SOCIAL MEDIA

Newsletter

PARTNER SITES
Select Language Select State

ಲಕ್ಷ್ಮೇಶ್ವರದಲ್ಲಿ ಭೀಕರ ಅಗ್ನಿ ಅವಘಡ: ಶಾರ್ಟ್ ಸರ್ಕ್ಯೂಟ್‌ನಿಂದ ಶವ ಸಾಗಿಸುವ ವಾಹನ ಸುಟ್ಟು ಕರಕಲು, ತಪ್ಪಿದ ಭಾರಿ ಅನಾಹುತ!

ಲಕ್ಷ್ಮೇಶ್ವರ ಪುರಸಭೆಗೆ ಸೇರಿದ ಶವ ಸಾಗಿಸುವ ವಾಹನದಲ್ಲಿ ಸಮಸ್ಯೆಯಿದ್ದಿದ್ದರಿಂದ ಅದಕ್ಕೆ ಹೊಸ ಬ್ಯಾಟರಿ ಜೋಡಣೆ ಮಾಡುವ ಕೆಲಸ ನಡೆಯುತ್ತಿತ್ತು. ಮೃತರೊಬ್ಬರ ಶವವನ್ನು ಸಾಗಿಸಲು ವಾಹನವನ್ನು ಸಿದ್ಧಪಡಿಸುತ್ತಿದ್ದಾಗ, ಅನಿರೀಕ್ಷಿತವಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಒಮ್ಮೆಲೇ ಬೆಂಕಿ ಹೊತ್ತಿಕೊಂಡಿದೆ.

Reported By Manjunath Naragund Written By Manjunath Naragund
Published: Sep 26, 2026, 07:41 PM IST | Updated: Sep 26, 2026, 07:47 PM IST
Image Credit: Gadag
Join

ಗದಗ: ಶವ ಸಾಗಿಸಲು ವಾಹನವನ್ನು ಸಿದ್ಧಪಡಿಸುತ್ತಿದ್ದ ವೇಳೆಯಲ್ಲೇ ದಿಢೀರ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪುರಸಭೆಯ ಶವ ಸಾಗಿಸುವ ವಾಹನವೊಂದು ಬೆಂಕಿಗಾಹುತಿಯಾಗಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ನಡೆದಿದೆ. ಅದೃಷ್ಟವಶಾತ್ ಸ್ಥಳದಲ್ಲಿದ್ದ ಪೌರಕಾರ್ಮಿಕರು ಹಾಗೂ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಭಾರಿ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.

ಲಕ್ಷ್ಮೇಶ್ವರ ಪುರಸಭೆಗೆ ಸೇರಿದ ಶವ ಸಾಗಿಸುವ ವಾಹನದಲ್ಲಿ ಸಮಸ್ಯೆಯಿದ್ದಿದ್ದರಿಂದ ಅದಕ್ಕೆ ಹೊಸ ಬ್ಯಾಟರಿ ಜೋಡಣೆ ಮಾಡುವ ಕೆಲಸ ನಡೆಯುತ್ತಿತ್ತು. ಮೃತರೊಬ್ಬರ ಶವವನ್ನು ಸಾಗಿಸಲು ವಾಹನವನ್ನು ಸಿದ್ಧಪಡಿಸುತ್ತಿದ್ದಾಗ, ಅನಿರೀಕ್ಷಿತವಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಒಮ್ಮೆಲೇ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿಯ ಜ್ವಾಲೆ ವಾಹನದ ಎಲ್ಲಾ ಭಾಗಗಳಿಗೂ ವ್ಯಾಪಿಸಿದ್ದು, ಇಡೀ ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ವಾಹನಕ್ಕೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಪುರಸಭೆ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ತಕ್ಷಣವೇ ಸುತ್ತಮುತ್ತಲಿನವರನ್ನು ದೂರ ಕಳುಹಿಸಿ, ಬೆಂಕಿ ಪಕ್ಕದ ಕಟ್ಟಡಗಳು ಅಥವಾ ಇತರ ವಾಹನಗಳಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಿದರು. ಇದರಿಂದಾಗಿ ಜಾಗದಲ್ಲಿದ್ದ ಇತರ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗುವುದು ತಪ್ಪಿದೆ.

ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಕಾರ್ಯಾಚರಣೆ ನಡೆಸಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಘಟನೆಯಲ್ಲಿ ವಾಹನ ಸಂಪೂರ್ಣವಾಗಿ ಹಾನಿಗೊಂಡಿದೆಯಾದರೂ, ಯಾವುದೇ ರೀತಿಯ ಪ್ರಾಣಹಾನಿ ಅಥವಾ ಗಾಯಗಳು ಸಂಭವಿಸದಿರುವುದು ನಿಟ್ಟುಸಿರು ಬಿಡುವಂತೆ ಮಾಡಿದೆ. ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

Add Zee News as a Preferred Source
TAGS:

About the Author

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

ZEENEWS TRENDING STORIES