• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ನವೆಂಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್ ಘೋಷಣೆ

ನವೆಂಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್ ಘೋಷಣೆ

ನವೆಂಬರ್ 1ರಂದು ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಕರ್ನಾಟಕದಿಂದ ಸಹಸ್ರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

Reported ByManjunath NaragundEdited ByManjunath Naragund
Published: Oct 26, 2026, 04:28 PM IST|Updated: Oct 26, 2026, 04:51 PM IST
joinshare
ನವೆಂಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್ ಘೋಷಣೆ
Image Credit: B K Hariprasad

About the Author

Manjunath Naragund

Manjunath Naragund

ಮಂಜುನಾಥ ನರಗುಂದ (Manjunath Naragund) 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.
Read More

Trending

  • News
  • Photos
  • Videos
ಕಬ್ಬು ಬೆಳೆಗಾರರ ಸಭೆ: ಬೆಳಗಾವಿಯ ಸುವರ್ಣಸೌಧದಲ್ಲೇ ಹೊಡೆದಾಡಿಕೊಂಡ ರೈತರು!

ಕಬ್ಬು ಬೆಳೆಗಾರರ ಸಭೆ: ಬೆಳಗಾವಿಯ ಸುವರ್ಣಸೌಧದಲ್ಲೇ ಹೊಡೆದಾಡಿಕೊಂಡ ರೈತರು!

2

ಮದುವೆಯಾದ ಐದೇ ದಿನಕ್ಕೆ ನವವಿವಾಹಿತರು ಭೀಕರ ಅಪಘಾತದಲ್ಲಿ ಸಾವು

3

8000mAh ಬ್ಯಾಟರಿ, 90Hz ಡಿಸ್‌ಪ್ಲೇ! ಬಜೆಟ್‌ ಬೆಲೆಗೆ ಹಾನರ್‌ನ ಹೊಸ ಮಿನಿ ಟ್ಯಾಬ್ಲೆಟ್ ಬಿಡುಗಡೆ

4

"ನನಗೆ ಆ ಯಮ್ಮ ಡೈರೆಕ್ಟ್‌ ಫೋನ್‌ ಮಾಡ್ಲಿ ಸರ್‌.. ದುಡ್ಡು ತಂದು ಬಿಸಾಕ್ತೀನಿ” – ಧನ್ವೀರ್‌ ಆಡಿಯೋ ವೈರಲ್

5

ಇನ್‌ಸ್ಟಾದಲ್ಲಿ ಶ್ರೀಮಂತಿಕೆಯ ನಾಟಕ! 20 ಮಹಿಳಾ ಪೊಲೀಸರಿಗೆ ಮದುವೆ ಆಸೆ ತೋರಿಸಿ ₹24 ಲಕ್ಷ ನಾಮ ಹಾಕಿದ ಚೋರ

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಬೆಂಗಳೂರು: ಕಾಂಗ್ರೆಸ್ ಪಕ್ಷದ ವತಿಯಿಂದ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಚುನಾವಣಾ ವ್ಯವಸ್ಥೆಗಳನ್ನು ಖಂಡಿಸಿ ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳುತ್ತಿರುವ ಹೋರಾಟಗಳ ಕುರಿತು ಕೆಪಿಸಿಸಿ ಮುಖಂಡ ಬಿ.ಕೆ. ಹರಿಪ್ರಸಾದ್ ಅವರು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ನವೆಂಬರ್ 1ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಮತ್ತು ನವೆಂಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನವೆಂಬರ್ 1ರಂದು ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಕರ್ನಾಟಕದಿಂದ ಸಹಸ್ರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಅಂದೇ ಕನ್ನಡ ರಾಜ್ಯೋತ್ಸವವಿರುವ ಕಾರಣ ರಾಜ್ಯದ ಸಚಿವರುಗಳು ದೆಹಲಿ ಪ್ರತಿಭಟನೆಗೆ ಗೈರುಹಾಜರಾಗಲಿದ್ದು, ಅವರಿಗೆ ವಿನಾಯಿತಿ ನೀಡಲಾಗಿದೆ. ಇದರ ಮುಂದುವರಿದ ಭಾಗವಾಗಿ ನವೆಂಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 'ಇಂಡಿಯಾ' (INDIA) ಒಕ್ಕೂಟದ ಎಲ್ಲಾ ಸದಸ್ಯರ ಸಹಯೋಗದೊಂದಿಗೆ ಮತ್ತೊಂದು ದೊಡ್ಡ ಮಟ್ಟದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಸಕ್ರಿಯ ಮುಖಂಡರು ಈ ಹೋರಾಟಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ.

