• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮೈಸೂರು ದಸರಾ ವೈಭವ ಶುರು : ಅರಮನೆಯಲ್ಲಿ ಇಂದು ಸಾಂಪ್ರದಾಯಿಕ ಫಿರಂಗಿ ಪೂಜೆ

ಮೈಸೂರು ದಸರಾ ವೈಭವ ಶುರು : ಅರಮನೆಯಲ್ಲಿ ಇಂದು ಸಾಂಪ್ರದಾಯಿಕ ಫಿರಂಗಿ ಪೂಜೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯ ಕುಶಾಲತೋಪು ತಾಲೀಮಿಗೆ ಅಧಿಕೃತ ಚಾಲನೆ ದೊರೆತಿದ್ದು, ಅರಮನೆ ಆವರಣದಲ್ಲಿ ಫಿರಂಗಿ ಗಾಡಿಗಳಿಗೆ ಮೈಸೂರು ನಗರ ಪೊಲೀಸ್ ಇಲಾಖೆಯಿಂದ ಸಾಂಪ್ರದಾಯಿಕ ಪೂಜೆ ನೆರವೇರಿಸಲಾಗಿದೆ.. ಹೆಚ್ಚಿನ ವಿವರಗಳು ಇಲ್ಲಿವೆ.

Reported ByKrishna NKEdited ByKrishna NK
Published: Sep 25, 2026, 07:58 PM IST|Updated: Sep 25, 2026, 08:03 PM IST
joinshare
ಮೈಸೂರು ದಸರಾ ವೈಭವ ಶುರು : ಅರಮನೆಯಲ್ಲಿ ಇಂದು ಸಾಂಪ್ರದಾಯಿಕ ಫಿರಂಗಿ ಪೂಜೆ
Image Credit: Mysore Dasara utsav

About the Author

Krishna NK

Krishna NK

ಕೃಷ್ಣಕುಮಾರ್‌ ಎನ್‌.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್‌' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ "ಜೀ ನ್ಯೂಸ್‌ ಕನ್ನಡ" ವೆಬ್‌ ಸೈಟ್‌ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Read More

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಮೈಸೂರು : ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ದಸರಾ ಜಂಬೂಸವಾರಿ ವೇಳೆ ಸಿಡಿಸಲಿರುವ ಕುಶಾಲತೋಪಿಗೆ ಸಂಬಂಧಿಸಿದಂತೆ ಅರಮನೆ ಆವರಣದಲ್ಲಿ ಇಂದು ಸಾಂಪ್ರದಾಯಿಕ ಪೂಜೆ ನೆರವೇರಿಸಲಾಗಿದೆ. ಮೂರು ಹಂತಗಳಲ್ಲಿ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲು ಪೊಲೀಸ್ ಇಲಾಖೆ ಸಜ್ಜಾಗಿದ್ದು, ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿರುವ ಫಿರಂಗಿ ಗಾಡಿಗಳಿಗೆ ಇಂದು ಸಾಂಪ್ರದಾಯಿಕ ಪೂಜೆ ನೆರವೇರಿಸಲಾಯಿತು. ಮೈಸೂರು ನಗರ ಪೊಲೀಸ್ ಇಲಾಖೆ ವತಿಯಿಂದ ನಡೆದ ಪೂಜಾ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿ ಸುಂದರರಾಜ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ದಸರಾ ಜಂಬೂಸವಾರಿ ದಿನ ಫಿರಂಗಿ ಗಾಡಿಗಳ ಮೂಲಕ ಒಟ್ಟು 21 ಸುತ್ತು ಕುಶಾಲತೋಪು ಸಿಡಿಸಲಾಗುತ್ತದೆ. ಕುಶಾಲತೋಪಿನ ಶಬ್ದಕ್ಕೆ ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ ಆನೆಗಳು ಹಾಗೂ ಕುದುರೆಗಳು ಹೊಂದಿಕೊಳ್ಳುವಂತೆ ಮುಂಚಿತವಾಗಿ ತಾಲೀಮು ನಡೆಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಕುಶಾಲತೋಪು ಸಿಡಿಸುವ ತಾಲೀಮಿಗೆ ಸಜ್ಜಾಗಿದ್ದಾರೆ. ಸುಮಾರು 35 ಮಂದಿ ಸಿಬ್ಬಂದಿಯ ತಂಡ ಈ ಕಾರ್ಯದಲ್ಲಿ ಭಾಗವಹಿಸಲಿದ್ದು, ಶೀಘ್ರದಲ್ಲೇ ರಿಹರ್ಸಲ್ ಆರಂಭವಾಗಲಿದೆ. ಜಂಬೂಸವಾರಿ ದಿನ ಕುಶಾಲತೋಪು ಸಿಡಿಸುವ ಜವಾಬ್ದಾರಿಯನ್ನು ನಿರ್ವಹಿಸಲು ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ತಾಲೀಮಿನ ವೇಳೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸಿ, ಹಂತ ಹಂತವಾಗಿ ರಿಹರ್ಸಲ್ ನಡೆಸಲು ಇಲಾಖೆ ಮುಂದಾಗಿದೆ ಅಂತಾರೆ ಅಧಿಕಾರಿಗಳು.

ಇನ್ನು ಕುಶಾಲತೋಪು ಸಿಡಿಸುವ ತಾಲೀಮನ್ನು ಒಟ್ಟು ಮೂರು ಹಂತಗಳಲ್ಲಿ ನಡೆಸಲು ಪೊಲೀಸ್ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಹಂತ ಹಂತವಾಗಿ ತಾಲೀಮು ನಡೆಸುವ ಮೂಲಕ ಸಿಬ್ಬಂದಿ, ಫಿರಂಗಿ ಗಾಡಿಗಳು ಹಾಗೂ ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ ಆನೆ ಮತ್ತು ಕುದುರೆಗಳ ನಡುವೆ ಅಗತ್ಯ ಹೊಂದಾಣಿಕೆ ಮೂಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಒಟ್ಟಿನಲ್ಲಿ ದಸರಾ ಜಂಬೂಸವಾರಿಯ ಪ್ರಮುಖ ಸಾಂಪ್ರದಾಯಿಕ ಕಾರ್ಯಕ್ರಮಗಳಲ್ಲಿ ಒಂದಾಗಿರುವ ಕುಶಾಲತೋಪು ಸಿಡಿಸುವಿಕೆಗೆ ಪೊಲೀಸ್ ಇಲಾಖೆ ಸಿದ್ಧತೆ ಆರಂಭಿಸಿದೆ. ಅರಮನೆ ಆವರಣದಲ್ಲಿ ಫಿರಂಗಿ ಗಾಡಿಗಳಿಗೆ ಪೂಜೆ ನೆರವೇರಿಸುವ ಮೂಲಕ ಈ ವರ್ಷದ ಕುಶಾಲತೋಪು ತಾಲೀಮಿಗೆ ಅಧಿಕೃತ ಚಾಲನೆ ದೊರೆತಂತಾಗಿದೆ.

Add Zee News as a Preferred Source
TAGS:
Kannada News