SOCIAL MEDIA

Newsletter

PARTNER SITES
Select Language Select State

ಸ್ಟಿಂಗ್ ಆಪರೇಷನ್ ಹಿಂದೆ ಕಾಂಗ್ರೆಸ್‌ನ ಧುರೀಣರೇ ಇದ್ದಾರೆ : ಶಾಸಕ ಚನ್ನಬಸಪ್ಪ ಗಂಭೀರ ಆರೋಪ

ರಾಜ್ಯದಲ್ಲಿ ಇತ್ತೀಚೆಗೆ ಚರ್ಚೆಯಾಗುತ್ತಿರುವ ಫೋನ್ ಕದ್ದಾಲಿಕೆ ಮತ್ತು ಸ್ಟಿಂಗ್ ಆಪರೇಷನ್ ಪ್ರಕರಣಗಳ ಬಗ್ಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಗಂಭೀರ ಆರೋಪ ಮಾಡಿದ್ದು, ಇದರ ಹಿಂದೆ ಕಾಂಗ್ರೆಸ್ ನಾಯಕರೇ ಇದ್ದಾರೆ ಎಂದು ಕಿಡಿಕಾರಿದ್ದಾರೆ.

Written By Krishna NK
Published: Oct 17, 2026, 04:03 PM IST | Updated: Oct 17, 2026, 04:05 PM IST
Image Credit: SN Channabasappa
Join

ಶಿವಮೊಗ್ಗ: ಹನಿಟ್ರ್ಯಾಪ್ ಮತ್ತು ಸ್ಟಿಂಗ್ ಆಪರೇಷನ್ ಮೂಲಕ ಸರ್ಕಾರದ ಸಚಿವರು ಹಾಗೂ ಶಾಸಕರ ಪರಿಸ್ಥಿತಿ ಏನಾಗಿದೆ ಎಂಬುದು ಜನರ ಮುಂದೆ ಬರ್ತಿದೆ. ಇದರ ಹಿಂದೆ ಕಾಂಗ್ರೆಸ್‌ನ ಧುರೀಣರೇ ಅನೇಕರಿದ್ದಾರೆ ಎಂಬುದು ಚರ್ಚೆಯಾಗುತ್ತಿದ್ದು, ಮಹಿಳಾ ಶಾಸಕರು ಸೇರಿದಂತೆ ಎಲ್ಲರನ್ನೂ ಇಂದು ಅನುಮಾನದಿಂದ ನೋಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಎಸ್‌. ಎನ್‌. ಚನ್ನಬಸಪ್ಪ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರು ಇದ್ದಾರೆ ಮತ್ತು ಇದರ ಹಿಂದೆ ಯಾರ ಕೈವಾಡವಿದೆ ಎಂಬುದರ ಬಗ್ಗೆ ಸಮಗ್ರ ತನಿಖೆಯಾಗಬೇಕು. ಸತ್ಯಾಂಶವನ್ನು ರಾಜ್ಯದ ಜನತೆಯ ಮುಂದೆ ತೆರೆದಿಡಬೇಕು. ಸ್ವತಃ ಕಾಂಗ್ರೆಸ್ ಶಾಸಕರೇ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಬಗ್ಗೆ ಸರ್ಕಾರ ಕೂಡಲೇ ಗಂಭೀರವಾಗಿ ಯೋಚಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಸಿಬಿಐ ತನಿಖೆಯಿರಲಿ ಅಥವಾ ಬೇರೆ ತನಿಖೆ ನಡೆಸಿ
ಕುಮಾರಸ್ವಾಮಿ ಅವರು ಪೊಲೀಸ್ ಇಲಾಖೆ ಮುಂದೆ ಒತ್ತಾಯಿಸಿರುವಂತೆ, ಈ ಪ್ರಕರಣವನ್ನು ಸಿಬಿಐ ಅಥವಾ ಇನ್ಯಾವುದೇ ತನಿಖೆಗೆ ಒಳಪಡಿಸಿ ಸತ್ಯ ಹೊರಹಾಕಿ. ಒಂದು ವೇಳೆ ಕಾಂಗ್ರೆಸ್‌ಗೆ ಸಿಬಿಐ ಮೇಲೆ ನಂಬಿಕೆ ಇಲ್ಲದಿದ್ದರೆ, ಅವರಿಗೆ ಯಾವುದರ ಮೇಲೆ ನಂಬಿಕೆ ಇದೆಯೋ ಅದರ ಮೂಲಕವೇ ತನಿಖೆ ನಡೆಸಿ ಜನರಿಗೆ ನಿಜಾಂಶ ತಿಳಿಸಲಿ ಎಂದು ಆಗ್ರಹಿಸಿದರು.

ಕಾಂಗ್ರೆಸ್‌ನಿಂದಲೇ ಅರಾಜಕತೆ
ಕಾಂಗ್ರೆಸ್ ಪಕ್ಷ ದೇಶ ಹಾಗೂ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಅಧಿಕಾರದಲ್ಲಿರುವವರೇ ಕಾಲೆಳೆಯುತ್ತಿರುವುದರಿಂದ ಜನಜೀವನ ಮತ್ತು ಸರ್ಕಾರಿ ವ್ಯವಸ್ಥೆ ಕುಸಿದು ಬೀಳುತ್ತಿದೆ. ಸತ್ಯ ಸಂಗತಿ ಹೇಳಿದ ಸಚಿವ ರಾಜಣ್ಣ ಅವರ ರಾಜೀನಾಮೆ ಪಡೆಯಲಾಯಿತು ವಿನಃ ಹನಿಟ್ರ್ಯಾಪ್ ಮಾಡಿದವರ ಬಗ್ಗೆ ಯಾವುದೇ ತನಿಖೆಯಾಗಲಿಲ್ಲ ಎಂದು ಟೀಕಿಸಿದರು. ಕೊನೆಯಲ್ಲಿ, ಕಾಂಗ್ರೆಸ್‌ನಲ್ಲಿ ಎಷ್ಟೇ ಜನ ಮುಖ್ಯಮಂತ್ರಿಗಳ ಬದಲಾವಣೆ ಆದರೂ ರಾಜ್ಯದಲ್ಲಿ 2028ಕ್ಕೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಚನ್ನಬಸಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ZEENEWS TRENDING STORIES