ಜಿಲ್ಲಾ ಮತ್ತು ಬ್ಲಾಕ್ ಮಟ್ಟದಲ್ಲಿ 'ವೋಟ್ ಬಚಾವು' ಅಭಿಯಾನ:

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸೂಚನೆಯಂತೆ ಮುಂದಿನ ಎರಡು ತಿಂಗಳ ಕಾಲ ರಾಜ್ಯದಾದ್ಯಂತ ನಿರಂತರವಾಗಿ ವಿಶೇಷ ಕಾರ್ಯಕ್ರಮಗಳು ಜರುಗಲಿವೆ. 'ದೇಶ ಬಚಾವು, ವೋಟ್ ಬಚಾವು' (ಮತ ರಕ್ಷಣೆ) ಹೆಸರಿನಲ್ಲಿ ನಡೆಯುವ ಈ ಆಂದೋಲನವು ಎಲ್ಲಾ ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಅನುಷ್ಠಾನಗೊಳ್ಳಲಿದೆ. ಪ್ರತಿ ಬ್ಲಾಕ್‌ನಲ್ಲಿ ಮಹಾತ್ಮ ಗಾಂಧೀಜಿ ಅಥವಾ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳ ಮುಂದೆ ಧರಣಿ ನಡೆಸಿ, ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಲು ಸೂಚನೆ ನೀಡಲಾಗಿದೆ.

ಖರ್ಗೆ ಹೇಳಿಕೆ ಸಮರ್ಥನೆ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ:

ಪ್ರಧಾನಿ ನರೇಂದ್ರ ಮೋದಿ ಅವರ ತಂದೆಯ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಯು ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಕುರಿತು ಪ್ರತಿಕ್ರಿಯಿಸಿದ ಬಿ.ಕೆ. ಹರಿಪ್ರಸಾದ್, "ಬೆಕಿ ಇಲ್ಲದೆ ಹೊಗೆಯಾಡಲ್ಲ" ಎಂಬಂತೆ ಬಿಜೆಪಿಗರ ಸಿದ್ಧಾಂತಕ್ಕೆ ತಕ್ಕಂತೆ ಖರ್ಗೆ ಅವರು ತಿರುಗೇಟು ನೀಡಿದ್ದಾರೆ ಎಂದರು. ಆರ್.ಎಸ್.ಎಸ್ ಮತ್ತು ಬಿಜೆಪಿ ನಾಯಕರು 'ಮಾತೃಭೂಮಿ' ಎನ್ನದೆ 'ಪಿತೃಭೂಮಿ, ಪುಣ್ಯಭೂಮಿ' ಎನ್ನುತ್ತಾರೆ. ಪಿತೃಭೂಮಿ ಎನ್ನುವವರು ತಮ್ಮ ಪಿತೃಗಳ ಬಗ್ಗೆಯೂ ಯೋಚಿಸಬೇಕು ಎಂದಿರುವುದು ಯಾವುದೇ ವೈಯಕ್ತಿಕ ಟೀಕೆಯಲ್ಲ, ಬದಲಿಗೆ ಸೈದ್ಧಾಂತಿಕ ಚರ್ಚೆಯಾಗಿದೆ ಎಂದು ಸಮರ್ಥಿಸಿಕೊಂಡರು.

ಇದೇ ವೇಳೆ ಮಾತನಾಡುತ್ತಾ, ಬಿಜೆಪಿ ಮುಖಂಡರು ಈ ಹಿಂದೆ ರಾಹುಲ್ ಗಾಂಧಿ ಹಾಗೂ ಇಂದಿರಾ ಗಾಂಧಿ ಅವರ ವಿರುದ್ಧ ಬಳಸಿದ ಅತ್ಯಾಚಾರಿ ಹಾಗೂ ಅವಹೇಳನಕಾರಿ ಪದಗಳ ಪದಪಟ್ಟಿ ಬಿಚ್ಚಿಟ್ಟ ಅವರು, ಬಿಜೆಪಿ ನಾಯಕರಿಗೆ ಇತರರನ್ನು ಟೀಕಿಸುವ ನೈತಿಕ ಹಕ್ಕಿಲ್ಲ ಎಂದು ತಿರುಗೇಟು ನೀಡಿದರು. ಒಟ್ಟಾರೆಯಾಗಿ ಕೇಂದ್ರ ಸರ್ಕಾರದ ವಿರುದ್ಧದ ರಾಜಕೀಯ ಹೋರಾಟವನ್ನು ರಾಜ್ಯಾದ್ಯಂತ ತೀವ್ರಗೊಳಿಸಲು ಕಾಂಗ್ರೆಸ್ ಪಕ್ಷ ಸಜ್ಜಾಗಿದೆ.
 

Add Zee News as a Preferred Source
TAGS:
Kannada News