SOCIAL MEDIA

Newsletter

PARTNER SITES
Select Language Select State

ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳಿಂದ ಮೈಸೂರು ದಸರಾ ಉದ್ಘಾಟನೆ : ಸಿಎಂ ಅಧಿಕೃತ ಘೋಷಣೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಕೊಪ್ಪಳದ ಗವಿಮಠದ ಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯ ವಿಧಾನಸಭೆಯಲ್ಲಿ ಗುರುವಾರ ಅಧಿಕೃತವಾಗಿ ಘೋಷಿಸಿದರು.. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..

Reported By Krishna NK Written By Krishna NK
Published: Sep 24, 2026, 09:27 PM IST | Updated: Sep 24, 2026, 09:32 PM IST
Image Credit: Mysore Dasara 2026
Join

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕೊಪ್ಪಳದ ಶ್ರೀ ಗವಿಮಠದ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಆಹ್ವಾನಿಸಿದ್ದು, ಈ ಬಾರಿಯ ನಾಡಹಬ್ಬವನ್ನು ಶ್ರೀಗಳೇ ಉದ್ಘಾಟಿಸಲಿದ್ದಾರೆ ಎಂದು ರಾಜ್ಯ ವಿಧಾನಸಭೆಯಲ್ಲಿ ಗುರುವಾರ ಘೋಷಿಸಿದರು.

ವಿಧಾನಸಭೆಯಲ್ಲಿ ನಡೆದ ಬರಗಾಲ ಹಾಗೂ ರಾಜ್ಯದ ಪ್ರಚಲಿತ ವಿಷಯಗಳ ಮೇಲಿನ ಚರ್ಚೆಗೆ ಉತ್ತರಿಸುವ ಸಂದರ್ಭದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ನಾಡಹಬ್ಬದ ಶುಭ ಸಂದರ್ಭದಲ್ಲಿ ಉಭಯ ಸದನಗಳ ಎಲ್ಲಾ ಶಾಸಕರು, ಸಚಿವರು ಹಾಗೂ ಜನಪ್ರತಿನಿಧಿಗಳನ್ನು ಆಹ್ವಾನಿಸಿದರು.

ಶ್ರೀಗಳಿಂದ ಆಹ್ವಾನ ಸ್ವೀಕಾರಸದನವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಬೇಕೆಂದು ಕೊಪ್ಪಳದ ಗವಿಮಠದ ಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಅವರಿಗೆ ಸರ್ಕಾರದ ಪರವಾಗಿ ಆಹ್ವಾನ ಪತ್ರವನ್ನು ರವಾನಿಸಲಾಗಿದೆ. ಅಷ್ಟೇ ಅಲ್ಲದೆ, ಇಂದು ಬೆಳಿಗ್ಗೆ ಸ್ವತಃ ನಾನೇ ಅವರೊಂದಿಗೆ ದೂರವಾಣಿ ಮೂಲಕ ಸುದೀರ್ಘವಾಗಿ ಚರ್ಚಿಸಿದ್ದು, ನಮ್ಮ ಆಹ್ವಾನಕ್ಕೆ ಶ್ರೀಗಳು ಅತ್ಯಂತ ಸಂತೋಷದಿಂದ ಸಮ್ಮತಿ ಸೂಚಿಸಿದ್ದಾರೆ" ಎಂದು ತಿಳಿಸಿದರು.

ಸದನದ ಸದಸ್ಯರಿಗೆ ಮುಕ್ತ ಆಹ್ವಾನ
ಮುಂದಿನ ತಿಂಗಳು ವಿಜೃಂಭಣೆಯಿಂದ ನಡೆಯಲಿರುವ ನಾಡಹಬ್ಬ ದಸರಾ ಉತ್ಸವದಲ್ಲಿ ಎಲ್ಲರೂ ಭಾಗವಹಿಸಬೇಕೆಂದು ಕೋರಿದ ಅವರು, "ಮುಂದಿನ ತಿಂಗಳು ನಮ್ಮ ನಾಡಹಬ್ಬ ದಸರಾ ಸಮೀಪಿಸುತ್ತಿದೆ. ಈ ವರ್ಷದ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಶಾಸಕಾಂಗದ ಉಭಯ ಸದನಗಳ ಎಲ್ಲಾ ಗೌರವಾನ್ವಿತ ಸದಸ್ಯರನ್ನು ನಾನು ಆತ್ಮೀಯವಾಗಿ ಆಹ್ವಾನಿಸುತ್ತಿದ್ದೇನೆ. ಎಲ್ಲರೂ ತಪ್ಪದೇ ಆಗಮಿಸಿ ಈ ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಗಬೇಕು" ಎಂದು ವಿನಂತಿಸಿಕೊಂಡರು.

ಉತ್ತರ ಕರ್ನಾಟಕ ಭಾಗದಲ್ಲಿ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸುತ್ತಿರುವ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳು ಮೈಸೂರು ದಸರಾ ಉದ್ಘಾಟಿಸುತ್ತಿರುವುದು ನಾಡಿನ ಜನತೆಯಲ್ಲಿ ಹಾಗೂ ವಿಶೇಷವಾಗಿ ಗವಿಮಠದ ಭಕ್ತರಲ್ಲಿ ಹೆಚ್ಚಿನ ಹರ್ಷ ತಂದಿದೆ.

Add Zee News as a Preferred Source
TAGS:

About the Author

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ZEENEWS TRENDING STORIES