ 8ರಂದು ನರಕ ಚತುರ್ದಶಿ ಹಾಗೂ ನವೆಂಬರ್ 10ರಂದು ಬಲಿಪಾಡ್ಯಮಿ ಹಿನ್ನೆಲೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ರಾಜ್ಯ ಸಾರಿಗೆ ನಿಗಮ, ದೀಪಾವಳಿ ಹಬ್ಬ ಮತ್ತು ವಾರಾಂತ್ಯದ ಪ್ರಯಾಣಿಕರ ದಟ್ಟಣೆ ನಿರ್ವಹಣೆಗೆ ಕೆಎಸ್‌ಆರ್‌ಟಿಸಿಯಿಂದ 2,600 ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ನಡೆಸಲು ಯೋಜಿಸಲಾಗಿದೆ. ಈ ಹಿನ್ನಲೆಯಲ್ಲಿ ನವೆಂಬರ್ 6ರಿಂದ 8ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ಹಾಗೂ ಅಂತರರಾಜ್ಯ ಮಾರ್ಗಗಳಿಗೆ ವಿಶೇಷ ಸಾರಿಗೆ ಕಲ್ಪಿಸಲಾಗಿದೆ. ಇದೇ ವೇಳೆ, ಹಬ್ಬದ ಬಳಿಕ ಬೆಂಗಳೂರಿಗೆ ಮರಳುವವರಿಗೆ ಅನುಕೂಲವಾಗಲೆಂದು ನವೆಂಬರ್ 10 ಮತ್ತು 11ರಂದು ರಾಜ್ಯಾದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್‌ಗಳ ವ್ಯವಸ್ಥೆಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಯಾವ ಬಸ್ ನಿಲ್ದಾಣದಿಂದ ಯಾವ ಮಾರ್ಗಕ್ಕೆ ಬಸ್ ವ್ಯವಸ್ಥೆ?
* ಕೆಂಪೇಗೌಡ ಬಸ್ ನಿಲ್ದಾಣದಿಂದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಹಾಗೂ ಅಂತರರಾಜ್ಯ ಮಾರ್ಗಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.
* ಉಡುಪಿ, ಕುಂದಾಪುರ, ಪುತ್ತೂರು, ಮಂಗಳೂರು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ದಾವಣಗೆರೆ, ಹಾಸನ ಮಾರ್ಗಗಳಿಗೆ ಬಸ್‌ಗಳು
* ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಸಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ ಮತ್ತು ಬೀದರ್‌ಗೆ ವಿಶೇಷ ಸಾರಿಗೆ ವ್ಯವಸ್ಥೆ ಕೈಗೊಳ್ಳಲಾಗಿದೆ.
* ತಿರುಪತಿ, ವಿಜಯವಾಡ ಮತ್ತು ಹೈದರಾಬಾದ್‌ಗೂ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
* ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಮತ್ತು ಮಡಿಕೇರಿ ಮಾರ್ಗಗಳಿಗೆ ಬಸ್‌ಗಳು ಸಂಚರಿಸಲಿವೆ.
* ತಮಿಳುನಾಡು ಮತ್ತು ಕೇರಳದ ಪ್ರಮುಖ ನಗರಗಳಿಗೆ ತೆರಳುವ ಪ್ರತಿಷ್ಠಿತ ಬಸ್‌ಗಳು ಶಾಂತಿನಗರ BMTC ಬಸ್ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿವೆ.
* ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ ಮತ್ತು ಕೋಯಿಕೋಡ್‌ಗೆ ವಿಶೇಷ ಸಾರಿಗೆ ಕಲ್ಪಿಸಲಾಗಿದೆ ಎನ್ನಲಾಗಿದೆ.

ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಕೇಂದ್ರಗಳು:
* ಕೆಂಪೇಗೌಡ, ಮೈಸೂರು ರಸ್ತೆ ಮತ್ತು ಶಾಂತಿನಗರ ಟಿಟಿಎಂಸಿ ಬಸ್ ನಿಲ್ದಾಣಗಳಿಂದ ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.
* ಮುಂಗಡ ಕಾಯ್ದಿರಿಸಿದ ಬಸ್‌ಗಳು ವಿಜಯನಗರ, ಯಶವಂತಪುರ, ಜಯನಗರ ಟಿಟಿಎಂಸಿ ಹಾಗೂ ಮಲ್ಲೇಶ್ವರಂ 18ನೇ ಕ್ರಾಸ್‌ನಿಂದಲೂ ಹೊರಡಲಿವೆ.
* ಬಸವೇಶ್ವರ ನಗರ, ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ, ಟಿನ್ ಫ್ಯಾಕ್ಟರಿ ಸೇರಿದಂತೆ ವಿವಿಧ ನಿಲ್ದಾಣಗಳಿಂದಲೂ ಬಸ್‌ಗಳ ಕಾರ್ಯಾಚರಣೆ ನಡೆಸಲಿವೆ.
* ನಿಗಮದ ವ್ಯಾಪ್ತಿಯ ಎಲ್ಲ ತಾಲೂಕು ಮತ್ತು ಜಿಲ್ಲಾ ಬಸ್ ನಿಲ್ದಾಣಗಳಿಂದ ಪ್ರಯಾಣಿಕರ ದಟ್ಟಣೆ ಆಧರಿಸಿ ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ ಎಂದು ಹೇಳಲಾಗಿದೆ.

ಪ್ರಯಾಣಿಕರಿಗೆ ರಿಯಾಯಿತಿ ಮತ್ತು ಮುಂಗಡ ಬುಕ್ಕಿಂಗ್ ವ್ಯವಸ್ಥೆ:
* ಹೆಚ್ಚುವರಿ ಬಸ್‌ಗಳಿಗೂ ಮುಂಗಡ ಆಸನ ಕಾಯ್ದಿರಿಸುವ ವ್ಯವಸ್ಥೆ ಮಾಡಲಾಗಿದ್ದು ಕೆಎಸ್‌ಆರ್‌ಟಿಸಿಯ ವೆಬ್‌ಸೈಟ್‌ನಲ್ಲಿ ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಿಗೆ ಟಿಕೆಟ್ ಕಾಯ್ದಿರಿಸಿದರೆ ಶೇ.5ರಷ್ಟು ರಿಯಾಯಿತಿ ನೀಡಲಾಗುತ್ತಿದೆ. 
* ಇದಲ್ಲದೆ ಹೋಗುವ ಮತ್ತು ಹಿಂದಿರುಗುವ ಪ್ರಯಾಣದ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದರೆ ಹಿಂದಿರುಗುವ ಪ್ರಯಾಣದ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುತ್ತಿದೆ.

ಕೆಎಸ್‌ಆರ್‌ಟಿಸಿ ಟಿಕೆಟ್‌ ಬುಕಿಂಗ್‌ ಮಾಡುವುದು ಹೇಗೆ?
ಕರ್ನಾಟಕ ಸೇರಿದಂತೆ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಮತ್ತು ಪುದುಚೇರಿಯ ಪ್ರಮುಖ ನಗರಗಳಲ್ಲಿರುವ ಬುಕ್ಕಿಂಗ್ ಕೌಂಟರ್‌ಗಳಲ್ಲೂ ಟಿಕೆಟ್ ಕಾಯ್ದಿರಿಸಬಹುದು. ಇದಲ್ಲದೆ, KSRTC ಅಧಿಕೃತ ವೆಬ್‌ಸೈಟ್: www.ksrtc.karnataka.gov.in ಗೆ ಭೇಟಿ ನೀಡುವ ಮೂಲಕ ಇ-ಟಿಕೆಟ್ ಬುಕ್ಕಿಂಗ್‌ ಮಾಡಬಹುದಾಗಿದೆ.
 

Add Zee News as a Preferred Source
TAGS:
Diwali
Kannada News
Travel